ಜ್ವಲ್ ರೇವಣ್ಣ ಪ್ರಕರಣದಲ್ಲಿ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ ಹೆಚ್ ಡಿ ದೇವೇಗೌಡ; ಕಾನೂನು ಕ್ರಮಕ್ಕೆ ತಕರಾರು ಇಲ್ಲ
ಬೆಂಗಳೂರು: ಹೆಚ್ ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ಪ್ರಕರಣಗಳ ಬಗ್ಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಮೊದಲ ಬಾರಿಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ಅವರೀಗ ಹೊರದೇಶದಲ್ಲಿದ್ದಾರೆ, ಅವರ ವಿರುದ್ಧ ದಾಖಲಾಗಿರುವ ಪ್ರಕರಣಗಳ ಬಗ್ಗೆ ತಮ್ಮ ಕುಟುಂಬದ ಪರವಾಗಿ ಹೆಚ್ ಡಿ ಕುಮಾರಸ್ವಾಮಿಯವರು ಸ್ಪಷ್ಟವಾದ ಹೇಳಿಕೆಗಳನ್ನು ನೀಡಿದ್ದಾರೆ ಮತ್ತು ಕಾನೂನಿನ ಪ್ರಕಾರ ಶಿಕ್ಷೆಯಾಗಲಿ ಅಂದಿದ್ದಾರೆ.ಆದರೆ, ಇಡೀ ಪ್ರಕರಣದಲ್ಲಿ ಬೇರೆ ಜನ ಸಹ ಶಾಮೀಲಾಗಿದ್ದಾರೆ ಅವರಿಗೂ ಶಿಕ್ಷೆಯಾಗಬೇಕು ಮತ್ತು ಸಂತ್ರಸ್ತೆಯರಿಗೆ ಪರಿಹಾರ ಸಿಗಬೇಕು. ಪ್ರಕರಣ ನ್ಯಾಯಾಲಯದಲ್ಲಿರುವುದರಿಂದ ತಾವು ಅದರ ಬಗ್ಗೆ ಮಾತಾಡಲ್ಲ. ಕೋರ್ಟ್ ತನ್ನ ತೀರ್ಪು ನೀಡಲಿದೆ ಎಂದು ದೇವೇಗೌಡ ಹೇಳಿದರು.ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋ ಪ್ರಕರಣ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿದೆ. ಈ ಪ್ರಕರಣ ದಿನದಿಂದ ದಿನಕ್ಕೆ ರೋಚಕತೆ ಪಡೆದುಕೊಳ್ಳುತ್ತಿದೆ. ವುದೇಶದಲ್ಲಿರುವ ಪ್ರಜ್ವಲ್ ಅಧಿಕಾರಿಗಳ ಕೈಗೆ ಸಿಗದೆ ಓಡಾಡುತ್ತಿದ್ದಾರೆ. ಪ್ರಜ್ವಲ್ ರೇವಣ್ಣ ಈಗಾಗಲೇ 2 ಬಾರಿ ಟಿಕೆಟ್ ಕ್ಯಾನ್ಸಲ್ ಮಾಡಿದ್ದಾರೆ. ಮೇ 03 ಮತ್ತು 15 ರಂದು ಭಾರತಕ್ಕೆ ಬರಲು ವಿಮಾನದ ಟಿಕೆಟ್ ಬುಕ್ ಮಾಡಿ ಕ್ಯಾನ್ಸಲ್ ಮಾಡಿದ್ದಾರೆ. ಹೀಗಾಗಿ ಅಧಿಕಾರಿಗಳು ಮುಂದಿನ ಟಿಕೆಟ್ ಬುಕ್ಕಿಂಗ್ ಮೇಲೆ ಹದ್ದಿನ ಕಣ್ಣಿಟ್ಟು ಕಾಯುತ್ತಿದ್ದಾರೆ.
