ಮಾಜಿ ಸಚಿವ ಸತ್ಯಂದ್ರ ಜೈನ್ ಜಾಮೀನು ಅರ್ಜಿ ವಜಾ ಕೂಡಲೇ ಜೈಲಾಧಿಕಾರಿಗಳ ಮುಂದೆ ಹಾಜರಾಗುವಂತೆ ಸುಪ್ರೀಂ ಆದೇಶ

ಮಾಜಿ ಸಚಿವ ಸತ್ಯಂದ್ರ ಜೈನ್ ಜಾಮೀನು ಅರ್ಜಿ ವಜಾ; ಕೂಡಲೇ ಜೈಲಾಧಿಕಾರಿಗಳ ಮುಂದೆ ಹಾಜರಾಗುವಂತೆ ಸುಪ್ರೀಂ ಆದೇಶ

ನವದೆಹಲಿ : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಪಟ್ಟಿರುವ ದೆಹಲಿಯ ಮಾಜಿ ಆರೋಗ್ಯ ಸಚಿವ ಸತ್ಯಂದ್ರ ಜೈನ್‌ಗೆ ಜಾಮೀನು ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ‌. ಈ ಕೂಡಲೇ ಅವರು ಜೈಲು ಅಧಿಕಾರಿಗಳ ಮುಂದೆ ಹಾಜರಾಗುವಂತೆ ನ್ಯಾ.ಬೇಲಾ ಎಂ ತ್ರಿವೇದಿ ನೇತೃತ್ವದ ಪೀಠ ಆದೇಶಿಸಿದೆ.

ವೈದ್ಯಕೀಯ ಕಾರಣಗಳಿಗೆ ಜಾಮೀನಿನ ಮೇಲೆ ಹೊರಗಿರುವ ಸತ್ಯಂದ್ರ ಜೈನ್ ಸಾಮಾನ್ಯ ಜಾಮೀನು ಕೋರಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಪೀಠ ಎಲ್ಲ ಮೇಲ್ಮನವಿ ಅರ್ಜಿಗಳನ್ನು ವಜಾಗೊಳಿಸಿತು‌.

ಸತ್ಯಂದ್ರ ಜೈನ್ ಅವರನ್ನು 2022 ಮೇ ನಲ್ಲಿ ಜಾರಿ ನಿರ್ದೇಶನಾಲಯ ಬಂಧಿಸಿತು. ಒಂದು ವರ್ಷದ ಸುಧೀರ್ಘ ಜೈಲಿನಲ್ಲಿದ್ದ‌ ಬಳಿಕ ವೈದ್ಯಕೀಯ ಕಾರಣಗಳ ಹಿನ್ನಲೆ ಸುಪ್ರೀಂಕೋರ್ಟ್ ಮೇ 2023 ರಲ್ಲಿ ಮಧ್ಯಂತರ ಜಾಮೀನು ನೀಡಿತ್ತು. ಸದ್ಯ ಅವರು ಜೈಲಿನಿಂದ ಹೊರಗಿದ್ದು ಚಿಕಿತ್ಸೆ ಪಡೆಯುತ್ತಿದ್ದರು.

ಕೇಂದ್ರೀಯ ತನಿಖಾ ದಳ (ಸಿಬಿಐ) ಆರಂಭದಲ್ಲಿ ಜೈನ್ ವಿರುದ್ಧ ಭ್ರಷ್ಟಾಚಾರ ತಡೆ ಕಾಯಿದೆ, 1988 ರ 13 (ಇ) (ಅಪಮಾನದ ಆಸ್ತಿ) ಸೆಕ್ಷನ್ 13(2) (ಸಾರ್ವಜನಿಕ ಸೇವಕರಿಂದ ಕ್ರಿಮಿನಲ್ ದುಷ್ಕೃತ್ಯ) ಅಡಿಯಲ್ಲಿ ಪ್ರಕರಣ ದಾಖಲಿಸಿತ್ತು. ಜೈನ್ ಅವರು 2015 ಮತ್ತು 2017 ರ ನಡುವೆ ವಿವಿಧ ವ್ಯಕ್ತಿಗಳ ಹೆಸರಿನಲ್ಲಿ ಚರ ಆಸ್ತಿಗಳನ್ನು ಸಂಪಾದಿಸಿದ್ದಾರೆ ಈ ಬಗ್ಗೆ ಅವರು ತೃಪ್ತಿಕರವಾಗಿ ಲೆಕ್ಕ ನೀಡಿಲ್ಲ ಎಂದು ಆರೋಪಿಸಲಾಗಿತ್ತು.

ಇದಾದ ಬಳಿಕ ಇಡಿ ಲಾಭದಾಯಕ ಒಡೆತನದ ಹಲವಾರು ಕಂಪನಿಗಳ ಮೂಲಕ ಹವಾಲಾ ಮಾರ್ಗವಾಗಿ ಅಕ್ರಮ ಹಣ ವರ್ಗಾವಣೆ ಮಾಡಿದ್ದಾರೆ, ಶೆಲ್ ಕಂಪನಿಗಳಿಂದ ₹ 4.81 ಕೋಟಿ ಮೊತ್ತದ ವಸತಿ ನಮೂದುಗಳನ್ನು ಪಡೆದಿವೆ ಎಂದು ಆರೋಪಿಸಿ ಅವರನ್ನು ಬಂಧಿಸಿತು. ವಿಚಾರಣಾ ನ್ಯಾಯಾಲಯವು ನವೆಂಬರ್ 17, 2022 ರಂದು ಅವರ ಇಡಿ ಪ್ರಕರಣದ ಜಾಮೀನು ಅರ್ಜಿಯನ್ನು ತಿರಸ್ಕರಿಸಿತು.

ಇದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಯಿತು, ವಿಚಾರಣೆ ನಡೆಸಿದ ಕೋರ್ಟ್ ಜೈನ್ ಒಬ್ಬ ಪ್ರಭಾವಿ ವ್ಯಕ್ತಿ ಮತ್ತು ಮನಿ ಲಾಂಡರಿಂಗ್ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಜಾಮೀನಿಗೆ ಅವಳಿ ಷರತ್ತುಗಳನ್ನು ಪೂರೈಸಿದ್ದಾರೆ ಎಂದು ಹೇಳಲಾಗುವುದಿಲ್ಲ ಎಂದು ಅರ್ಜಿ ವಜಾ ಮಾಡಿತು. ಈ ಹಿನ್ನಲೆ ಜೈನ್ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.

Previous Post
ಬೆಂಬಲಿಗರ ಅಭಿಪ್ರಾಯ ಪಡೆದು‌ ಮುಂದಿನ ನಿರ್ಧಾರ ಚಿಕ್ಕಬಳ್ಳಾಪುರದಿಂದ ಸ್ಪರ್ಧಿಸಲ್ಲ ಸಂಸದೆ ಸುಮಲತಾ ಅಂಬರೀಷ್ ಸ್ಪಷ್ಟನೆ
Next Post
ಇಡಿ ಬಂಧನ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಕೆ.ಕವಿತಾ

Recent News