ಭದ್ರತಾ ಪಡೆಗಳ ಗುರಿಯಾಗಿಸಿ ಭಯೋತ್ಪಾದಕ ದಾಳಿ ನಡೆಯಬಹುದು ಗುಪ್ತಚರ ಇಲಾಖೆಯಿಂದ ಎಚ್ಚರಿಕೆ

ಭದ್ರತಾ ಪಡೆಗಳ ಗುರಿಯಾಗಿಸಿ ಭಯೋತ್ಪಾದಕ ದಾಳಿ ನಡೆಯಬಹುದು ಗುಪ್ತಚರ ಇಲಾಖೆಯಿಂದ ಎಚ್ಚರಿಕೆ

ನವದೆಹಲಿ : ಮೂರು ದಿನಗಳ ಅವಧಿಯಲ್ಲಿ ಜಮ್ಮು ಪ್ರದೇಶದಲ್ಲಿ ಮೂರು ಭಯೋತ್ಪಾದಕ ದಾಳಿಗಳು ನಡೆದಿದ್ದು ಮುಂಬರುವ ದಿನಗಳಲ್ಲಿ ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕ ಸಂಘಟನೆಗಳ ದಾಳಿಯ ನಡೆಸುವ ಸಾಧ್ಯತೆ ಇದೆ ಎಂದು ಗುಪ್ತಚರ ಸಂಸ್ಥೆಗಳು ಎಚ್ಚರಿಕೆ ನೀಡಿದೆ.

ಭದ್ರತಾ ಪಡೆಗಳ ಶಿಬಿರಗಳು ಮೇಲೆ ಫಿದಾಯಿನ್ (ಆತ್ಮಹತ್ಯಾ) ದಾಳಿಯನ್ನು ನಡೆಸಲು ಭಯೋತ್ಪಾದಕ ಸಂಘಟನೆಗಳ ಯೋಜನೆಗಳ ರೂಪಿಸುತ್ತಿವೆ ಎಂದು ಗುಪ್ತಚರ ಸಂಸ್ಥೆಗಳು ಎಚ್ಚರಿಕೆ ನೀಡಿವೆ ಮತ್ತು ಪ್ರದೇಶಗಳಲ್ಲಿ ಗರಿಷ್ಠ ಎಚ್ಚರಿಕೆ ವಹಿಸಲು ಕೇಳಿವೆ. ಗುಪ್ತಚರ ಇಲಾಖೆ ಎಚ್ಚರಿಕೆ ಹಿನ್ನಲೆ ರಜೌರಿ ಮತ್ತು ಜಮ್ಮು ಜಿಲ್ಲೆಗಳ ಸುಂದರಬಾನಿ, ನೌಶೇರಾ, ಡೊಮಾನಾ, ಲಂಬೇರಿ ಮತ್ತು ಅಖ್ನೂರ್ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಮಂಗಳವಾರ ದೋಡಾ, ಕಥುವಾ ಎರಡು ಪ್ರತ್ಯೇಕ ಭಯೋತ್ಪಾದಕ ದಾಳಿಯಾಗಿದ್ದು ಪರಿಣಾಮವಾಗಿ ಒಬ್ಬ ಸಿಆರ್‌ಪಿಎಫ್ ಜವಾನ್ ಸಾವನ್ನಪ್ಪಿದು, ಆರು ಭದ್ರತಾ ಸಿಬ್ಬಂದಿ ಗಾಯಗೊಂಡರು. ದೋಡಾ ಜಿಲ್ಲೆಯಲ್ಲಿ ಮಂಗಳವಾರ ತಡರಾತ್ರಿ ಭದೇರ್ವಾ-ಪಠಾಣ್‌ಕೋಟ್ ರಸ್ತೆಯಲ್ಲಿರುವ 4 ರಾಷ್ಟ್ರೀಯ ರೈಫಲ್ಸ್ ಮತ್ತು ಪೊಲೀಸರ ಜಂಟಿ ಚೆಕ್‌ಪೋಸ್ಟ್ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದು , ಭೀಕರ ಗುಂಡಿನ ಚಕಮಕಿ ನಡೆದಿದೆ. ಜೈಶ್-ಎ-ಮೊಹಮ್ಮದ್-ಸಂಬಂಧಿತ ಭಯೋತ್ಪಾದಕ ಗುಂಪು, ಕಾಶ್ಮೀರ ಟೈಗರ್ಸ್ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ.

ಮೂರು ದಿನಗಳ ಹಿಂದೆ ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ದೇಗುಲದಿಂದ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದರು. ದಾಳಿಯ ನಂತರ ಬಸ್ ಕಮರಿಗೆ ಉರುಳಿ 10 ಮಂದಿ ಸಾವನ್ನಪ್ಪಿದ್ದು, 33 ಮಂದಿ ಗಾಯಗೊಂಡಿದ್ದರು. ಪಾಕಿಸ್ತಾನ ಬೆಂಬಲಿತ ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ಬಸ್ ದಾಳಿಯ ಹೊಣೆ ಹೊತ್ತುಕೊಂಡಿತ್ತು.

Previous Post
ದೇವಾಲಯದ ಹೆಸರಿನ ರಾಜಕೀಯಕ್ಕೆ ಅಯೋಧ್ಯೆ ಜನ ಬುದ್ಧಿ ಕಲಿಸಿದ್ದಾರೆ: ಶರದ್ ಪವಾರ್
Next Post
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಅಖಿಲೇಶ್ ಯಾದವ್

Recent News