ಜವಾಹರಲಾಲ್ ನೆಹರು 60 ನೇ ಪುಣ್ಯತಿಥಿ ಮೋದಿ, ಖರ್ಗೆ ಸೇರಿ ಗಣ್ಯರಿಂದ ನಮನ

ಜವಾಹರಲಾಲ್ ನೆಹರು 60 ನೇ ಪುಣ್ಯತಿಥಿ ಮೋದಿ, ಖರ್ಗೆ ಸೇರಿ ಗಣ್ಯರಿಂದ ನಮನ

ನವದೆಹಲಿ: ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರು 60 ನೇ ಪುಣ್ಯತಿಥಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಗೌರವ ನಮನ ಅರ್ಪಿಸಿದ್ದಾರೆ. ಸೋನಿಯಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್‌ ನಾಯಕರು ಪುಷ್ಪ ನಮನ ಸಲ್ಲಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಎಕ್ಸ್‌ ಖಾತೆಯಲ್ಲಿ, ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ ಪುಣ್ಯತಿಥಿಯಂದು ಅವರಿಗೆ ಗೌರವ ಸಲ್ಲಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ. ಇದಕ್ಕೂ ಮುನ್ನ ನೆಹರೂ ಅವರ ಪುಣ್ಯತಿಥಿಯಂದು ಕಾಂಗ್ರೆಸ್ ನಾಯಕರು ಪುಷ್ಪ ನಮನ ಸಲ್ಲಿಸಿದರು. ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ಹಲವು ಗಣ್ಯರು ರಾಷ್ಟ್ರ ರಾಜಧಾನಿಯಲ್ಲಿನ ಅವರ ಸ್ಮಾರಕ ಶಾಂತಿವನಕ್ಕೆ ತೆರಳಿ ಪುಷ್ಪ ನಮನ ಸಲ್ಲಿಸಿದರು.

ಖರ್ಗೆ ತಮ್ಮ ಎಕ್ಸ್‌ ನಲ್ಲಿ, ವೈಜ್ಞಾನಿಕ, ಆರ್ಥಿಕ, ಕೈಗಾರಿಕಾ ಮತ್ತು ವಿವಿಧ ಕ್ಷೇತ್ರಗಳಲ್ಲಿ ಭಾರತವನ್ನು ಮುಂದಕ್ಕೆ ಕೊಂಡೊಯ್ದ ಆಧುನಿಕ ಭಾರತದ ವಾಸ್ತುಶಿಲ್ಪಿ ಪಂಡಿತ್ ಜವಾಹರಲಾಲ್ ನೆಹರು ಅವರ ಅತ್ಯುತ್ತಮ ಕೊಡುಗೆಯಿಲ್ಲದೆ ಭಾರತದ ಇತಿಹಾಸವು ಅಪೂರ್ಣವಾಗಿದೆ. ಅವರ ಪುಣ್ಯತಿಥಿಯಂದು “ಹಿಂದ್ ಕೆ ಜವಾಹರ್” ಅವರಿಗೆ ನಮ್ಮ ನಮ್ರ ನಮನಗಳು ಎಂದು ಬರೆದುಕೊಂಡಿದ್ದಾರೆ.

ಪಂಡಿತ್ ಜವಾಹರಲಾಲ್ ನೆಹರು ಅವರು ದೇಶದ ರಕ್ಷಣೆ, ದೇಶದ ಪ್ರಗತಿ, ದೇಶದ ಏಕತೆ ನಮ್ಮೆಲ್ಲರ ರಾಷ್ಟ್ರೀಯ ಧರ್ಮ. ನಾವು ವಿವಿಧ ಧರ್ಮಗಳನ್ನು ಅನುಸರಿಸಬಹುದು, ವಿವಿಧ ರಾಜ್ಯಗಳಲ್ಲಿ ವಾಸಿಸಬಹುದು, ವಿವಿಧ ಭಾಷೆಗಳನ್ನು ಮಾತನಾಡಬಹುದು. ಆದರೆ ಅದು ನಮ್ಮ ನಡುವೆ ಯಾವುದೇ ಗೋಡೆಯನ್ನು ಸೃಷ್ಟಿಸಬಾರದು. ಎಲ್ಲಾ ಜನರು ಪ್ರಗತಿಯಲ್ಲಿ ಸಮಾನ ಅವಕಾಶವನ್ನು ಪಡೆಯಬೇಕು. ನಮ್ಮ ದೇಶದಲ್ಲಿ ಕೆಲವರು ಶ್ರೀಮಂತರಾಗಿರಲು ಮತ್ತು ಹೆಚ್ಚಿನ ಜನರು ಬಡವರಾಗಲು ನಾವು ಬಯಸುವುದಿಲ್ಲ ಎಂದಿದ್ದರು. ಇಂದಿಗೂ ಕಾಂಗ್ರೆಸ್ ಪಕ್ಷವು ಅದೇ “ನ್ಯಾಯ” ಮಾರ್ಗವನ್ನು ಅನುಸರಿಸುತ್ತಿದೆ ಎಂದು ಖರ್ಗೆ ತಿಳಿಸಿದ್ದಾರೆ.

Previous Post
ಬಿಭವ್ ಕುಮಾರ್ ಜಾಮೀನು ಅರ್ಜಿ ವಜಾ ಕೋರ್ಟ್‌ನಲ್ಲಿ ಕಣ್ಣಿರಿಟ್ಟ ಸ್ವಾತಿ ಮಲಿವಾಲ
Next Post
ಮಧ್ಯಂತರ ಜಾಮೀನು ವಿಸ್ತರಣೆ ಕೋರಿದ ಸಿಎಂ ಅರವಿಂದ್ ಕೇಜ್ರಿವಾಲ್

Recent News