ಚುನಾವಣೆಗೂ ಮುನ್ನ ಸಿಎಎ ಅಸ್ತ್ರ ಪ್ರಯೋಗಿಸಿದ ಮೋದಿ ಸರ್ಕಾರ

ಚುನಾವಣೆಗೂ ಮುನ್ನ ಸಿಎಎ ಅಸ್ತ್ರ ಪ್ರಯೋಗಿಸಿದ ಮೋದಿ ಸರ್ಕಾರ

ನವದೆಹಲಿ: ಲೋಕಸಭೆ ಚುನಾಚಣೆಗೆ ಮುನ್ನ ಮೋದಿ ಸರ್ಕಾರ ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಮಾಡಿ ಅಧಿಸೂಚನೆ ಹೊರಡಿಸಿದೆ. 2019ರಲ್ಲಿ ಪೌರತ್ವ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿಗಳು ಸಹಿ ಹಾಕಿದ ನಂತರ ದೇಶದಲ್ಲಿ ಭಾರೀ ಪ್ರತಿಭಟನೆ ನಡೆದ ಕಾರಣ ಇಲ್ಲಿಯವರೆಗೆ ಸಿಎಎ ಜಾರಿಯಾಗಿರಲಿಲ್ಲ. ಈ ಹಿಂದಿನ ಚುನಾವಣೆಯ ಸಂದರ್ಭದಲ್ಲಿ ಸಿಎಎ ಜಾರಿಗೊಳಿಸುತ್ತೇವೆ ಎಂದು ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಪ್ರಕಟಿಸಿತ್ತು.

ಈಗ ಲೋಕಸಭಾ ಚುನಾವಣೆಗೂ ಮುನ್ನ ಸಿಎಎ ಜಾರಿಗೊಳಿಸುವ ಮೂಲಕ ತನ್ನಲ್ಲಿದ್ದ ದೊಡ್ಡ ಅಸ್ತ್ರವನ್ನು ಬಿಜೆಪಿ ಪ್ರಯೋಗಿಸಿದೆ. ಸಿಎಎ ನಿಯಮ ಪ್ರಕಟಗೊಂಡ ಬೆನ್ನಲ್ಲೇ ಸರ್ಕಾರದ ಇ-ಗೆಜೆಟ್‌ ವೆಬ್‌ಸೈಟ್‌ ಕ್ರ್ಯಾಶ್‌ ಆಗಿದೆ. ಭಾರೀ ಸಂಖ್ಯೆಯಲ್ಲಿ ಜನರು ವೆಬ್‌ಸೈಟಿಗೆ ಭೇಟಿ ನೀಡಿದ ಪರಿಣಾಮ ವೆಬ್‌ಸೈಟ್‌ ಪುಟ ಓಪನ್‌ ಆಗುತ್ತಿಲ್ಲ.

2019ರ ಡಿಸೆಂಬರ್ 11ರಂದು ಸಂಸತ್​ನಲ್ಲಿ ಸಿಎಎ ಅಂಗೀಕಾರಗೊಂಡಿತ್ತು. ಇದೀಗ ಸಿಎಎ ಜಾರಿಗೊಳಿಸಿ ಅಧಿಸೂಚನೆ ಹೊರಬಿದ್ದಿದ್ದು, 2014ರ ಡಿ.31ಕ್ಕೂ ಮುನ್ನ ಭಾರತಕ್ಕೆ ಆಗಮಿಸಿದವರಿಗೆ ನಿಯಮ ಅನ್ವಯವಾಗುತ್ತದೆ. ಈ ಮೊದಲು 11 ವರ್ಷ ಭಾರತದಲ್ಲೇ ನೆಲೆಸಿದವರಿಗೆ ಅವಕಾಶವಿತ್ತು. ಆದ್ರೆ, ಈಗ ತಿದ್ದುಪಡಿ ಮಾಡಿ 11 ವರ್ಷದಿಂದ ಈಗ 5 ವರ್ಷಕ್ಕೆ ಇಳಿಸಲಾಗಿದ್ದು, ಮುಸ್ಲಿಮೇತರ ವ್ಯಕ್ತಿಗಳು 6 ವರ್ಷ ಕಾಲ ಅಥವಾ ಅದಕ್ಕೂ ಮೇಲ್ಪಟ್ಟು ಭಾರತದಲ್ಲೇ ವಾಸ ಮಾಡಿದ್ದರೆ ಅಂಥವರಿಗೆ ಪೌರತ್ವ ನೀಡಲಾಗುತ್ತದೆ. ಕ್ರಿಶ್ಚಿಯನ್, ಸಿಖ್, ಬೌದ್ಧ, ಜೈನ್​, ಪಾರ್ಸಿಗಳಿಗೆ ಪೌರತ್ವ ನೀಡಲಾಗುತ್ತದೆ.

