ಬಿಜೆಪಿ ಕಠಿಣ ಆಯ್ಕೆ ಪ್ರಕ್ರಿಯೆ: 100 ಅಭ್ಯರ್ಥಿಗಳು ಅಂತಿಮ- ಮೂಲಗಳು

ಬಿಜೆಪಿ ಕಠಿಣ ಆಯ್ಕೆ ಪ್ರಕ್ರಿಯೆ: 100 ಅಭ್ಯರ್ಥಿಗಳು ಅಂತಿಮ- ಮೂಲಗಳು

ದೆಹಲಿ ಮಾರ್ಚ್ 1: ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದಲ್ಲಿ ಗುರುವಾರ ತಡರಾತ್ರಿ ಸಭೆ ನಡೆಸಿದ ನಂತರ ಬಿಜೆಪಿ 100 ಲೋಕಸಭಾ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ ಎಂದು ಮೂಲಗಳು ತಿಳಿಸಿವೆ. ಜೊತೆಗೆ ಕೆಲವೇ ದಿನಗಳಲ್ಲಿ ಮೊದಲ ಪಟ್ಟಿಯನ್ನು ಪ್ರಕಟಿಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. ವಾರಣಾಸಿಯಿಂದ ಪ್ರಧಾನಿ ಮೋದಿ, ಗುಜರಾತ್‌ನ ಗಾಂಧಿನಗರದಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಲಕ್ನೋದಿಂದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸ್ಪರ್ಧಿಸುವುದನ್ನು ನಿರ್ಧರಿಸಲಾಗಿದ್ದು, 2019 ರ ಲೋಕಸಭೆ ಚುನಾವಣೆಯಲ್ಲಿ ಪಕ್ಷವು ಸೋತ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಹೆಚ್ಚು ಒತ್ತು ನೀಡಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ: ಗುರುವಾರ ತಡರಾತ್ರಿ ನಡೆದ ಸಭೆಯಲ್ಲಿ ಉತ್ತರ ಪ್ರದೇಶ, ಮಧ್ಯಪ್ರದೇಶ, ಗುಜರಾತ್, ಅಸ್ಸಾಂ, ಕೇರಳ ಮತ್ತು ತೆಲಂಗಾಣ ಸೇರಿದಂತೆ ಇತರ ರಾಜ್ಯಗಳು ಬಿಜೆಪಿ ವರಿಷ್ಠರ ಗಮನ ಸೆಳೆದಿವೆ. ಜೊತೆಗೆ ರಾಜ್ಯಸಭಾ ಸಂಸದರೂ ಆಗಿರುವ ಕೇಂದ್ರ ಸಚಿವರು ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಈ ಶಾಸಕರಲ್ಲಿ ಕೇಂದ್ರ ಸಚಿವ ಭೂಪೇಂದರ್ ಯಾದವ್, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಸಚಿವ ಸರ್ಬಾನಂದ್ ಸೋನೋವಾಲ್, ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಕೇಂದ್ರ ರಾಜ್ಯ ಸಚಿವ (MoS) ವಿ ಮುರಳೀಧರನ್ ಸೇರಿದ್ದಾರೆ. ಹೊಸ ಮುಖಗಳಿಗೆ ಮಣೆ: ಬಿಜೆಪಿಯ ಪಟ್ಟಿಯು ಹಲವಾರು ಮಹಿಳೆಯರು ಸೇರಿದಂತೆ ಹೊಸ ಮುಖಗಳಿಗೆ ಮಣೆ ಹಾಕಿದೆ. ಉದಾಹರಣೆಗೆ ಪಶ್ಚಿಮ ಬಂಗಾಳದ ಅಸನ್ಸೋಲ್ ಜಿಲ್ಲೆಯಲ್ಲಿ ತೃಣಮೂಲ ಕಾಂಗ್ರೆಸ್ ಸಂಸದ ಮತ್ತು ಬಾಲಿವುಡ್ ನಟ ಶತ್ರುಘ್ನ ಸಿನ್ಹಾ ಅವರನ್ನು ಎದುರಿಸಲು ಬಿಜೆಪಿ ಭೋಜ್‌ಪುರಿ ಸ್ಟಾರ್ ಪವನ್ ಸಿಂಗ್ ಅವರನ್ನು ಕಣಕ್ಕಿಳಿಸಬಹುದು. ಗುರುವಾರ 2024 ರ ಲೋಕಸಭೆ ಚುನಾವಣೆಗೆ ಬಿಜೆಪಿಯ ಮೊದಲ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಪಿಎಂ ಮೋದಿ ನಾಲ್ಕು ಗಂಟೆಗಳ ಕಾಲ ನಡೆದ ಸಿಇಸಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ರಾತ್ರಿ 10.30ಕ್ಕೆ ಆರಂಭವಾದ ಸಭೆ ನಾಲ್ಕು ಗಂಟೆಗೂ ಹೆಚ್ಚು ಕಾಲ ನಡೆಯಿತು. ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ, ಅಮಿತ್ ಶಾ ಮತ್ತು ರಾಜನಾಥ್ ಸಿಂಗ್ ಸೇರಿದಂತೆ ಇತರರು ಭಾಗವಹಿಸಿದ್ದರು.

Previous Post
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಭೀಕರ ಸ್ಫೋಟ
Next Post
ಪ್ರಧಾನ ಮಂತ್ರಿ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆ: ಪ್ರತಿ ಮನೆಗೆ 15 ಸಾವಿರ ರೂ. ಉಳಿತಾಯ ಮಾಡುವ ಪರಿವರ್ತಕ ಯೋಜನೆ

Recent News