ದೆಹಲಿ ಅಬಕಾರಿ ನೀತಿ ಪ್ರಕರಣ: ಅರವಿಂದ್ ಕೇಜ್ರಿವಾಲ್ಗೆ ಜಾಮೀನು

ದೆಹಲಿ ಅಬಕಾರಿ ನೀತಿ ಪ್ರಕರಣ: ಅರವಿಂದ್ ಕೇಜ್ರಿವಾಲ್ಗೆ ಜಾಮೀನು


ನವದೆಹಲಿ, ಮಾ. 16
: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ಶನಿವಾರ ಜಾಮೀನು ಮಂಜೂರು ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಅರವಿಂದ ಕೇಜ್ರಿವಾಲ್ ನ್ಯಾಯಾಲಯದ ಮುಂದೆ ದೈಹಿಕವಾಗಿ ಹಾಜರಾಗಿದ್ದರು. ಕೊನೆಯ ವಿಚಾರಣೆಯಲ್ಲಿ, ಅವರು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಹಾಜರಾಗಿದ್ದರು.

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾತಿ ನಿರ್ದೇಶನಾಲಯ (ಇಡಿ) 11 ಬಾರಿ ಸಮನ್ಸ್ ನೀಡಿತ್ತು. ಆದರೆ ಯಾವುದಕ್ಕೂ ಉತ್ತರ ನೀಡದ ಕೇಜ್ರಿವಾಲ್ ವಿರುದ್ಧ ಇಡಿ ನ್ಯಾಯಾಲಯದ ಮೊರೆ ಹೋಗಿತ್ತು. ಹಾಗಾಗಿ ರೂಸ್ ಅವೆನ್ಯೂ ಕೋರ್ಟ್ಗೆ ಕೇಜ್ರಿವಾಲ್ ದೈಹಿಕವಾಗಿ ಹಾಜರಾಗಿದ್ದರು. ಇಡಿ ಸಲ್ಲಿಸಿದ ಎರಡು ದೂರುಗಳು ಮತ್ತು ಕೇಜ್ರಿವಾಲ್‌ ಅವರಿ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ, ರೂಸ್ ಅವೆನ್ಯೂ ಕೋರ್ಟ್‌ನ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ದಿವ್ಯಾ ಮಲ್ಹೋತ್ರಾ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಜಾಮೀನು ಮಂಜೂರು ಮಾಡಿದ್ದಾರೆ. 15,000 ರೂ.ಗಳ ಜಾಮೀನು ಬಾಂಡ್ ಮತ್ತು 1 ಲಕ್ಷ ರೂ.ಗಳ ಶ್ಯೂರಿಟಿಯ ಮೇಲೆ ಅವರಿಗೆ ಜಾಮೀನು ನೀಡಲಾಗಿದೆ.

Previous Post
ರಾಜ್ಯಸಭಾ ಸದಸ್ಯ ಅಜಯ್ ಪ್ರತಾಪ್ ಸಿಂಗ್ ಬಿಜೆಪಿಗೆ ಗುಡ್ ಬೈ
Next Post
ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆ ಏಪ್ರಿಲ್ 19 ರಿಂದ ಏಳು ಹಂತದಲ್ಲಿ ಮತದಾನ | ಜೂನ್ 04 ರಂದು ಫಲಿತಾಂಶ ; ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ

Recent News