ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ

ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ

ನವದೆಹಲಿ : ದೆಹಲಿ ಮದ್ಯದ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ಮೇ 31 ರವರೆಗೆ ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ಮಂಗಳವಾರ ವಿಸ್ತರಿಸಿದೆ. ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ಸಿಸೋಡಿಯಾ ಅವರ ಕಸ್ಟಡಿಯನ್ನು ವಿಸ್ತರಿಸಿದರು.

ನ್ಯಾಯಾಂಗ ಬಂಧನದ ಅವಧಿ ಮುಗಿದಿರುವ ಹಿನ್ನೆಲೆಯಲ್ಲಿ ಸಿಸೋಡಿಯಾ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಈ ಹಿಂದೆ ಸಿಸೋಡಿಯ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿ ವಜಾ ಮಾಡಿದ್ದ ಹಿನ್ನಲೆ ನ್ಯಾಯಲಯ ಇಂದು ನ್ಯಾಯಂಗ ಬಂಧನ ವಿಸ್ತರಿಸಿದೆ.

ಫೆಬ್ರವರಿ 26, 2023 ರಿಂದ ಸಿಬಿಐ ಬಂಧಿಸಿದ ನಂತರ ಸಿಸೋಡಿಯಾ ಬಂಧನದಲ್ಲಿದ್ದಾರೆ. ಬಳಿಕ ಇಡಿ ಅವರನ್ನು ಬಂಧಿಸಿತ್ತು. ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರನ್ನು ಸಹ ಬಂಧಿಸಲಾಗಿದೆ.

ಹೊಸ ಅಬಕಾರಿ ನೀತಿಯಲ್ಲಿ ಪರವಾನಗಿದಾರರಿಗೆ ಅನಪೇಕ್ಷಿತ ಅನುಕೂಲಗಳನ್ನು ವಿಸ್ತರಿಸಲಾಗಿದೆ, ಪರವಾನಗಿ ಶುಲ್ಕವನ್ನು ಮನ್ನಾ ಮಾಡಲಾಗಿದೆ ಅಥವಾ ಕಡಿಮೆ ಮಾಡಲಾಗಿದೆ ಮತ್ತು ಸಕ್ಷಮ ಪ್ರಾಧಿಕಾರದ ಅನುಮೋದನೆಯಿಲ್ಲದೆ ಎಲ್ -1 ಪರವಾನಗಿಯನ್ನು ವಿಸ್ತರಿಸಲಾಗಿದೆ ಎಂಬ ಆರೋಪವಿದೆ.

Previous Post
ಮಮತಾ ಬ್ಯಾನರ್ಜಿಗೆ ನಿಮ್ಮ ಬೆಲೆ ಎಷ್ಟು ಎಂದ ಬಿಜೆಪಿ ಅಭ್ಯರ್ಥಿ ಅಭಿಜಿತ್ ಗಂಗೋಪಾಧ್ಯಾಯ 24 ಗಂಟೆ ಪ್ರಚಾರದಿಂದ ನಿಷೇಧ
Next Post
ಸಂಸದ ಜಯಂತ್‌ ಸಿನ್ಹಾಗೆ ಬಿಜೆಪಿ ಶೋಕಾಸ್ ನೋಟಿಸ್

Recent News