ಬರ ಪರಿಹಾರ ಬಿಡುಗಡೆಗೆ ಈ ವಾರದಲ್ಲಿ ಕ್ರಮ – ಸುಪ್ರೀಂಕೋರ್ಟ್ ಗೆ ಕೇಂದ್ರ ಸರ್ಕಾರದ ಭರವಸೆ – ರಾಜ್ಯ ಸರ್ಕಾರದ ಕಾನೂನು ಹೋರಾಟಕ್ಕೆ ಜಯ

ಬರ ಪರಿಹಾರ ಬಿಡುಗಡೆಗೆ ಈ ವಾರದಲ್ಲಿ ಕ್ರಮ – ಸುಪ್ರೀಂಕೋರ್ಟ್ ಗೆ ಕೇಂದ್ರ ಸರ್ಕಾರದ ಭರವಸೆ – ರಾಜ್ಯ ಸರ್ಕಾರದ ಕಾನೂನು ಹೋರಾಟಕ್ಕೆ ಜಯ

ನವದೆಹಲಿ : ಬರ ಪರಿಹಾರ ಬಿಡುಗಡೆಗೆ ಆಗ್ರಹಿಸಿ ಕಾನೂನು ಹೋರಾಟ ಆರಂಭಿಸಿದ ರಾಜ್ಯ ಕಾಂಗ್ರೇಸ್ ಸರ್ಕಾರಕ್ಕೆ ಜಯ ಸಿಕ್ಕಿದೆ. ಬರ ಪರಿಹಾರ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಈ ವಾರದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರದ ಪರ ವಕೀಲ ಅಟಾರ್ನಿ ಜನರಲ್ ಆರ್.ವೆಂಕಟರಮಣಿ ಸುಪ್ರೀಂಕೋರ್ಟ್‌ಗೆ ಹೇಳಿದ್ದಾರೆ.

ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಇಂದು ನ್ಯಾ‌.ಬಿ.ಆರ್ ಗವಾಯಿ ನೇತೃತ್ವದ ದ್ವಿ ಸದಸ್ಯ ಪೀಠ ವಿಚಾರಣೆ ನಡೆಸಿತು. ವಿಚಾರಣೆ ಆರಂಭವಾಗುತ್ತಿದ್ದಂತೆ ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಿದ ಅಟಾರ್ನಿ ಜನರಲ್ ಆರ್.ವೆಂಕಟರಮಣಿ, ಚುನಾವಣಾ ಆಯೋಗದ ಜೊತೆಗೆ ಈ ಬಗ್ಗೆ ಚರ್ಚಿಸಿದ ಬರ ಪರಿಹಾರ ಬಿಡುಗಡೆ ಆಯೋಗ ಅನುಮತಿ ನೀಡಿದೆ ಹೀಗಾಗೀ ಈ ವಾರದೊಳಗೆ ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಕೇಂದ್ರ ಸರ್ಕಾರ ಭರವಸೆ ಬೆನ್ನಲೆ ಮಧ್ಯಪ್ರವೇಶ ಮಾಡಿದ ನ್ಯಾ.ಬಿ.ಆರ್ ಗವಾಯಿ, ಒಕ್ಕೂಟ ವ್ಯವಸ್ಥೆಯಲ್ಲಿ ಇಂತಹ ವಿಷಯಗಳನ್ನು ಸೌರ್ಹಾದಯುತವಾಗಿ ಬಗೆಹರಿಸಿಕೊಳ್ಳಬೇಕು, ಸುಪ್ರೀಂಕೋರ್ಟ್ ತನಕ ಈ ಪ್ರಕರಣ ಬರಬಾರದು ಎಂದು ಕೇಂದ್ರ ಸರ್ಕಾರಕ್ಕೆ ಕಿವಿ ಹಿಂಡಿದರು.

ವಿಚಾರಣೆ ಬಳಿಕ ದೆಹಲಿಯಲ್ಲಿ ಮಾತನಾಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಬರ ಪರಿಹಾರ ಬಿಡುಗಡೆಗೆ ನಿರ್ದೇಶನ ಕೋರಿ ಸುಪ್ರೀಂಕೋರ್ಟ್ ಗೆ ಅರ್ಜಿಯನ್ನು ಸಲ್ಲಿಸಿದ್ದೇವು, ಇಂದಿನ ವಿಚಾರಣೆಯಲ್ಲಿ ಕೇಂದ್ರ ಸರ್ಕಾರ ಈ ವಾರದಲ್ಲಿ ತಿರ್ಮಾನ ಕೈಗೊಳ್ಳುವ ಭರವಸೆ ನೀಡಿದೆ ರಾಜ್ಯ ಸರ್ಕಾರ ಕೋರ್ಟ್ ಮೂಲಕ ಪರಿಹಾರ ಪಡೆಯುವಂತಾಗಿದೆ, ಇದು ರಾಜ್ಯ ಸರ್ಕಾರದ ಕಾನೂನು ಹೋರಾಟಕ್ಕೆ ಸಂದ ಜಯ ಎಂದರು.

