ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಏಕಾಂಗಿ ಸ್ಪರ್ಧೆ ಬಹಿರಂಗ ಸಮಾವೇಶದಲ್ಲಿ ಅಭ್ಯರ್ಥಿಗಳ ಘೋಷಣೆ

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಏಕಾಂಗಿ ಸ್ಪರ್ಧೆ ಬಹಿರಂಗ ಸಮಾವೇಶದಲ್ಲಿ ಅಭ್ಯರ್ಥಿಗಳ ಘೋಷಣೆ

ಕೋಲ್ಕತ್ತಾ: ಮೈತ್ರಿ ಮಾತುಕತೆ ನಡುವೆ ಮಹತ್ವದ ಬೆಳವಣಿಗೆಯಲ್ಲಿ ಪಶ್ಚಿಮ ಬಂಗಾಳದ ಎಲ್ಲ 42 ಲೋಕಸಭಾ ಕ್ಷೇತ್ರಗಳಿಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಭ್ಯರ್ಥಿಗಳನ್ನು ಪ್ರಕಟಿಸಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಟಿಎಂಸಿ ಏಕಾಂಗಿಯಾಗಿ ಸ್ಪರ್ಧಿಸಲಿದ್ದು, ಕೃಷ್ಣಾನಗರ ಕ್ಷೇತ್ರದಿಂದ ಮತ್ತೆ ಮಹುವಾ ಮೊಯಿತ್ರಾ ಅವರನ್ನೇ ಟಿಎಂಸಿ ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಗಿದೆ.

ಅಚ್ಚರಿಯ ಆಯ್ಕೆಯಾಗಿ ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಅವರೂ ಟಿಎಂಸಿ ಅಭ್ಯರ್ಥಿಯಾಗಿ ಬಹರಂಪುರ ಕ್ಷೇತ್ರದಿಂದ ಸ್ಪರ್ಧೆಗಿಳಿಸಿದ್ದು ಅವರು ಕಾಂಗ್ರೇಸ್ ಲೋಕಸಭೆ ವಿರೋಧ ಪಕ್ಷದ ನಾಯಕ ಅಧಿರಂಜನ್ ಚೌಧ್ರಿ ವಿರುದ್ಧ ಸೆಣಸಲಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಇಂಡಿಯಾ ಮೈತ್ರಿಕೂಟದೊಂದಿಗೆ ಮೈತ್ರಿ ಮಾಡಿಕೊಳ್ಳುವ ಕುರಿತ ಎಲ್ಲ ವದಂತಿಗಳಿಗೆ ತೆರೆ ಎಳೆದಿರುವ ಮಮತಾ ಬ್ಯಾನರ್ಜಿ, ತೃಣಮೂಲ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ನಮ್ಮ ಪಕ್ಷವು ಉತ್ತರ ಪ್ರದೇಶದ ಒಂದು ಕ್ಷೇತ್ರದಲ್ಲಿ ಸ್ಪರ್ಧಿಸಲು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್‌ರೊಂದಿಗೆ ಮಾತುಕತೆ ನಡೆಸುತ್ತಿದೆ ಎಂದೂ ಹೇಳಿದ್ದಾರೆ. ಕೋಲ್ಕತ್ತಾದ ಬ್ರಿಗೇಡ್ ಪರೇಡ್ ಮೈದಾನದಲ್ಲಿ ಆಯೋಜಿಸಲಾಗಿದ್ದ ‘ಜನ ಗರ್ಜನ್ ಸಭಾ’ದಲ್ಲಿ ಅವರು ತಮ್ಮ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದರು. ಸಮಾವೇಶದಲ್ಲಿ ಲಕ್ಷಾಂತರ ಬೆಂಬಲಿಗರು ಹಾಗೂ ಅಸಂಖ್ಯಾತ ಬ್ಲಾಕ್ ಮಟ್ಟದ ನಾಯಕರು ಭಾಗವಹಿಸಿದ್ದರು.

ಮಮತಾ ಬ್ಯಾನರ್ಜಿ ಅವರ ಸೋದರಳಿಯ ಮತ್ತು ಉತ್ತರಾಧಿಕಾರಿ ಅಭಿಷೇಕ್ ಬ್ಯಾನರ್ಜಿ ಡೈಮಂಡ್ ಹಾರ್ಬರ್‌ನಿಂದ ಸ್ಪರ್ಧಿಸಲಿದ್ದಾರೆ. ನಟ ಶತ್ರುಘ್ನ ಸಿನ್ಹಾ ಅವರು ಅಸನ್ಸೋಲ್‌ನಿಂದ ಲೋಕಸಭೆ ಚುನಾವಣಾ ಕಣಕ್ಕಿಳಿಯಲಿದ್ದಾರೆ. 1983ರಲ್ಲಿ ಭಾರತ ವಿಶ್ವಕಪ್‌ ಗೆದ್ದ ಕ್ರಿಕೆಟ್‌ ತಂಡದ ಸದಸ್ಯ ಕೀರ್ತಿ ಅಜಾದ್‌ ದುರ್ಗಾಪುರ ಬುರ್ದ್ವಾನ್‌ನಿಂದ ಕಣಕ್ಕಿಳಿಯುವರಲ್ಲಿ ಪ್ರಮುಖರು.

Previous Post
ರಾಜ್ಯ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಕಸರತ್ತು ಟಿಕೇಟ್ ಗಾಗಿ ಖಾವಿ ಪಟ್ಟು, ಮಾಜಿ ಸಿಎಂಗಳ ಭವಿಷ್ಯ ಹೈಕಮಾಂಡ್ ಕೈಯಲ್ಲಿ
Next Post
ಕೊಟ್ಟ ಮಾತಿನಂತೆ ನಡೆದುಕೊಳ್ಳುವವರನ್ನು ಬೆಂಬಲಿಸಿದರೆ ರಾಜ್ಯದ ಅಭಿವೃದ್ಧಿ: ಮುಖ್ಯಮಂತ್ರಿ ಸಿದ್ದರಾಮಯ್ಯ

Recent News