ನವದೆಹಲಿ, ಏ. 20 : ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರಚಾರ ನಡೆಸಲು ಮಧ್ಯಂತರ ಜಾಮೀನು ನೀಡುವಂತೆ ಕೋರಿ ಮಾಜಿ ಡಿಸಿಎಂ ಮನೀಶ್ ಸಿಸೋಡಿಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ರೋಸ್ ಅವೆನ್ಯೋ ಕೋರ್ಟ್ ಆದೇಶ ಕಾಯ್ದಿರಿಸಿದೆ. ಏಪ್ರೀಲ್ 30 ರಂದು ತನ್ನ ತೀರ್ಪು ಪ್ರಕಟಿಸಲಿದೆ.
ದೆಹಲಿಯ ಹೊಸ ಮದ್ಯ ನೀತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೀಶ್ ಸಿಸೋಡಿಯ ಅವರನ್ನು ಇಡಿ ಬಂಧಿಸಿದ್ದಯ ಸದ್ಯ ಅವರಯ ನ್ಯಾಯಂಗ ಬಂಧನದಲ್ಲಿದ್ದು ಇದೇ ಪ್ರಕರಣದಲ್ಲಿ ಸಿಬಿಐ ಕೂಡಾ ತನಿಖೆ ನಡೆಸುತ್ತಿದೆ. ಈ ಹಿಂದೆ ಎರಡು ಪ್ರಕರಣಗಳಲ್ಲಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾ ಆದ ಹಿನ್ನಲೆ ಚುನಾವಣೆ ಪ್ರಚಾರಕ್ಕೆ ಅವಕಾಶ ಕೋರಿ ಹೊಸ ಅರ್ಜಿ ಸಲ್ಲಿಸಿದ್ದಾರೆ.

ವಿಚಾರಣೆ ವೇಳೆ ವಾದ ಮಂಡಿಸಿದ ಸಿಬಿಐ ಪ್ರಾಸಿಕ್ಯೂಟರ್ ಪಂಕಜ್ ಗುಪ್ತಾ, ಜಾಮೀನು ಅರ್ಜಿಯನ್ನು ವಿರೋಧಿಸಿದರು ಮತ್ತು ಪಿಎಂಎಲ್‌ಎ ಅಡಿಯಲ್ಲಿ ಜಾಮೀನು ಮಂಜೂರು ಮಾಡುವ ಕಠಿಣತೆಯನ್ನು ಸಿಸೋಡಿಯಾ ತೃಪ್ತಿಪಡಿಸುವುದಿಲ್ಲ ಎಂದು ಹೇಳಿದರು. ಸಿಸೋಡಿಯಾ ಅವರು “ರಾಜಕೀಯ ಪ್ರಭಾವ” ಹೊಂದಿರುವ ಪ್ರಬಲ ವ್ಯಕ್ತಿ, ಅವರಿಗೆ ಚುನಾವಣಾ ಹೊತ್ತಲ್ಲಿ ಜಾಮೀನು ನೀಡಬಾರದು, ಅವರು ಸಾಕ್ಷ್ಯಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.
ಜಾರಿ ನಿರ್ದೇಶನಾಲಯದ (ಇಡಿ) ಪರ ವಿಶೇಷ ವಕೀಲ ಜೋಹೆಬ್ ಹೊಸೈನ್ ವಾದ ಮಂಡಿಸಿ, ಪ್ರಕರಣದಲ್ಲಿ ಸಿಸೋಡಿಯಾ ಪ್ರಮುಖ ವ್ಯಕ್ತಿಯಾಗಿದ್ದಾರೆ, ಪ್ರಕರಣ ತನಿಖೆ ನಡೆಯುತ್ತಿರುವ ಈ ಹಂತದಲ್ಲಿ ಪ್ರಭಾವಿ ವ್ಯಕ್ತಿಯಾಗಿರುವ ಅವರಿಗೆ ಜಾಮೀನು ನೀರಬಾರದು ಎಂದು ಮನವಿ ಮಾಡಿದರು. ವಾದ ಪ್ರತಿವಾದ ಆಲಿಸಿದ ಕೋರ್ಟ್ ಸದ್ಯ ಆದೇಶ ಕಾಯ್ದಿರಿಸಿದೆ.