ಬೆಂಗಳೂರು, ಮೇ 8: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಮಾತನಾಡಿದ್ದು, ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪ್ರಜ್ವಲ್ ರೇವಣ್ಣ ಅವರು ವಿದೇಶದಲ್ಲಿದ್ದಾರೆ, ಅವರು ಬರುವವರೆಗೂ ತನಿಖೆಯನ್ನು ತೋರಿತಾ ಗತಿಯಲ್ಲಿ ಮಾಡುವುದು ಕಷ್ಟ ಎಂದು ತಿಳಿಸಿದರು. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣವನ್ನು ಎಸ್ ಐ ಟಿ ಗಂಭೀರವಾಗಿ ತನಿಖೆ ನಡೆಸುತ್ತಿದೆ. ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಹೋಗಿದ್ದಾರೆ.ಪ್ರಜ್ವಲ್ ಅವರನ್ನು ಕರೆತರಲು ಎಸ್‌ಐಟಿ ತಂಡ ಸಿಬಿಐ ನೆರವು ಕೋರಿದೆ. ಬ್ಲೂ ಕಾರ್ನರ್ ನೋಟಿಸ್ ಹೊರಡಿಸುವಂತೆ ಎಸ್‌ಐಟಿ ಸಿಬಿಐಗೆ ಮನವಿ ಮಾಡಿದೆ. ಪ್ರಜ್ವಲ್ ವಾಪಸ್ ಬರೊವರೆಗೂ ತ್ವರಿತಗತಿ ವಿಚಾರಣೆ ಕಷ್ಟ ಎಂದು ತಿಳಿಸಿದರು.ಇನ್ನು ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಜಿ ಪರಮೇಶ್ವರ್, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮಾಜಿ ಸಚಿವ HD ರೇವಣ್ಣ ಅವರನ್ನು ಬಂಧಿಸಲಾಗಿದೆ. ಪ್ರಕರಣದ ಕುರಿತಂತೆ ಎಸ್‌ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಅಲ್ಲದೆ ದೂರು ನೀಡಿದವರಿಂದ ಮಾಹಿತಿಯನ್ನು ಸಂಗ್ರಹ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಜ್ವಲ್ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಸಿಬಿಐ ತನಿಖೆಯ ಬೇಡಿಕೆಯನ್ನು ಕರ್ನಾಟಕ ಎಚ್‌ಎಂ ತಿರಸ್ಕರಿಸಿದ್ದಾರೆ
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂಬ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರ ಬೇಡಿಕೆಯನ್ನು ಕರ್ನಾಟಕದ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ತಳ್ಳಿಹಾಕಿದ್ದಾರೆ. ರಾಜ್ಯದ ಅಪರಾಧ ತನಿಖಾ ಇಲಾಖೆ (ಸಿಐಡಿ) ತನಿಖೆಯನ್ನು ಸಂಪೂರ್ಣವಾಗಿ ನಿಭಾಯಿಸಲು ಸಮರ್ಥವಾಗಿದೆ ಎಂದು ಸಚಿವರು ಒತ್ತಿ ಹೇಳಿದರು.
ಮಾಧ್ಯಮವನ್ನುದ್ದೇಶಿಸಿ ಮಾತನಾಡಿದ ಡಾ.ಪರಮೇಶ್ವರ ಅವರು, “ನೂರಕ್ಕೂ ಹೆಚ್ಚು ಪ್ರಶ್ನೆಗಳನ್ನು ಕುಮಾರಸ್ವಾಮಿ ಮುಂದಿಟ್ಟರು. ನಾನು ಪ್ರತಿಯೊಂದನ್ನು ಪ್ರತ್ಯೇಕವಾಗಿ ಹೇಳಲು ಸಾಧ್ಯವಾಗದಿದ್ದರೂ, ಸಿಬಿಐ ತನಿಖೆಗಾಗಿ ಅವರ ಮನವಿಯನ್ನು ಪರಿಗಣಿಸುವುದಿಲ್ಲ ಎಂಬುದನ್ನು ಗಮನಿಸುವುದು ಅತ್ಯಗತ್ಯ. ನಮಗೆ ಸಂಪೂರ್ಣ ವಿಶ್ವಾಸವಿದೆ. SIT ಭರವಸೆ ನೀಡಿದೆ, ನಾವು ಸಂಪೂರ್ಣ ತನಿಖೆ ನಡೆಸಲು ಬದ್ಧರಾಗಿದ್ದೇವೆ.