ಸಿಎಎ ಜಾರಿಗೊಳಿಸಿ ಅಧಿಸೂಚನೆ ಹೊರಡಿಸಿರು ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ದೆಹಲಿಯ ಶಾಹೀನ್ ಬಾಗ್ ಸೇರಿ ಹಲವೆಡೆ ಬಿಗಿ ಪೊಲೀಸ್ ಬಂದೋಬಸ್ತ್‌ ಮಾಡಲಾಗಿದೆ. ಯಾಕಂದ್ರೆ, ಸಿಎಎ ಜಾರಿಗೊಳಿಸುವ ಸಂಬಂಧ ಈ ಹಿಂದೆ ದೇಶದಲ್ಲಿ ಭಾರೀ ಪ್ರತಿಭಟನೆಗಳು ನಡೆದಿದ್ದವು. ಇದರಿಂದ ಇದೀಗ ಎಲ್ಲೆಡೆ ಭದ್ರತೆ ಕೈಗೊಳ್ಳಲಾಗಿದೆ.

2019ರಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಸಂಸತ್ತಿನಲ್ಲಿ ಮಂಡಿಸಿತ್ತು. ಪ್ರತಿಪಕ್ಷಗಳು ಈ ಕಾಯ್ದೆಯನ್ನು ವಿರೋಧಿಸಿತ್ತು. ಅಲ್ಲದೇ ಭಾರತದಲ್ಲಿನ ಮುಸ್ಲಿಮರ ಪೌರತ್ವ ಕಿತ್ತುಕೊಳ್ಳಲಾಗುತ್ತದೆ ಅನ್ನೋ ಉಹಾಪೋಹಗಳು ಈ ಕಾಯ್ದೆ ಜೊತೆಗೆ ಹಬ್ಬಿತ್ತು. ಹೀಗಾಗಿ ಭಾರಿ ಪ್ರತಿಭಟನೆಗಳು ದೇಶಾದ್ಯಂತ ನಡೆದಿತ್ತು. ಈ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಆದರೆ ಭಾರತದಲ್ಲಿನ ಮುಸ್ಲಿಮರ ಅಥವಾ ಇನ್ಯಾವುದೇ ಸಮುದಾಯದ ನಾಗರೀತರ ಪೌರತ್ವಕ್ಕೆ ಈ ಕಾಯ್ದೆಯಿಂದ ಧಕ್ಕೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಪ್ಟಪಡಿಸಿತ್ತು.

Previous Post
ಜನರು ರಾಮನ ಆದರ್ಶ ಪಾಲಿಸಿದರೆ ಭಾರತ ರಾಮರಾಜ್ಯವಾಗಲಿದೆ – ಪೇಜಾವರ್ ಶ್ರೀ
Next Post
ಅಂಗನವಾಡಿ ಕಾರ್ಯಕರ್ತೆಯರು-ಸಹಾಯಕಿಯರು, ಆಶಾ ಕಾರ್ಯಕರ್ತೆಯರ, ವಿಕಲ ಚೇತನರ ಬೇಡಿಕೆಗಳಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು

Recent News