ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ

ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ

ಬೆಂಗಳೂರು:ಮೇ.14 ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಇಂದು ಜಾಮೀನು ಪ್ರಕ್ರಿಯೆ ಪೂರ್ಣಗೊಂಡ ಬಳಿಕ ರೇವಣ್ಣ ಅವರು ಜೈಲಿನಿಂದ ಹೊರ ಬಂದರು. ಜೈಲಿನಿಂದ ಹೊರ ಬಂದರೆ ರೇವಣ್ಣ ಅವರು ನೇರವಾಗಿ ಮಾಜಿ ಪ್ರಧಾನಿ ದೇವೇಗೌಡರ ಪದ್ಮನಾಭ ನಗರ ನಿವಾಸಕ್ಕೆ ತೆರಳಿದರು ರೇವಣ್ಣ ಅವರು ಜೈಲಿನಿಂದ ಹೊರ ಬರುತ್ತಿದ್ದಂತೆಯೇ ಮಾಧ್ಯಮಗಳತ್ತ ಕೈ ಮುಗಿದು ಮುಂದೆ ಸಾಗಿದರು. ರೇವಣ್ಣ ಬರುವಿಕೆಗಾಗಿ ಅಭಿಮಾನಿಗಳು ಜೈಲಿನ ಹೊರಗೆ ಕಾಯುತ್ತಿದ್ದರು. ಹೀಗಾಗಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಒದಗಿಸಲಾಗಿತ್ತು.

ಜೈಲಿನಿಂದ ಹೊರಬಂದ ರೇವಣ್ಣ ಅವರಿಗೆ ಕಾರ್ಯಕರ್ತರನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ. ಯಾಕೆಂದರೆ ರೇವಣ್ಣ ಬರುತ್ತಿದ್ದಂತೆಯೇ ನೂಕುನುಗ್ಗಲು ಆರಂಭವಾಗಿದೆ. ಕಾರ್ಯಕರ್ತರು ಕಾರಿಗೆ ಅಡ್ಡ ಬಂದಿದ್ದರಿಂದ ಕಾರ್ ಸಂಚಾರಕ್ಕೆ ಅನುವು ಮಾಡಿಕೊಡಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಹೀಗಾಗಿ ಕಾರಿನ ಗ್ಲಾಸ್‌ ಇಳಿಸಿ ಕೈ ಮುಗಿದು ಹೊರಟರು.

ಸಂತ್ರಸ್ತೆಯ ಕಿಡ್ನಾಪ್‌ ಆರೋಪ ಎದುರಿಸುತ್ತಿದ್ದ ರೇವಣ್ಣ ಅವರು 6 ದಿನಗಳ ಹಿಂದೆ ಜೈಲು ಸೇರಿದ್ದರು. ನಿನ್ನೆ ಇಡೀ ದಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆದಿತ್ತು. ಬಳಿಕ ಸಂಜೆ ಕೆಲವೊಂದು ಷರತ್ತುಗಳನ್ನು ವಿಧಿಸಿ ಜಾಮೀನು ನೀಡಲಾಗಿತ್ತು ‌.

