ಪೌರತ್ವ ಪ್ರಮಾಣಪತ್ರ ಹಂಚಿಕೆ ನೀತಿ ಸಂಹಿತೆ ಉಲ್ಲಂಘನೆ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಐಯುಎಂಎಲ್

ಪೌರತ್ವ ಪ್ರಮಾಣಪತ್ರ ಹಂಚಿಕೆ ನೀತಿ ಸಂಹಿತೆ ಉಲ್ಲಂಘನೆ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಐಯುಎಂಎಲ್

ನವದೆಹಲಿ : ಪೌರತ್ವ ತಿದ್ದುಪಡಿ ಕಾಯ್ದೆ ಅಡಿ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದ ಮುಸ್ಲಿಮೇತರರಿಗೆ ಭಾರತೀಯ ಪೌರತ್ವ ನೀಡುವ ಪ್ರಕ್ರಿಯೆಯನ್ನು ಕೇಂದ್ರ ಗೃಹ ಇಲಾಖೆ ಪ್ರಾರಂಭಿಸಿದೆ. ದೇಶದಲ್ಲಿ ಲೋಕಸಭೆ ಚುನಾವಣೆಯ ನಡೆಯುತ್ತಿರುವ ಮಧ್ಯೆ ಕೇಂದ್ರ ಸರ್ಕಾರ ಪೌರತ್ವ ಪ್ರಮಾಣ ಪತ್ರಗಳನ್ನು ವಿತರಿಸುವುದು ಚುನಾವಣಾ ಮಾರ್ಗಸೂಚಿಗಳ ಉಲ್ಲಂಘನೆಯಾಗಲಿದೆ ಎಂದು ಐಯುಎಂಎಲ್‌ ಆರೋಪಿಸಿದೆ.

ಈ ಸಂಬಂಧ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿರುವ ಮುಸ್ಲಿಂ ಲೀಗ್, ಮತದಾರರ ಮೇಲೆ ಪ್ರಭಾವ ಬೀರಲು ಕೇಂದ್ರ ಸರ್ಕಾರ ಸಿಎಎ ಅಡಿಯಲ್ಲಿ ಪೌರತ್ವ ಪ್ರಮಾಣ ಪತ್ರಗಳನ್ನು ವಿತರಿಸಲು ಪ್ರಾರಂಭಿಸಿದೆ. ಇದು ಚುನಾವಣಾ ಮಾರ್ಗಸೂಚಿಗಳ ಉಲ್ಲಂಘನೆಯಾಗಿದೆ. ಇದರ ವಿರುದ್ಧ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು ಒತ್ತಾಯಿಸಿದೆ.

ಈ ಬಗ್ಗೆ ಮಾತನಾಡಿದ ಐಯುಎಂಎಲ್ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿಎಂಎ ಸಲಾಂ, ಈ ವಿಷಯದ ಬಗ್ಗೆ ಕಾನೂನು ಅಭಿಪ್ರಾಯವನ್ನು ಪಡೆದುಕೊಳ್ಳಲು ಐಯುಎಂಎಲ್ ದೆಹಲಿಯ ಹಿರಿಯ ವಕೀಲರೊಂದಿಗೆ ಚರ್ಚೆಯನ್ನು ಪ್ರಾರಂಭಿಸಿದೆ. ಸಿಎಎ ವಿರುದ್ಧದ ನಮ್ಮ ಹೋರಾಟವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲು ನಾವು ವಕೀಲರನ್ನು ಸಂಪರ್ಕಿಸಿದ್ದೇವೆ. ಈ ವಿಚಾರದಲ್ಲಿ ಪಕ್ಷವು ಸುಪ್ರೀಂ ಕೋರ್ಟ್ ಮತ್ತು ಚುನಾವಣಾ ಆಯೋಗವನ್ನು ಸಂಪರ್ಕಿಸಲಿದೆ ಎಂದು ಹೇಳಿದ್ದಾರೆ.

ಈಗಾಗಲೇ ಮೊದಲ ಹಂತದಲ್ಲಿ ಅರ್ಜಿ ಸಲ್ಲಿಸಿದ 300ಕ್ಕೂ ಅಧಿಕ ಜನರಿಗೆ ಕೇಂದ್ರ ಸರ್ಕಾರ ಪೌರತ್ವ ಪ್ರಮಾಣ ಪತ್ರ ವಿತರಿಸಿದೆ. 14 ಜನರು ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಅವರಿಂದ ಬುಧವಾರ ಪ್ರಮಾಣ ಪತ್ರ ಪಡೆದಿದ್ದಾರೆ. ನಾಲ್ಕು ವರ್ಷಗಳ ಮುಂಚೆ, 2019ರಲ್ಲಿ ಸಿಎಎ ಮಸೂದೆ ಅಂಗೀಕಾರಗೊಂಡರೂ ಕೇಂದ್ರ ಸರ್ಕಾರ ಚುನಾವಣೆಯ ಹೊಸ್ತಿಲಲ್ಲಿ ಈ ವರ್ಷದ ಮಾರ್ಚ್ ತಿಂಗಳಲ್ಲಿ ಕಾಯ್ದೆ ಕುರಿತು ಅಧಿಸೂಚನೆ ಹೊರಡಿಸಿತ್ತು.

Previous Post
ಮೇ 23ರಿಂದ ಮೇ 28ರವರೆಗೆ ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮಳೆ
Next Post
ರಾಹುಲ್ ನಿಮ್ಮವ ಎಂದು ಪರಿಗಣಿಸಿ ಅವನು ನಿರಾಶೆಗೊಳಿಸುವುದಿಲ್ಲ – ಸೋನಿಯಗಾಂಧಿ

Recent News