18,172 ಕೋಟಿ ಬರ ಪರಿಹಾರ ಬಿಡುಗಡೆಗೆ ಕೇಳಿದೆ 4663 ಕೋಟಿ ಹಣವನ್ನಾದರೂ ಮೊದಲು ಬಿಡುಗಡೆ ಮಾಡಲಿ ಇದರಿಂದ ರೈತರಿಗೆ ಸಹಾಯವಾಗಲಿದೆ, ರೈತರಿಗೆ ಅನಿವಾರ್ಯತೆ ಇದ್ದಾಗ ಪರಿಹಾರ ನೀಡಬೇಕು ಮುಗಿದ ಮೇಲಲ್ಲ ಕೇಂದ್ರ ಸರ್ಕಾರ ಕೂಡಲೇ ಪರಿಹಾರ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಮೊದಲ ಹಂತದ ವೇಳೆ ಪರಿಹಾರ ಬಿಡುಗಡೆ ರಾಜಕೀಯ ತಿರುವು ಪಡೆಯುವ ಸಾಧ್ಯತೆ ಬಗ್ಗೆ ಮಾತನಾಡಿದ ಅವರು, ನಮ್ಮ ಹೋರಾಟದಿಂದ ನ್ಯಾಯ ಸಿಗುವ ಹೊಸ್ತಿಲಲ್ಲಿ ಬಂದು ನಿಂತಿದ್ದೇವೆ, ಕೋರ್ಟ್ ಮಧ್ಯಪ್ರವೇಶ ಮಾಡದಿದ್ದರೆ ಸರ್ಕಾರ ಪರಿಹಾರ ಬಿಡುಗಡೆ ಮಾಡುತ್ತಿರಲಿಲ್ಲ ನಮ್ಮಗೆ ರಾಜ್ಯದ ರೈತರ ಹಿತ ಮುಖ್ಯ, ಇದು ರಾಜಕೀಯ ಮಾಡುವ ವಿಷಯ ಅಲ್ಲ. ಕೇಂದ್ರ ಸರ್ಕಾರ ಈಗಾಗಲೇ ನಮ್ಮಗೆ ಅನ್ಯಾಯ ಮಾಡಿದೆ, ಕೋರ್ಟ್ ಮೂಲಕ ನಾವು ಪರಿಹಾರ ಪಡೆಯುವ ಸನ್ನಿವೇಶ ಬಂದಿದೆ

ನಮ್ಮನ್ನು ಟೀಕೆ ಮಾಡಲು ಕೇಂದ್ರ ಸರ್ಕಾರದ ಬಳಿ ಒಂದು ಅಂಶವೂ ಇಲ್ಲ, ತಡ ಆಗಿರುವುದು ಕೇಂದ್ರ ಸರ್ಕಾರದ ಕಡೆಯಿಂದ ಮಾತ್ರ, ರಾಜ್ಯಕ್ಕೆ ಮಲತಾಯಿ ಧೋರಣೆ ಮಾಡುತ್ತಿದೆ ಎನ್ನುವುದಕ್ಕೆ ಇದೆ ಸಾಕ್ಷಿ, ಇಂತಹ ಪ್ರಕರಣದಲ್ಲಿ ಯಾಕೆ ರಾಜ್ಯಗಳು ಯಾಕೆ ಕೋರ್ಟ್ ಗೆ ಬರಬೇಕು ಎಂದು ಪೀಠ ಕೇಳಿದೆ ಇದಕ್ಕಿಂತ ಹೆಚ್ಚು ಏನ್ ಹೇಳಬೇಕು ಎಂದರು.

Previous Post
ಸೂರತ್ ನಲ್ಲಿ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ
Next Post
14 ವರ್ಷದ ಅತ್ಯಾಚಾರ ಸಂತ್ರಸ್ತೆಗೆ ಗರ್ಭಪಾತಕ್ಕೆ ಸುಪ್ರೀಂ ಅನುಮತಿ

Recent News