ಬಿಜೆಪಿ ಗೆದ್ದರೆ SC-ST, OBC ಮೀಸಲಾತಿ ರದ್ದು: ಕೇಜ್ರಿವಾಲ್‌

ಬಿಜೆಪಿ ಗೆದ್ದರೆ SC-ST, OBC ಮೀಸಲಾತಿ ರದ್ದು: ಕೇಜ್ರಿವಾಲ್‌

ಲಕ್ನೋ, ಮೇ 16: ಭಾರತೀಯ ಜನತಾ ಪಕ್ಷ ನೇತೃತ್ವದ NDA ಮೈತ್ರಿಕೂಟ ಅಧಿಕಾರಕ್ಕೆ ಬಂದರೆ, ಸಂವಿಧಾನವನ್ನು ಬದಲಿಸಿ SC-ST, OBC ಸಮುದಾಯಗಳೀಗೆ ನೀಡುತ್ತಿರುವ ಮೀಸಲಾತಿಯನ್ನು ರದ್ದುಗೊಳಿಸಲಿದೆ ಎಂದು ದೆಹಲಿ ಮುಖ್ಯಮಂತ್ರಿ ಹಾಗೂ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್‌ ಹೇಳಿದ್ದಾರೆ.

ಲಕ್ನೋದಲ್ಲಿ ಗುರುವಾರ ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್‌ ಯಾದವ್‌ ಅವರೊಂದಿಗೆ ನಡೆಸಿದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅರವಿಂದ ಕೇಜ್ರಿವಾಲ್‌ ಅವರು, ಪ್ರಧಾನಿ ನರೇಂದ್ರ ಮೋದಿ ತಮಗಾಗಿ ಮತ ಕೇಳುತ್ತಿಲ್ಲ, ಅಮಿತ್‌ ಶಾ ಅವರನ್ನು ಪ್ರಧಾನಿ ಮಾಡಲು ಮತ ಯಾಚಿಸುತ್ತಿದ್ದಾರೆ. ಚುನಾವಣೆ ಮುಗಿದ ಎರಡು ಮೂರು ತಿಂಗಳುಗಳ ಒಳಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರನ್ನು ಅವರ ಸ್ಥಾನದಿಂದ ಕಿತ್ತುಹಾಕಲಿದ್ದಾರೆ ಎಂದು ಹೇಳಿದರು.
ಬಿಜೆಪಿ ಏನೇ ಮಾಡಿದರೂ ಈ ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವುದಿಲ್ಲ. INDIA ಮೈತ್ರಿಕೂಟವೇ ಅಧಿಕಾರಕ್ಕೆ ಬರಲಿದೆ. ಉತ್ತರಪ್ರದೇಶದ ಎಲ್ಲ ಮತದಾರರೂ INDIA ಮೈತ್ರಿಕೂಟವನ್ನು ಬೆಂಬಲಿಸಬೇಕು ಎಂದು ಅರವಿಂದ ಕೇಜ್ರಿವಾಲ್‌ ಅವರು ಮನವಿ ಮಾಡಿದರು.

Previous Post
ಕೇಂದ್ರದಲ್ಲಿ ಸರ್ಕಾರ ರಚನೆಗೆ ‘ಇಂಡಿಯಾ ಮೈತ್ರಿಕೂಟ’ಕ್ಕೆ ಟಿಎಂಸಿ ಬಾಹ್ಯ ಬೆಂಬಲ: ಮಮತಾ
Next Post
ಹೆಲ್ಮೆಟ್ ಧರಿಸಿಲ್ಲ ಎಂದು ಕಾರಿಗೂ 1 ಸಾವಿರ ದಂಡ ವಿಧಿಸಿದ ಯುಪಿ ಪೊಲೀಸರು

Recent News