ಪ್ರಣಾಳಿಕೆ ಭರವಸೆಯಿಂದಾಗುವ ಆರ್ಥಿಕ ಲಾಭ ಅಭ್ಯರ್ಥಿಯ ಭ್ರಷ್ಟಚಾರವಲ್ಲ, ಬಿ.ಝಡ್.ಜಮೀರ್ ಅಹಮದ್ ಖಾನ್ ರಿಲೀಫ್ ನೀಡಿದ ಸುಪ್ರೀಂ

ಪ್ರಣಾಳಿಕೆ ಭರವಸೆಯಿಂದಾಗುವ ಆರ್ಥಿಕ ಲಾಭ ಅಭ್ಯರ್ಥಿಯ ಭ್ರಷ್ಟಚಾರವಲ್ಲ, ಬಿ.ಝಡ್.ಜಮೀರ್ ಅಹಮದ್ ಖಾನ್ ರಿಲೀಫ್ ನೀಡಿದ ಸುಪ್ರೀಂ

ನವದೆಹಲಿ : ರಾಜಕೀಯ ಪಕ್ಷಗಳು ತಮ್ಮ ಚುನಾವಣಾ ಪ್ರಣಾಳಿಕೆಗಳಲ್ಲಿನ ಭರವಸೆಗಳನ್ನು ಈಡೇರಿಸುವಾಗ ಅದು ಸಾರ್ವಜನಿಕರಿಗೆ ನೇರ ಅಥವಾ ಪರೋಕ್ಷ ಆರ್ಥಿಕ ಸಹಾಯಕ್ಕೆ ಕಾರಣವಾಗಬಹುದು, ಆದರೆ ಅದು ಪ್ರಜಾಪ್ರತಿನಿಧಿ ಕಾಯಿದೆಯಡಿಯಲ್ಲಿ ಭ್ರಷ್ಟಾಚಾರವಾಗುವುದಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಬಿ.ಝಡ್.ಜಮೀರ್ ಅಹಮದ್ ಖಾನ್ ಆಯ್ಕೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಚುನಾವಣಾ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾ. ಸೂರ್ಯಕಾಂತ್ ನೇತೃತ್ವದ ದ್ವಿ ಸದಸ್ಯ ಪೀಠ ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದಿದೆ.

ರಾಜಕೀಯ ಪಕ್ಷವು ತನ್ನ ಪ್ರಣಾಳಿಕೆಯಲ್ಲಿನ ಭರವಸೆಗಳನ್ನು ಈಡೇರಿಸುವಾಗ ಸಾರ್ವಜನಿಕರಿಗೆ ನೇರವಾಗಿ ಅಥವಾ ಪರೋಕ್ಷವಾಗಿ ಆರ್ಥಿಕ ಸಹಾಯಕ್ಕೆ ಕಾರಣವಾಗುತ್ತವೆ, ಹಾಗಂತ ಅದು ಆ ಪಕ್ಷದ ಅಭ್ಯರ್ಥಿಯ ಭ್ರಷ್ಟ ಆಚರಣೆಗೆ ಕಾರಣವಾಗುತ್ತದೆ ಎಂಬ ವಾದವನ್ನು ನಾವು ಒಪ್ಪಲು ಸಾಧ್ಯವಿಲ್ಲ ಎಂದು ತನ್ನ ಆದೇಶದಲ್ಲಿ ಸುಪ್ರೀಂಕೋರ್ಟ್ ತಿಳಿಸಿದೆ.

2023 ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿನ ಭರವಸೆಗಳು ಸಾರ್ವಜನಿಕರಿಗೆ ನೇರ ಮತ್ತು ಪರೋಕ್ಷ ಆರ್ಥಿಕ ಸಹಾಯವಾಗಿದ್ದು, ಇದು ಭ್ರಷ್ಟ ಚುನಾವಣಾ ಅಭ್ಯಾಸವಾಗಿದೆ ಎಂದು ಶಶಾಂಕ್ ಜೆ ಶೀಧರ್ ಮೊದಲು ಹೈಕೋರ್ಟ್ ಮೊರೆ ಹೋಗಿದ್ದರು, ಹೈಕೋರ್ಟ್ ನಲ್ಲಿ ಅರ್ಜಿ ವಜಾ ಆದ ಬಳಿಕ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.

Previous Post
ಬೃಹತ್ ಭೂಕುಸಿತ 2,000 ಕ್ಕೂ ಹೆಚ್ಚು ಜನರು ಸಮಾಧಿ
Next Post
ಬಿಭವ್ ಕುಮಾರ್ ಜಾಮೀನು ಅರ್ಜಿ ವಜಾ ಕೋರ್ಟ್‌ನಲ್ಲಿ ಕಣ್ಣಿರಿಟ್ಟ ಸ್ವಾತಿ ಮಲಿವಾಲ

Recent News