
ಚಿಕ್ಕಬಳ್ಳಾಪುರ , ಏ. 20: ನನ್ನನ್ನು ಪ್ರಧಾನಿ ಹುದ್ದೆಯಿಂದ ಕೆಳಗಿಳಿಸಲು ದೊಡ್ಡ ದೊಡ್ಡ ನಾಯಕರು ಯತ್ನಿಸುತ್ತಿದ್ದಾರೆ. ಅದಕ್ಕಾಗಿ ದೊಡ್ಡ ಮಟ್ಟದಲ್ಲಿ ಸಂಚು ನಡೆಯುತ್ತಿದೆ. ಆದರೆ, ನನಗೆ ದೇಶದ ತಾಯಂದಿರ ಆಶೀರ್ವಾದ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಹೇಳಿದ್ದಾರೆ. ಇಂದು ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಬಳಿ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ವಿಕಸಿತ ಭಾರತಕ್ಕಾಗಿ ಎನ್‌ಡಿಎ ಅಭ್ಯರ್ಥಿಗಳನ್ನು ಬೆಂಬಲಿಸಿ. ಕರ್ನಾಟಕದ ಅಭಿವೃದ್ಧಿಗೆ ಕೇಂದ್ರದ ಎನ್‌ಡಿಎ ಸರ್ಕಾರ ಬದ್ಧವಾಗಿದೆ. ಕರ್ನಾಟಕದ ಉಜ್ವಲ ಭವಿಷ್ಯಕ್ಕಾಗಿ ಎನ್‌ಡಿಎ ಅಭ್ಯರ್ಥಿಗಳನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು. ಇದೇ ವೇಳೆ ಅವರು ಪ್ರಧಾನಿ ಹುದ್ದೆಯಿಂದ ಕೆಳಗಿಳಿಸಲು ದೊಡ್ಡ ದೊಡ್ಡ ನಾಯಕರ ಯತ್ನ ಆದರೆ ನನಗೆ ದೇಶದ ತಾಯಂದಿರ ಆಶೀರ್ವಾದ ಇದೆ ಎಂದು ತಿಳಿಸಿದರು.ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಬಳಿ ಎನ್ ಡಿ ಎ ಸಮಾವೇಶದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾಷಣದಲ್ಲಿ ತಿಳಿಸಿದರು. ಪ್ರತಿಯೊಬ್ಬ ಮಹಿಳೆಯ ಸುರಕ್ಷತೆಗೆ ನನ್ನ ಮೊದಲ ಆದ್ಯತೆಯಾಗಿದೆ. ಹೈನುಗಾರಿಕೆ ಮೀನುಗಾರಿಕೆ ಮಾಡುವವರಿಗೂ ಕಿಸಾನ್ ಕಾರ್ಡ್ ನೀಡಲಾಗಿದೆ. ಹೆಣ್ಣು ಮಕ್ಕಳಿಗೂ ಡ್ರೋನ್ ತರಬೇತಿ ನೀಡಲಾಗುತ್ತಿದೆ. ಮಹಿಳೆಯರು ರೈತರ ಆದಾಯ ದ್ವಿಗುಣಗೊಳಹಿಸಲು ಕ್ರಮ ಕೈಗೊಳ್ಳಲಾಗಿದೆ.

ಕಾಂಗ್ರೆಸ್ ಸರ್ಕಾರ ಬಂದ ಬಳಿಕ ರೈತರಿಗೆ ಕಿಸಾನ್ ಸಮ್ಮಾನ್ ಹಣ ಸಿಗುತ್ತಿಲ್ಲ ಇಂಡಿಯಾ ಸಮಾವೇಶದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ತಿಳಿಸಿದರು.ದಿನದ 24 ಗಂಟೆಯೂ ದೇಶಕ್ಕಾಗಿ ನಿಮಗಾಗಿ ದುಡಿಯುತ್ತಿದ್ದೇನೆ. ಉಚಿತವಾಗಿ ಪಡಿತರ ನೀಡುತ್ತಿದ್ದೇವೆ. ಇದು ಮೋದಿ ಗ್ಯಾರಂಟಿ ಮುಂದಿನ ಐದು ವರ್ಷವೂ ಕೂಡ ಉಚಿತವಾಗಿ ಪಡಿತರ ನೀಡುತ್ತೇವೆ. ಬಡವರಿಗೆ ಉಚಿತ ವೈದ್ಯ ಚಿಕಿತ್ಸೆ ಸಿಗುತ್ತೆ ಎಂದು ಯಾರು ಭಾವಿಸಿರಲಿಲ್ಲ. ಎಸ್ ಸಿ ಎಸ್ ಟಿ ಸಮುದಾಯ ನನ್ನ ಸರ್ಕಾರದ ಅತ್ಯಂತ ದೊಡ್ಡ ಫಲಾನುಭವಿಗಳಾಗಿದ್ದಾರೆ ಎಂದರು.25 ಕೋಟಿ ಜನರನ್ನು ಬಡತನ ರೇಖೆಯಿಂದ ಮೇಲಕ್ಕೆ ಎತ್ತಲಾಗಿದೆ ಆದಿವಾಸಿ ಸಮುದಾಯದವರಿಗೆ ರಾಷ್ಟ್ರಪತಿ ಹುದ್ದೆ ನೀಡಲಾಗಿದೆ ಮುದ್ರಾ ಯೋಜನೆ ಅಡಿ ಶಿಯೂರಿಟಿ ಇಲ್ಲದೆ 20 ಲಕ್ಷ ಸಾಲ ನೀಡಲಾಗುತ್ತಿದೆ ಎಂದು ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.