ಪ್ರಧಾನಿ ಮೋದಿಗೆ ರಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ: ಭಾರತೀಯರಿಗೆ ಪ್ರಶಸ್ತಿ ಅರ್ಪಿಸಿದ PM

ಪ್ರಧಾನಿ ಮೋದಿಗೆ ರಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ: ಭಾರತೀಯರಿಗೆ ಪ್ರಶಸ್ತಿ ಅರ್ಪಿಸಿದ PM

ಮಾಸ್ಕೋ:- ಮಾಸ್ಕೋದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೆ ರಷ್ಯಾದ ಅತಿದೊಡ್ಡ ನಾಗರಿಕ ಪ್ರಶಸ್ತಿಯನ್ನು ಪ್ರದಾನ ಮಾಡಿದರು.

ರಷ್ಯಾ ಮತ್ತು ಭಾರತದ ನಡುವಿನ ವಿಶೇಷವಾದ ಕಾರ್ಯತಂತ್ರದ ಪಾಲುದಾರಿಕೆ ಮತ್ತು ಉಭಯ ದೇಶಗಳ ನಡುವಿನ ಸೌಹಾರ್ದ ಸಂಬಂಧಗಳ ಅಭಿವೃದ್ಧಿಗೆ ಅವರ ವಿಶಿಷ್ಟ ಕೊಡುಗೆಗಾಗಿ ಭಾರತದ ಪ್ರಧಾನ ಮಂತ್ರಿ ಮೋದಿಗೆ ಈ ಗೌರವವನ್ನು ನೀಡಲಾಯಿತು. ಅಭಿನಂದನಾ ಸಮಾರಂಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ರಷ್ಯಾದ ಅತ್ಯುನ್ನತ ಪ್ರಶಸ್ತಿಯನ್ನು ತಮಗೆ ನೀಡಿದ್ದಕ್ಕಾಗಿ ವ್ಲಾಡಿಮಿರ್ ಪುಟಿನ್ ಅವರಿಗೆ ಧನ್ಯವಾದಗಳನ್ನು ಅರ್ಪಿಸಿದರು. ಈ ಪ್ರಶಸ್ತಿಯನ್ನು ಭಾರತದ ಜನರಿಗೆ ಅರ್ಪಿಸುವುದಾಗಿ ಅವರು ಹೇಳಿದ್ದಾರೆ.

ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೊಸ್ಟಲ್ ಪ್ರಶಸ್ತಿಯನ್ನು 1698ರಲ್ಲಿ ತ್ಸಾರ್ ಪೀಟರ್ ದಿ ಗ್ರೇಟ್ ಸ್ಥಾಪಿಸಿದರು. ಸೇಂಟ್ ಆಂಡ್ರ್ಯೂ ಅವರ ಗೌರವಾರ್ಥವಾಗಿ ಈ ಪ್ರಶಸ್ತಿಯನ್ನು ಸ್ಥಾಪಿಸಲಾಯಿತು.

ಭಾರತ ಮತ್ತು ರಷ್ಯಾ ನಡುವಿನ ದ್ವಿಪಕ್ಷೀಯ ಬಾಂಧವ್ಯ ವೃದ್ಧಿಗೆ ನೀಡಿದ ಅಸಾಧಾರಣ ಕೊಡುಗೆಯನ್ನು ಗುರುತಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಇಂದು ಅಧಿಕೃತವಾಗಿ ‘ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೊಸ್ಟಲ್’ ಪ್ರಶಸ್ತಿ ಪ್ರದಾನ ಮಾಡಿದರು.

Previous Post
LPG ಸಿಲಿಂಡರ್‌ಗಳ eKYC ದೃಢೀಕರಣಕ್ಕೆ ಗಡುವು ಇಲ್ಲ ಸಚಿವ ಹರ್ದೀಪ್ ಸಿಂಗ್ ಪುರಿ ಸ್ಪಷ್ಟನೆ
Next Post
‘ರಾಮನಗರ ಜಿಲ್ಲೆ’ಯನ್ನು ‘ಬೆಂಗಳೂರು ದಕ್ಷಿಣ’ವೆಂದು ಮರುನಾಮಕರಣಕ್ಕೆ ಸಿಎಂಗೆ ಪ್ರಸ್ತಾವನೆ ಸಲ್ಲಿಕೆ

Recent News