ಬಾಕಿ ಉಳಿದ ಬಿಜೆಪಿಯ ಐದು ಕ್ಷೇತ್ರಗಳಲ್ಲೂ ಹಾಲಿ ಸಂಸದರಿಗೆ ಟಿಕೆಟ್ ಮಿಸ್?

ಬಾಕಿ ಉಳಿದ ಬಿಜೆಪಿಯ ಐದು ಕ್ಷೇತ್ರಗಳಲ್ಲೂ ಹಾಲಿ ಸಂಸದರಿಗೆ ಟಿಕೆಟ್ ಮಿಸ್?

ನವದೆಹಲಿ : ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ತನ್ನ ಹುರಿಯಾಳುಗಳು ಘೋಷಿಸಿರುವ ಬಿಜೆಪಿ ಹೈಕಮಾಂಡ್ ಮೊದಲ ಪಟ್ಟಿಯಲ್ಲಿ ಹಾಲಿ ಸಂಸದರಿಗೆ ಶಾಕ್ ಕೊಟ್ಟಿದೆ. ಪ್ರತಾಪ್ ಸಿಂಹ, ನಳೀನ್ ಕುಮಾರ್ ಕಟೀಲ್, ಸದಾನಂದಗೌಡ, ಸಿದ್ದೇಶ್ವರ್, ಕರಡಿ ಸಂಗಣ್ಣ ಸೇರಿ ಒಂಭತ್ತು ಮಂದಿ ಸಂಸದರಿಗೆ ಕೋಕ್ ಕೊಡಲಾಗಿದೆ‌. ಮೈತ್ರಿ ಹಿನ್ನಲೆ ಬಾಕಿ ಉಳಿದ ಎಂಟು ಕ್ಷೇತ್ರಗಳ ಪೈಕಿ ಐದು ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧಿಸಲಿದ್ದು ಅಲ್ಲಿರುವ ಸಂಸದರನ್ನು ಬದಲಿಸುವ ಸಾಧ್ಯತೆಗಳಿದೆ.

ಕೋಲಾರ, ಹಾಸನ, ಮಂಡ್ಯ ಜೆಡಿಎಸ್ ಪಾಲಾಗಲಿದ್ದು ಬಾಕಿ ಉಳಿದ ಚಿತ್ರದುರ್ಗ, ಬೆಳಗಾವಿ, ಚಿಕ್ಕಬಳ್ಳಾಪುರ, ರಾಯಚೂರು, ಉತ್ತರ ಕನ್ನಡದಲ್ಲಿ ಹಾಲಿ ಸಂಸದರಿಗೆ ಟಿಕೆಟ್ ಕೈ ತಪ್ಪಬಹುದು ಎನ್ನಲಾಗುತ್ತಿದೆ. ಚಿತ್ರದುರ್ಗದಿಂದ ಕೇಂದ್ರ ಸಚಿವ ಹಾಲಿ ಸಂಸದ ಎ.ನಾರಯಣಸ್ವಾಮಿ ಚುನಾವಣೆ ಸ್ಪರ್ಧೆಗೆ ನಿರಾಸಕ್ತಿ ತೋರಿದ್ದಾರೆ ಎನ್ನಲಾಗಿದೆ. ಸ್ಥಳೀಯ ಮಟ್ಟದಲ್ಲಿ ವಿರೋಧ ವ್ಯಕ್ತವಾಗಿರುವ ಹಿನ್ನಲೆ ಅವರು ಸ್ಪರ್ಧೆಗೆ ಹಿಂದೇಟು ಹಾಕಿದ್ದಾರೆ. ಸದ್ಯ ಮಾಜಿ ಸಚಿವ ಜನಾರ್ಧನ ಸ್ವಾಮಿ ಸೇರಿ ಕೆಲವು ಜಾಯಕರು ಟಿಕೆಟ್ ಆಕಾಂಕ್ಷಯಾಗಿದ್ದಾರೆ‌.

ಬೆಳಗಾವಿಯಲ್ಲಿ ಸದ್ಯ ಮಂಗಳಾ ಅಂಗಡಿ ಸಂಸದೆಯಾಗಿದ್ದಾರೆ, ಪತಿ ಸುರೇಶ್ ಅಂಗಡಿ ನಿಧನ ಹಿನ್ನಲೆ‌ ಮಂಗಳಾ ಅಂಗಡಿಗೆ ಟಿಕೆಟ್ ನೀಡಲಾಗಿತ್ತು. ಸದ್ಯ ಅವರು ತಮ್ಮ ಪುತ್ರಿಗೆ ಟಿಕೆಟ್ ಕೇಳಿದ್ದು ಇದೇ ಕ್ಷೇತ್ರದಲ್ಲಿ ಮಂಗಳಾ ಅಂಗಡಿ ಸಂಬಂಧಿಯೂ ಆಗಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರು ಹೆಸರು ಕೇಳಿ ಬಂದಿದೆ. ಮಹಾತೇಶ ಕವಟಿಗಿಮಠ ಕೂಡಾ ಟಿಕೆಟ್ ಆಕಾಂಕ್ಷಿಯಾಗಿದ್ದು, ಈ ಬಾರಿ ಮಂಗಳಾ ಅಂಗಡಿ ಅವರಿಗೆ ಟಿಕೆಟ್ ಸಿಗುವುದಿಲ್ಲ ಎನ್ನುವುದು ಸ್ಪಷ್ಟವಾಗಿದೆ.