ದೇಗುಲ ಯಾತ್ರೆ ‌‌ ಮಾಜಿ ಸಚಿವ ಹೆಚ್‌ಡಿ ರೇವಣ್ಣಗೆ ಜಾಮೀನು ಸಿಕ್ಕಿದ ಬೆನ್ನಲ್ಲೇ ದೇಗುಲ ಯಾತ್ರೆ ಆರಂಭಿಸಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿನಿಂದ ನೇರವಾಗಿ ಪದ್ಮನಾಭ ನಗರದಲ್ಲಿರುವ ಮಾಜಿ ಪ್ರಧಾನಿ ದೇವೇಗೌಡರ ನಿವಾಸಕ್ಕೆ ಆಗಮಿಸಿ ದೇವರ ಕೋಣೆಯಲ್ಲಿ ಪೂಜೆ ಮಾಡಿದರು. ನಂತರ ರೇವಣ್ಣ ಬೆಂಗಳೂರಿನ ಜೆಪಿ ನಗರದಲ್ಲಿರುವ ತಿರುಮಲ ಲಕ್ಷ್ಮಿ ವೆಂಕಟೇಶ್ವರ ದೇವಾಲಯಕ್ಕೆ ಆಗಮಿಸಿ ವಿಶೇಷ ಪೂಜೆಯಲ್ಲಿ ಭಾಗಿಯಾಗಿದರು. ದೇವಾಲಯದಲ್ಲಿ ಕುಂಬಳಕಾಯಿ, ಈಡುಗಾಯಿ ದೃಷ್ಟಿ ತೆಗೆಸಿ ರೇವಣ್ಣ ಒಬ್ಬರೇ ಪೂಜೆ ಮಾಡಿದರು. ಇಲ್ಲಿಂದ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿದರು ನಾಳೆ ಶೃಂಗೇರಿಗೆ ರೇವಣ್ಣ ಭೇಟಿ ನೀಡುವ ಸಾಧ್ಯತೆಯಿದೆ ‌ ‌‌

ಕಣ್ಣೀರು ‌‌‌ ‌‌.‌ ‌‌ ‌‌..‌ ಜೈಲಿನಿಂದ ಬಿಡುಗಡೆಯಾದ ನಂತರ ಪದ್ಮನಾಭನಗರದಲ್ಲಿರುವ ದೇವೆಗೌಡರ ಮನೆಗೆ ತೆರಳಿ ತಂದೆ-ತಾಯಿ ಜೊತೆ ಮಾತನಾಡಿ ಹೊರಡುವ ಸಂದರ್ಭದಲ್ಲಿ ರೇವಣ್ಣ ಅವರು ದೇವೇಗೌಡರ ನಿವಾಸದ ಎದುರು
ನೆರೆದಿದ್ದ ಕಾರ್ಯಕರ್ತರನ್ನು ಕಂಡು ಕಣ್ಣೀರು ಹಾಕಿದ್ದಾರೆ ಕಣ್ಣೀರು ಹಾಕಿದ ರೇವಣ್ಣ ಅವರನ್ನು ಕಾರ್ಯಕರ್ತರೇ ಸಮಾಧಾನಪಡಿಸಿದರು. ನೀವು ಅಳಬೇಡಿ ಕಣಣ್ಣ ಎಂದು ಡಿಕೆಶಿ ವಿರುದ್ಧ ಕಾರ್ಯಕರ್ತರು ಕಿಡಿಕಾರಿದರು. ಈ ವೇಳೆ ರೇವಣ್ಣ ಅವರು, ಹಂಗೆಲ್ಲ ಮಾತನಾಡಬಾರದು ಅಂದಾಗ ಯಾಕಣ್ಣ ಮಾತಾಡಬಾರದು ಎಂದು ಕಾರ್ಯಕರ್ತರು ರೊಚ್ಚಿಗೆದ್ದರು. ರೇವಣ್ಣ ಜೊತೆ ಕೆಲ ಕಾರ್ಯಕರ್ತರು ಕೂಡ ಕಣ್ಣೀರು ಹಾಕಿದ್ದಾರೆ. ಬಳಿಕ ಅಲ್ಲಿಂದ ತೆರಳಿದರು.

Previous Post
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪ್ರಥಮ ಮತ್ತು ದ್ವಿತೀಯ Rank ಪಡೆದ ಪ್ರತಿಭಾನ್ವಿತರನ್ನು ಸನ್ಮಾನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Next Post
ಇನ್ಫೋಸಿಸ್‌ಗೆ ಭಾರೀ ದಂಡ ವಿಧಿಸಿದ ಕೆನಡಾ ಸರಕಾರ

Recent News