ಜಿಲ್ಲಾ ನ್ಯಾಯಾಧೀಶರು ಸಮಿತಿಯ ಭಾಗವಾಗಿರಲಿ ಗೋಕರ್ಣ ಮಹಾಬಲೇಶ್ವರ ದೇವಸ್ಥಾನ ಮೇಲ್ವಿಚಾರಣಾ ಸಮಿತಿ ರಚನೆಗೆ ನಿರ್ದೇಶನ

ಜಿಲ್ಲಾ ನ್ಯಾಯಾಧೀಶರು ಸಮಿತಿಯ ಭಾಗವಾಗಿರಲಿ ಗೋಕರ್ಣ ಮಹಾಬಲೇಶ್ವರ ದೇವಸ್ಥಾನ ಮೇಲ್ವಿಚಾರಣಾ ಸಮಿತಿ ರಚನೆಗೆ ನಿರ್ದೇಶನ

ನವದೆಹಲಿ : ಗೋಕರ್ಣ ಮಹಾಬಲೇಶ್ವರ ದೇವಸ್ಥಾನ ಮೇಲ್ವಿಚಾರಣಾ ಸಮಿತಿ ರಚನೆಗೆ ಸಂಬಂಧಿಸಿದಂತೆ ನಿವೃತ್ತ ನ್ಯಾ ಬಿ.ಎನ್ ಶ್ರೀಕೃಷ್ಣ ನೇತೃತ್ವದ ಸಮಿತಿ ನೀಡಿದ ವರದಿಯನ್ನು ಸುಪ್ರೀಂಕೋರ್ಟ್ ಒಪ್ಪಿಕೊಂಡಿದೆ. ಸೋಮವಾರ ವಿಚಾರಣೆ ನಡೆಸಿದ ಕೋರ್ಟ್ ವರದಿ ಆಧರಿಸಿ ಮೇಲ್ವಿಚಾರಣೆ ಸಮಿತಿ ರಚನೆ ಬಗ್ಗೆ ನಿರ್ದೇಶನ ನೀಡಿತು.

ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಸಮಿತಿಯ ಭಾಗವಾಗಿರತಕ್ಕದ್ದು ಅವರು ಕಾರ್ಯಗಳನ್ನು ಪೂರೈಸಲು ಸಾಧ್ಯವಾಗದಿದ್ದಲ್ಲಿ, ADJ ಶ್ರೇಣಿಗಿಂತ ಕಡಿಮೆಯಿಲ್ಲದ ಯಾವುದೇ ಸದಸ್ಯರನ್ನು ನೇಮಿಸಲಾಗುತ್ತದೆ. ಜಿಲ್ಲಾ ನ್ಯಾಯಾಧೀಶರು ನಿವೃತ್ತ ನ್ಯಾ. ಕೃಷ್ಣರೊಂದಿಗೆ ಸಮಾಲೋಚಿಸಿ ಕಲ್ಯಾಣ ಸಮಿತಿಯ ಎಲ್ಲಾ ನಿರ್ಧಾರಗಳನ್ನು ತೆಗೆದುಕೊಳ್ಳುಬಹುದು. ಅಧ್ಯಕ್ಷರು ಆಯ್ಕೆಯ ಮತವನ್ನು ಹೊಂದಿರುತ್ತಾರೆ, ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನು ಹೊರತುಪಡಿಸಿ ಎಲ್ಲಾ ಸದಸ್ಯರು ಸಲಹೆ ನೀಡಬಹುದು, ಅಧ್ಯಕ್ಷರ ನಿರ್ಧಾರದ ಮೇಲೆ ವೀಟೋ ಅಧಿಕಾರ ಚಲಾಯಿಸುವಂತಿಲ್ಲ ಎಂದು ನಿರ್ದೇಶನ ನೀಡಿದೆ.

ಉತ್ತರ ಕನ್ನಡದ ಪ್ರಸಿದ್ಧ ಧಾರ್ಮಿಕ ಸ್ಥಳ ಗೋಕರ್ಣ ಮಹಾಬಲೇಶ್ವರ ದೇವಾಲಯದ ಆಡಳಿತವನ್ನು 2008ರಲ್ಲಿ ಹೊಸನಗರ ರಾಮಚಂದ್ರಾಪುರ ಮಠ ವಹಿಸಿಕೊಂಡಿತ್ತು. ಅಂದಿನ ಬಿಜೆಪಿ ಸರ್ಕಾರ ಈ ದೇವಸ್ಥಾನದ ಆಡಳಿತವನ್ನು ರಾಮಚಂದ್ರಾಪುರ ಮಠಕ್ಕೆ ವಹಿಸಿಕೊಟ್ಟಿತ್ತು. ಗೋಕರ್ಣ ದೇವಾಲಯವನ್ನು ಖಾಸಗಿಯವರಿಗೆ ಹಸ್ತಾಂತರಿಸುವುದನ್ನು ಪ್ರಶ್ನಿಸಿ ಬಾಲಚಂದ್ರ ವಿಘ್ನೇಶ್ವರ ದೀಕ್ಷಿತ್ ಮುಂತಾದವರು ಕೋರ್ಟ್​ ಮೆಟ್ಟಿಲೇರಿದ್ದರು.

ಗೋಕರ್ಣ ದೇವಸ್ಥಾನದ ಆಡಳಿತವನ್ನು ರಾಜ್ಯ ಸರ್ಕಾರಕ್ಕೆ ಹಸ್ತಾಂತರಿಸಬೇಕು ಎಂದು ಹೈಕೋರ್ಟ್​ ಆದೇಶ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ 2018ರಲ್ಲಿ ರಾಮಚಂದ್ರಾಪುರ ಮಠ ಸುಪ್ರೀಂಕೋರ್ಟ್​ನಲ್ಲಿ ದಾವೆ ಹೂಡಿತ್ತು. ಪ್ರಕರಣದ ವಿಚಾರಣೆ ನಡೆಸಿದ್ದ ಕೋರ್ಟ್ ಈ ಹಿಂದೆ ಸಮಿತಿ ರಚಿಸಿತ್ತು, ಸಮಿತಿಯಲ್ಲೂ ಕೆಲವು ಆಕ್ಷೇಪ ಬಂದ ಹಿನ್ನಲೆ ನಿವೃತ್ತ ನ್ಯಾಯಮೂರ್ತಿಗಳಿಂದ ಕೋರ್ಟ್ ವರದಿ ಕೇಳಿತ್ತು. ವರದಿಯಲ್ಲಿನ ಸಲಹೆ ಅನ್ವಯ ಸಮಿತಿ ನಡೆಸಲು ಕೋರ್ಟ್ ಈಗ ನಿರ್ದೇಶನ ನೀಡಿದೆ.

Previous Post
ಯುಪಿಎಸ್‌ಸಿ ವಿದ್ಯಾರ್ಥಿಗಳ ಸಾವು; ಲೋಕಸಭೆಯಲ್ಲಿ ಚರ್ಚೆ
Next Post
ಕುಡಿಯುವ ನೀರಿಗಾಗಿ ಜನ ಮತ ಹಾಕಿದ್ದಾರೆ ಬೆಂಗಳೂರಿಗೆ ಕುಡಿಯುವ ನೀರು ಕೊಡಿ – ಹೆಚ್.ಡಿ ದೇವೇಗೌಡ ಮನವಿ

Recent News