ಚಿಕ್ಕಬಳ್ಳಾಪುರದಲ್ಲಿ ವಯೋ ಸಹಜ ಅನಾರೋಗ್ಯದ ಕಾರಣಗಳಿಂದ ಚುನಾವಣೆ ರಾಜಕೀಯಕ್ಕೆ ಹಾಲಿ ಸಂಸದ ಬಚ್ಚೆಗೌಡ ನಿವೃತ್ತಿ ಘೋಷಿಸಿದ್ದಾರೆ. ಮಾಜಿ ಸಚಿವ ಡಾ. ಸುಧಾಕರ್ ಸೇರಿ‌ ಹಲವರು ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಹೈಕಮಾಂಡ್ ಯಾರಿಗೆ ಮಣೆ ಹಾಕಲಿದೆ ಗೊತ್ತಿಲ್ಲ. ರಾಯಚೂರಿನಲ್ಲೂ ರಾಜಾ ಅಮರೇಶ ನಾಯಕ್ ಸಂಸದರಾಗಿದ್ದು, ಅಭ್ಯರ್ಥಿಯ ಬದಲಾವಣೆ ಕೂಗು ಕ್ಷೇತ್ರದಲ್ಲಿ ಕೇಳಿ ಬಂದಿದೆ, ಮಾಜಿ ಸಂಸದ ಬಿ.ವಿ ನಾಯಕ್ ಹೆಸರು ಇಲ್ಲಿ ಕೇಳಿ ಬಂದಿದೆ ಅವರ ಪರ ರಮೇಶ್ ಜಾರಕಿಹೋಳಿ ಪರ ಲಾಬಿ ನಡೆಸುತ್ತಿದ್ದಾರೆ.

ಉತ್ತರ ಕನ್ನಡದಲ್ಲಿ ಕಳೆದ ನಾಲ್ಕು ವರ್ಷಗಳ ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದ ಸಂಸದ ಅನಂತ ಕುಮಾರ್ ಹೆಗೆಡೆ ಈಗ ವಿವಾದಗಳ ಮೂಲಕ ಚರ್ಚೆಯ ಕೇಂದ್ರ ಬಿಂದುವಾಗಿದ್ದಾರೆ. ಸಂವಿಧಾನ ಬದಲಿಸುವ ಅವರ ಹೇಳಿಕೆ ದೇಶದ್ಯಾಂತ ಬಿಜೆಪಿಗೆ ಮುಜುಗರ ಉಂಟು ಮಾಡಿದೆ. ಅಲ್ಲದೇ ಸ್ಥಳೀಯ ಕಾರ್ಯಕರ್ತರಲ್ಲೂ ಹೆಗೆಡೆ ಬಗೆಗೆ ಆಕ್ಷೇಪಗಳಿದೆ ಅದಾಗ್ಯೂ ಟಿಕೆಟ್ಗೆ ಪ್ರಬಲ ಪೈಪೊಟಿಯಲ್ಲಿದ್ದಾರೆ. ವಿಶೇಶ್ವರ್ ಹೆಗಡೆ ಕಾಗೇರಿ ಮತ್ತು ರಾಮ‌ಮಂದಿರಾ ಉಸ್ತುವಾರಿ ಹೊತ್ತಿದ್ದ ಗೋಪಾಲ್ ಅವರ ಹೆಸರು ಮುಂಚೂಣಿಯಲ್ಲಿದೆ. ಹೀಗಾಗೀ ಈ ಎಲ್ಲ ಕ್ಷೇತ್ರಗಳಲ್ಲೂ ಹಾಲಿ ಸಂಸದರಿಗೆ ಟಿಕೆಟ್ ಮಿಸ್ ಎನ್ನಲಾಗುತ್ತಿದೆ.

Previous Post
ಒಂದು ದೇಶ ಒಂದು ಚುನಾವಣೆ ಕಾರ್ಯ ಸಾಧ್ಯತೆ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ವರದಿ ಸಲ್ಲಿಕೆ
Next Post
ಯಾರೊಬ್ಬರ ಪೌರತ್ವವನ್ನು ಕಸಿದುಕೊಳ್ಳಲು ಸಿಎಎಯಲ್ಲಿ ಅವಕಾಶವಿಲ್ಲ ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಪಷ್ಟನೆ

Recent News