ಬಿಹಾರ ಸರ್ಕಾರಕ್ಕೆ ಹಿನ್ನಡೆ ಹೊಸ ಮೀಸಲಾತಿ ತಿದ್ದುಪಡಿ ಕಾಯಿದೆ ರದ್ದುಪಡಿಸಿದ ಪಾಟ್ನಾ ಹೈಕೋರ್ಟ್

ಬಿಹಾರ ಸರ್ಕಾರಕ್ಕೆ ಹಿನ್ನಡೆ ಹೊಸ ಮೀಸಲಾತಿ ತಿದ್ದುಪಡಿ ಕಾಯಿದೆ ರದ್ದುಪಡಿಸಿದ ಪಾಟ್ನಾ ಹೈಕೋರ್ಟ್

ಪಾಟ್ನಾ : ಹಿಂದುಳಿದ ವರ್ಗಗಳು, ಅತೀ ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST) ಮೀಸಲಾತಿಯನ್ನು 50% ರಿಂದ 65% ಕ್ಕೆ ಹೆಚ್ಚಿಸಿದ ಬಿಹಾರ ಸರ್ಕಾರದ ತಿದ್ದುಪಡಿಯನ್ನು ಪಾಟ್ನಾ ಹೈಕೋರ್ಟ್ ರದ್ದು ಮಾಡಿದೆ. ಖಾಲಿ ಹುದ್ದೆಗಳ ಬಿಹಾರ ಮೀಸಲಾತಿ ಕಾಯ್ದೆ 2023 ಮತ್ತು ಬಿಹಾರ (ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ) ಮೀಸಲಾತಿ (ತಿದ್ದುಪಡಿ) ಕಾಯ್ದೆ 2023 ಸಂವಿಧಾನ 14ನೇ ವಿಧಿಯ ಅಡಿಯಲ್ಲಿ ನೀಡಲಾದ ಮೀಸಲಾತಿ ಸಮಾನತೆಯ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಮುಖ್ಯ ನ್ಯಾ. ಕೆ. ವಿನೋದ್‌ ಚಂದ್ರನ್‌ ಹಾಗೂ ಹರೀಶ್‌ ಕುಮಾರ್‌ ಅವರಿದ್ದ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿದೆ.

ಕಳೆದ ವರ್ಷ ಹಿಂದುಳಿದ ವರ್ಗಗಳ ಮೀಸಲಾತಿಯನ್ನು ಶೇ.50 ರಿಂದ 65ಕ್ಕೆ ಹೆಚ್ಚಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಹಲವು ಮಂದಿ ಅರ್ಜಿ ಸಲ್ಲಿಸಿದ್ದರು ಬಿಹಾರ ಸರ್ಕಾರದ ನಿರ್ಧಾರವು ಸಂವಿಧಾನದ ವ್ಯಾಪ್ತಿಯನ್ನು ಮೀರಿದೆ. ಅಲ್ಲದೇ ಸಂವಿಧಾನ ವಿಧಿ 14, 15 ಮತ್ತು 16ನೇ ವಿಧಿಗಳ ಅಡಿಯಲ್ಲಿ ಸಮಾನತೆಯ ಷರತ್ತನ್ನು ಉಲ್ಲಂಘಿಸುತ್ತವೆ ಎಂದು ಕೋರ್ಟ್‌ ಆದೇಶದಲ್ಲಿ ಹೇಳಿದೆ.

2023ರ ನವೆಂಬರ್‌ ತಿಂಗಳಲ್ಲಿ ಬಿಹಾರ ವಿಧಾನಸಭೆಯು ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಿತ್ತು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅನುಪಸ್ಥಿತರಾಗಿದ್ದರು. ತಿದ್ದುಪಡಿ ಮಾಡಲಾದ ಮೀಸಲಾತಿ ಕೋಟಾವು ಪರಿಶಿಷ್ಟ ಜಾತಿಗಳಿಗೆ 20%, ಪರಿಶಿಷ್ಟ ಪಂಗಡಗಳಿಗೆ 2% , ಇತರೇ ಹಿಂದುಳಿದ ವರ್ಗಗಳಿಗೆ ಮತ್ತು ಅತ್ಯಂತ ಹಿಂದುಳಿದ ವರ್ಗಗಳಿಗೆ 43% ಮೀಸಲಾತಿ ಒಳಗೊಂಡಿತ್ತು.

Previous Post
ರಷ್ಯಾ – ಉಕ್ರೇನ್ ಯುದ್ಧವನ್ನು ನಿಲ್ಲಿಸುವ ಪ್ರಧಾನಿ ನರೇಂದ್ರ ಮೋದಿಗೆ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ತಡೆಯಲು ಸಾಧ್ಯವಾಗುತ್ತಿಲ್ಲ – ಸಂಸದ ರಾಹುಲ್ ಗಾಂಧಿ ವ್ಯಂಗ್ಯ
Next Post
ನೊಯ್ಡಾದಲ್ಲಿ ಪೇಚಿಗೆ ಸಿಲುಕಿದ ಕರ್ನಾಟಕ ಪೊಲೀಸ್ ಯೂಟ್ಯೂಬರ್ ಅಜಿತ್ ಭಾರ್ತಿ ಬಂಧಿಸಲು ತೆರಳಿದ ವೇಳೆ ಹೈಡ್ರಾಮಾ!

Recent News