ತ್ರಿಪುರಾದಲ್ಲಿ 800ಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ HIV ವೈರಸ್‌ ಪತ್ತೆ

ತ್ರಿಪುರಾದಲ್ಲಿ 800ಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ HIV ವೈರಸ್‌ ಪತ್ತೆ

ನವದೆಹಲಿ : ತ್ರಿಪುರಾದಲ್ಲಿ 800ಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ HIV ವೈರಸ್‌ ಪತ್ತೆಯಾಗಿದ್ದು, 47 ಮಂದಿ ವಿದ್ಯಾರ್ಥಿಗಳು ಏಡ್ಸ್‌ಗೆ ಬಲಿಯಾಗಿದ್ದಾರೆ ಎಂದು ತ್ರಿಪುರಾ ರಾಜ್ಯದ ಏಡ್ಸ್ ನಿಯಂತ್ರಣ ಸೊಸೈಟಿಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ತ್ರಿಪುರಾ ರಾಜ್ಯದ 220 ಶಾಲೆಗಳು ಹಾಗೂ 24 ಕಾಲೇಜು ಮತ್ತು ವಿವಿಗಳಲ್ಲಿ ವಿದ್ಯಾರ್ಥಿಗಳು ಇಂಜೆಕ್ಷನ್ ಮೂಲಕ ಮಾದಕ ವಸ್ತುಗಳನ್ನು ತೆಗೆದುಕೊಳ್ಳುವುದು ಪತ್ತೆಯಾಗಿದೆ ಎಂದಿರುವ ತ್ರಿಪುರಾ ಏಡ್ಸ್ ನಿಯಂತ್ರಣ ಸೊಸೈಟಿ, HIV ಸೋಂಕು ಹರಡಲು ಇದೂ ಕಾರಣ ಆಗಿರಬಹುದು ಎಂದು ಹೇಳಲಾಗಿದೆ.

ಈ ಸಂಬಂಧ ತ್ರಿಪುರಾ ರಾಜ್ಯಾದ್ಯಂತ ಸುಮಾರು 164 ಆರೋಗ್ಯ ಸಂಸ್ಥೆಗಳಿಂದ ಅಧಿಕಾರಿಗಳು ಮಾಹಿತಿ ಕಲೆ ಹಾಕಿದ್ದು, ಸಮಗ್ರ ತನಿಖೆ ಬಳಿಕ ಹೆಚ್ಚಿನ ಮಾಹಿತಿ ಹೊರ ಬೀಳಲಿದೆ. ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಪ್ರತಿದಿನ ಐದರಿಂದ ಏಳು ಹೊಸ HIV ಪ್ರಕರಣಗಳು ಪತ್ತೆಯಾಗುತ್ತಿವೆ ಎಂದು ಟಿಎಸ್‌ಎಸಿಎಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮೇ 2024ರ ವೇಳೆಗೆ ತ್ರಿಪುರಾದ ART (ಆಂಟಿರೆಟ್ರೋವೈರಲ್ ಥೆರಪಿ) ಕೇಂದ್ರ ಒಟ್ಟು 8,729 HIV ಸೋಂಕಿತ ವ್ಯಕ್ತಿಗಳನ್ನು ನೋಂದಾಯಿಸಿವೆ. ಅದರಲ್ಲಿ 4,570 ಪುರುಷರು, 1,103 ಮಹಿಳೆಯರು ಮತ್ತು ಒಬ್ಬರು ಮಂಗಳಮುಖಿ ಒಳಗೊಂಡಿದ್ದಾರೆ. HIV ಸೋಂಕಿತರ ಪೈಕಿ 5,674 ಜನರು ಜೀವಂತವಾಗಿದ್ದಾರೆ ಎಂದು TSACS ಅಧಿಕಾರಿ ಬಹಿರಂಗಪಡಿಸಿದ್ದಾರೆ.

Previous Post
ಸಿಸೋಡಿಯಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ ಇಡಿ ಸಿಬಿಐಗೆ ನೋಟಿಸ್ ನೀಡಿದ ಸುಪ್ರೀಂಕೋರ್ಟ್
Next Post
ರಾಜ್ಯಸಭೆಯಲ್ಲಿ ಬಹುಮತ ಕಳೆದುಕೊಂಡ ಎನ್‌ಡಿಎ

Recent News