ದೆಹಲಿಯಲ್ಲಿ ಕರ್ನಾಟಕ ಎಎಪಿ ಮುಖಂಡರಿಂದ ಚುನಾವಣಾ ಪ್ರಚಾರ

ದೆಹಲಿಯಲ್ಲಿ ಕರ್ನಾಟಕ ಎಎಪಿ ಮುಖಂಡರಿಂದ ಚುನಾವಣಾ ಪ್ರಚಾರ

ನವದೆಹಲಿ: ಲೋಕಸಭೆ ಆರನೇ ಹಂತದ ಮತದಾನಕ್ಕೆ ಒಂದೇರಡು ದಿನ ಬಾಕಿ ಉಳಿದಿದ್ದು ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಬಿರುಸಿನ ಪ್ರಚಾರ ನಡೆಯುತ್ತಿದೆ. ಆಪ್ ಸ್ಪರ್ಧಿಸಿರುವ ನಾಲ್ಕು ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲು ರಾಜ್ಯದಿಂದಲೂ ಆಪ್ ಮುಖಂಡರು ಮತ್ತು ಕಾರ್ಯಕರ್ತರು ದೆಹಲಿಗೆ ಆಗಮಿಸಿದ್ದಾರೆ.

ಕಳೆದ 15 ದಿನಗಳಿಂದ ದೆಹಲಿಯಲ್ಲಿ ಬೀಡು ಬಿಟ್ಟಿರುವ ಕರ್ನಾಟಕ ಎಎಪಿ ನಾಯಕರು, ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಶ್ರಮಿಸುತ್ತಿದ್ದಾರೆ. ದೆಹಲಿಯ ಮೆಟ್ರೋ ನಿಲ್ದಾಣಗಳು, ಪ್ರಮುಖ ಮಾರುಕಟ್ಟೆಗಳು ಮತ್ತು ಜನಸಂದಣಿ ಪ್ರದೇಶಗಳಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರ ಅಕ್ರಮವಾಗಿ ಬಂಧಿಸಿದ್ದನ್ನು ವಿರೋಧಿಸಿ ‘ಜೈಲ್ ಕಾ ಜವಾಬ್ ವೋಟ್ ಸೆ ದೇಂಗೆ’ ಘೋಷಣೆಯಡಿ ಸಹಿ ಸಂಗ್ರಹ ಮಾಡುವ ಮೂಲಕ ಜನರ ಗಮನ ಸೆಳೆಯುವ ಪ್ರಯತ್ನ‌ ಮಾಡಿದ್ದಾರೆ.

ರಾಷ್ಟ್ರ ಸಂಘಟನಾ ಕಾರ್ಯದರ್ಶಿ ಪೃಥ್ವಿ ರೆಡ್ಡಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಚಿತ್ ಸಹವಾನಿ,ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ, ರಾಜ್ಯ ಖಜಾಂಚಿ ಪ್ರಕಾಶ್ ನೆಡುಂಗಡಿ, ರಾಜ್ಯ ಮಾಧ್ಯಮ ಸಂಚಾಲ ಜಗದೀಶ್ ವಿ ಸದಂ, ರಾಜ್ಯ ಕಾರ್ಯದರ್ಶಿ ಗಳಾದ ರವಿಕುಮಾರ್, ಉಷಾಮೋಹನ್, ಬೆಂಗಳೂರು ನಗರಾಧ್ಯಕ್ಷ ಡಾ. ಸತೀಶ್, ಬೆಂಗಳೂರು ಸಂಘಟನಾ ಕಾರ್ಯದರ್ಶಿ ಅಶೋಕ್ ಮೃತ್ಯುಂಜಯ, ಜಗದೀಶ್ ಬಾಬು, ಪುಟ್ಟಣ್ಣ, ಮಂಜುನಾಥ್, ಮುನೇಶ್ ಕುಮಾರ್, ಅಂಜನಾ ಗೌಡ ,ಮಹಾಲಕ್ಷ್ಮಿ ಸೇರಿದಂತೆ ಇನ್ನಿತರ ಮುಖಂಡರು ಮತ್ತು ಕರ್ನಾಟಕದ ಅನೇಕ ಜಿಲ್ಲೆಗಳಿಂದ ಆಗಮಿಸಿರುವ ಎಎಪಿ ಕಾರ್ಯಕರ್ತರು ಬಿರುಸಿನ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ.

Previous Post
ಮಿತಿ ಮೀರಿದ ಮಾತು, ಕಾಂಗ್ರೇಸ್ ಬಿಜೆಪಿ ಸ್ಟಾರ್ ಪ್ರಚಾರಕರ ವಿರುದ್ಧ ಚು.ಆಯೋಗ ಗರಂ
Next Post
ಆರ್ಟಿಕಲ್ 370 ರದ್ದು, ಸರ್ಕಾರದ ಪರ ಸುಪ್ರೀಂಕೋರ್ಟ್ ಆದೇಶ, ಆದೇಶ ಮರುಶೀಲನೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

Recent News