ಧಾರ್ಮಿಕ ಅಂಶಗಳ ಉಲ್ಲೇಖಿಸಿ ಮತ ಕೇಳಿದ ಆರೋಪ ಚುನಾವಣೆಯಿಂದ ಪ್ರಧಾನಿ ಮೋದಿ ನಿಷೇಧ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಧಾರ್ಮಿಕ ಅಂಶಗಳ ಉಲ್ಲೇಖಿಸಿ ಮತ ಕೇಳಿದ ಆರೋಪ ಚುನಾವಣೆಯಿಂದ ಪ್ರಧಾನಿ ಮೋದಿ ನಿಷೇಧ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ನವದೆಹಲಿ : ಹಿಂದೂ ಹಾಗೂ ಸಿಖ್ ದೇವರುಗಳು ಮತ್ತು ಆರಾಧನಾ ಸ್ಥಳಗಳ ಹೆಸರಿನಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಮತ ಯಾಚಿಸಿದ ಆರೋಪದ ಮೇಲೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆರು ವರ್ಷಗಳ ಕಾಲ ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ.

ವಕೀಲ ಆನಂದ್ ಎಸ್ ಜೊಂಧಳೆ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಸಚಿನ್ ದತ್ತಾ ನೇತೃತ್ವದ ಪೀಠ ಅರ್ಜಿದಾರರು ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಊಹಿಸಿರುವುದರಿಂದ ಅರ್ಜಿಯನ್ನು ಸಂಪೂರ್ಣವಾಗಿ ತಪ್ಪಾಗಿ ಗ್ರಹಿಸಲಾಗಿದೆ ಎಂದು ಗಮನಿಸಿದರು, ಯಾವುದೇ ದೂರಿನ ಬಗ್ಗೆ ನಿರ್ದಿಷ್ಟ ಕ್ರಮ ತೆಗೆದುಕೊಳ್ಳುವಂತೆ ಆಯೋಗಕ್ಕೆ ಸೂಚಿಸಲು ಸಾಧ್ಯವಿಲ್ಲ ಎಂದರು.

ಆಯೋಗವು ಜೊಂಧಲೆ ಅವರ ದೂರನ್ನು ಕಾನೂನಿನ ಪ್ರಕಾರ ಪರಿಶೀಲಿಸುತ್ತದೆ ಎಂದು ಕೇಂದ್ರ ಚುನಾವಣಾ ಆಯೋಗದ ಪರವಾಗಿ ವಕೀಲ ಸಿದ್ಧಾಂತ್ ಕುಮಾರ್ ಹೇಳಿದರು. ಆಯೋಗವು ನಿತ್ಯವು ಇಂತಹ ದೂರುಗಳನ್ನು ಸ್ವೀಕರಿಸುತ್ತದೆ, ಪರಿಶೀಲಿಸಯತ್ತದೆ ಮತ್ತು ಕ್ರಮ ತೆಗೆದುಕೊಳ್ಳುತ್ತದೆ, ಆಯೋಗವು ಒಂದು ಸಾಂವಿಧಾನಿಕ ಸಂಸ್ಥೆ ಎಂದು ವಾದಿಸಿದರು.

ಪ್ರಧಾನಮಂತ್ರಿಯವರು ಹಿಂದೂ ಮತ್ತು ಸಿಖ್ ದೇವತೆಗಳು ಮತ್ತು ಅವರ ಆರಾಧನಾ ಸ್ಥಳಗಳ ಹೆಸರಿನಲ್ಲಿ ಮತಗಳನ್ನು ಕೇಳಿದ್ದು ಮಾತ್ರವಲ್ಲದೆ, ವಿರೋಧಿ ರಾಜಕೀಯ ಪಕ್ಷಗಳು ಮುಸ್ಲಿಮರಿಗೆ ಒಲವು ತೋರುತ್ತಿದ್ದಾರೆ ಎಂದು ಭಾಷಣದಲ್ಲಿ ಹೇಳಿದ್ದಾರೆ. ರಾಮ ಮಂದಿರ ನಿರ್ಮಾಣ, ಕರ್ತಾರ್‌ಪುರ ಸಾಹಿಬ್ ಕಾರಿಡಾರ್ ಅಭಿವೃದ್ಧಿ ಹಾಗೂ ಅಫ್ಘಾನಿಸ್ತಾನದಿಂದ ಗುರು ಗ್ರಂಥ ಸಾಹಿಬ್‌ನ ಪ್ರತಿಗಳನ್ನು ವಾಪಸ್ ತಂದಿರುವುದಾಗಿ ಪ್ರಧಾನಿ ಮೋದಿ ಹೇಳಿದ್ದಾರೆ

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲು ಮತ್ತು ಪ್ರಜಾಪ್ರತಿನಿಧಿ ಕಾಯಿದೆ 1951 ರ ಅಡಿಯಲ್ಲಿ ಅವರನ್ನು ಆರು ವರ್ಷಗಳ ಕಾಲ ಚುನಾವಣೆಯಿಂದ ಅನರ್ಹಗೊಳಿಸುವಂತೆ ಚುನಾವಣೆ ಆಯೋಗಕ್ಕೆ ನಿರ್ದೇಶನ ನೀಡಲು ಮನವಿ ಮಾಡಿದ್ದರು.

Previous Post
ಇಡಿ ಬಂಧನ ಪ್ರಶ್ನಿಸಿ ಹೇಮಂತ್ ಸೂರೇನ್ ಅರ್ಜಿ ಇಡಿಗೆ ನೋಟಿಸ್, ಆದೇಶ ಪ್ರಕಟಿಸಲು ಹೈಕೋರ್ಟ್‌ಗೆ ನಿರ್ದೇಶನ
Next Post
ಬರ ಪರಿಹಾರ ಬಿಡುಗಡೆ ವಿಚಾರ ತಜ್ಞರ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂಕೋರ್ಟ್ ಸೂಚನೆ

Recent News