ಬಂಗಾಳ ವಿಧಾನಸಭೆಯಲ್ಲಿ ಅತ್ಯಚಾರ ವಿರೋಧಿ ಮಸೂದೆಯನ್ನು ಮಂಡಣೆ

ಬಂಗಾಳ ವಿಧಾನಸಭೆಯಲ್ಲಿ ಅತ್ಯಚಾರ ವಿರೋಧಿ ಮಸೂದೆಯನ್ನು ಮಂಡಣೆ

ಕೊಲ್ಕತ್ತಾ : ಆರ್‌ಜಿಕರ್ ವೈದ್ಯಕೀಯ ಕಾಲೇಜಿನಲ್ಲಿ ಟ್ರೈನಿ ವೈದ್ಯೆ ಮೇಲೆ ನಡೆದ ಅತ್ಯಚಾರ ಮತ್ತು ಕೊಲೆ ಪ್ರಕರಣ ದೇಶದ್ಯಾಂತ ಕಿಚ್ಚು ಹೊತ್ತಿಸಿದ್ದು ಈ ಬೆನ್ನಲೆ ಎಚ್ಚತ್ತುಕೊಂಡಿರುವ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಎರಡು ದಿನಗಳ ವಿಶೇಷ ಅಧಿವೇಶನ ಕರೆದಿದ್ದು ಸದನದಲ್ಲಿ ಅತ್ಯಚಾರ ವಿರೋಧಿ ಮಸೂದೆಯನ್ನು ಮಂಡಿಸಿ, ಸರ್ವಾನುಮತದಿಂದ ಅಂಗಿಕಾರ ಪಡೆದಿದೆ.

ಅತ್ಯಾಚಾರ ವಿರೋಧಿ ಮಸೂದೆಯನ್ನು ರಾಜ್ಯ ಕಾನೂನು ಸಚಿವ ಮೊಲೊಯ್ ಘಾಟಕ್ ಮಂಡಿಸಿದರು. ಪ್ರಸ್ತಾವಿತ ಮಸೂದೆಯಲ್ಲಿ, ಅತ್ಯಾಚಾರ ಮತ್ತು ಬಲಿಪಶುವಿನ ಮರಣದ ತಪ್ಪಿತಸ್ಥರಿಗೆ ಮರಣ ದಂಡನೆಯನ್ನು ನೀಡಲು ಅವಕಾಶವಿದೆ. ಇದಲ್ಲದೆ, ಅತ್ಯಾಚಾರ ಮತ್ತು ಸಾಮೂಹಿಕ ಅತ್ಯಾಚಾರದ ತಪ್ಪಿತಸ್ಥರಿಗೆ ಜಾಮೀನು ರಹಿತ ಜೀವಾವಧಿ ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸಲಾಗಿದೆ. ಸದ್ಯ ಇದಕ್ಕೆ ರಾಜ್ಯಪಾಲರ ಅಂಕಿತ ಹಾಕಬೇಕಿದೆ.

ಮಸೂದೆಯ ಮೇಲಿನ ಚರ್ಚೆಯ ವೇಳೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾತನಾಡಿ ಈ ಮಸೂದೆಯನ್ನು ಐತಿಹಾಸಿಕ ಎಂದು ಬಣ್ಣಿಸಿದರು. ಅತ್ಯಾಚಾರ ಎಸಗಿದ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದರು. ಮಸೂದೆಗೆ ಒಪ್ಪಿಗೆ ನೀಡುವಂತೆ ರಾಜ್ಯಪಾಲ ಸಿವಿ ಆನಂದ ಬೋಸ್ ಅವರನ್ನು ಒತ್ತಾಯಿಸುವಂತೆ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರನ್ನು ಕೇಳಿದರು.

ಮಸೂದೆಯನ್ನು ಬಿಜೆಪಿ ಸ್ವಾಗತಿಸಿದೆ, ಆದರೆ ಭಾರತೀಯ ನ್ಯಾಯ್ ಸಂಹಿತಾ (ಬಿಎನ್‌ಎಸ್) ಸಹ ಮಹಿಳೆಯರು ಮತ್ತು ಮಕ್ಕಳ ವಿರುದ್ಧದ ಅಪರಾಧವನ್ನು ಎದುರಿಸಲು ಎಲ್ಲಾ ಕಠಿಣ ನಿಬಂಧನೆಗಳನ್ನು ಹೊಂದಿದೆ ಎಂದು ಉಲ್ಲೇಖಿಸಿದೆ. ಪಕ್ಷದ ನಾಯಕ ಮತ್ತು ರಾಜ್ಯ ಅಸೆಂಬ್ಲಿಯಲ್ಲಿ ವಿರೋಧ ಪಕ್ಷದ ನಾಯಕ ಸುವೆಂದು ಅಧಿಕಾರಿ ಅವರು ಮಸೂದೆಗೆ ಏಳು ತಿದ್ದುಪಡಿಗಳನ್ನು ಕೋರುವ ಪ್ರಸ್ತಾಪವನ್ನು ಮಂಡಿಸಿದರು.

ನಾವು ಈ ಮಸೂದೆ ಕಾನೂನಾಗಿ ತಕ್ಷಣವೇ ಜಾರಿಗೊಳಿಸಬೇಕೆಂದು ಬಯಸುತ್ತೇವೆ, ಇದು ನಿಮ್ಮ ಜವಾಬ್ದಾರಿಯಾಗಿದೆ. ನಮಗೆ ಫಲಿತಾಂಶಗಳು ಬೇಕು, ನಾವು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತೇವೆ. ಮುಖ್ಯಮಂತ್ರಿಗಳು ಏನು ಬೇಕಾದರೂ ಹೇಳಬಹುದು ಆದರೆ ಈ ಮಸೂದೆಯನ್ನು ತಕ್ಷಣವೇ ಜಾರಿಗೆ ತರಲಾಗುವುದು ಎಂದು ನೀವು ಗ್ಯಾರಂಟಿ ನೀಡಬೇಕು ಎಂದು ಸುವೆಂದು ಅಧಿಕಾರಿ ಹೇಳಿದರು.

 

Previous Post
ಆಂಧ್ರ ತೆಲಂಗಾಣದಲ್ಲಿ ಭಾರಿ ಮಳೆ ಪ್ರವಾಹ ; 35 ಮಂದಿ ಸಾವು
Next Post
ಭದ್ರತಾ ಪಡೆಗಳಿಂದ ಎನ್‌ಕೌಂಟರ್ ; 9 ನಕ್ಸಲೀಯರ ಹತ್ಯೆ

Recent News