*ಶಿಕ್ಷಣ ಇಲಾಖೆಯ ಜವಾಬ್ದಾರಿಯನ್ನು ಯೋಗ್ಯರಿಗೆ ನೀಡಿ : ಸಿಎಂಗೆ ವಿಜಯೇಂದ್ರ ಮನವಿ
ಬೆಂಗಳೂರು,ಮೇ18- ಗೊಂದಲದ ಗೂಡಾಗಿ ಪರಿಣಮಿಸಿರುವ ಪ್ರಾಥಮಿಕ ಶಿಕ್ಷಣ ಇಲಾಖೆಯನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವ ಹಾಗೂ ಇದಕ್ಕೆ ಅರ್ಹತೆ ಇರುವ ಯೋಗ್ಯರನ್ನು ನೇಮಕ ಮಾಡಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಮನವಿ ಮಾಡಿದ್ದಾರೆ.ಈ ಸಂಬಂಧ ತಮ್ಮ ಅಧಿಕೃತ ಜಾಲತಾಣ ಖಾತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಭವಿಷ್ಯತ್ತಿನಲ್ಲಿ ನಾಡು, ದೇಶ ಕಟ್ಟುವ ಲಕ್ಷಾಂತರ ಮಕ್ಕಳ ಭವಿಷ್ಯವನ್ನು ಅಂಧಕಾರಕ್ಕೆ ತಳ್ಳಲ್ಪಡುತ್ತಿರುವ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಯನ್ನು ಸರಿದಾರಿಗೆ ತರುವ ಕಟ್ಟುನಿಟ್ಟಿನ ಕ್ರಮ ವಹಿಸಲಿ. ಶಿಕ್ಷಣ ಬದ್ಧತೆ ಇದ್ದವರ ಕೈಗೆ ಇಲಾಖೆಯ ಸಾರಥ್ಯ ವಹಿಸಿಕೊಡಲಿ ಎಂದು ಸಲಹೆ ಮಾಡಿದ್ದಾರೆ.ಪ್ರಾಥಮಿಕ ಶಿಕ್ಷಣವೆಂದರೆ ಕೇವಲ ಅಕ್ಷರ ಕಲಿಕೆಯಲ್ಲ. ನಾಳಿನ ಪ್ರಜೆಗಳ ಭವಿಷ್ಯ ರೂಪಿಸುವ ನೈಜ ಅಡಿಪಾಯ. ಒಂದು ಸರ್ಕಾರ ಶಿಕ್ಷಣವನ್ನು ಆಲಕ್ಷಿಸಿದರೆ ದೇಶದ ಭವಿಷ್ಯವನ್ನು ಗಂಡಾಂತರಕ್ಕೆ ತಳ್ಳುವ ನೀಚ ಪ್ರವೃತ್ತಿಯಾಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಸರ್ಕಾರದ ಶಿಕ್ಷಣ ಇಲಾಖೆಯಲ್ಲಿ ಇಂತಹ ಪ್ರವೃತ್ತಿ ಮೇಳೈಸುತ್ತಿರುವ ಹಿನ್ನೆಲೆಯಲ್ಲಿ ಪ್ರಾಥಮಿಕ ಶಿಕ್ಷಣ ಅರಾಜಕತೆಯತ್ತ ಸಾಗಿದೆ, ಇದನ್ನು ಮುಖ್ಯಮಂತ್ರಿಗಳು ಇಂದು ಒಪ್ಪಿಕೊಂಡು ಕೃಪಾಂಕ ನೀಡುವಷ್ಟು ತಳಮಟ್ಟಕ್ಕೆ ಕುಸಿದಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಬಗ್ಗೆ ಅಸಹಾಯಕತೆಯಿಂದ ಕೋಪೋದ್ರಿಕ್ತರಾಗಿದ್ದಾರೆ.ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ದಿಕ್ಕಿಲ್ಲದ ಹಡಗಿನಂತೆ ಸಾಗಿದೆ ತಮ ಮಕ್ಕಳ ಉಜ್ವಲ ಭವಿಷ್ಯದ ಕನಸು ಕಂಡಿರುವ ಲಕ್ಷಾಂತರ ಪೋಷಕರ ಆತಂಕದ ಪ್ರಶ್ನೆಗಳಿಗೆ ಉತ್ತರಿಸುವವರಿಲ್ಲದೆ ಅವರ ವೇದನೆ ಅರಣ್ಯರೋದನವಾಗಿದೆ ಎಂದು ಬೇಸರಿಸಿದ್ದಾರೆ.ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಬದಿಗೆ ಸರಿಸುವ ವಿದ್ವತ್ತು ಪ್ರದರ್ಶಿಸಲು ಹೋಗಿ ನೈಜ ಶಿಕ್ಷಣ ವ್ಯವಸ್ಥೆಯನ್ನು ದಮನ ಮಾಡಲು ಹೊರಟ ಸರ್ಕಾರ, ಚಾಲನೆಯ ಅನುಭವವಿಲ್ಲದ ಚಾಲಕನೊಬ್ಬ ವಾಹನ ಅಥವಾ ರೈಲು ಮುನ್ನಡೆಸಿದರೆ ಯಾವ ಸ್ಥಿತಿ ಉಂಟಾಗಬಹುದು ಅಂಥದ್ದೇ ಸ್ಥಿತಿ ಇಂದು ರಾಜ್ಯದ ಪ್ರಾಥಮಿಕ ಹಾಗೂ ಶಿಕ್ಷಣ ಇಲಾಖೆಗೆ ಬಂದೊದಗಿದೆ ಎಂದಿದ್ದಾರೆ.ಮುಖ್ಯಮಂತ್ರಿಗಳು ವಿದ್ಯಾ ಇಲಾಖೆಯನ್ನು ವಿಧೇಯತೆ ಗೊತ್ತಿಲ್ಲದವರ ಕೈಗೆ ಒಪ್ಪಿಸಿದ್ದ ಕಾರಣಕ್ಕಾಗಿ ಇಂದು ಅವರೇ ಪಶ್ಚಾತ್ತಾಪ ಪಡುವಂತಹ ಪರಿಸ್ಥಿತಿ ಉದ್ಭವಿಸಿದೆ ಎಂದಿರುವ ಅವರು, ಮೇಟಿ ವಿದ್ಯೆಗೆ ರೈತ, ಅಕ್ಷರ ವಿದ್ಯೆಗೆ ವಿನಯವಂತನಿದ್ದರೆ ಕೃಷಿ-ಶಿಕ್ಷಣ ಎರಡೂ ಸಮೃದ್ಧವಾಗುತ್ತವೆ ಎಂದು ಅಭಿಪ್ರಾಯಪಟ್ಟಿದ್ದಾರೆ.