ಮಾವಿನಹಣ್ಣು, ಸಿಹಿತಿಂಡಿ ಸೇವಿಸಿ ಸಕ್ಕರೆ ಪ್ರಮಾಣ ಹೆಚ್ಚಿಸಿಕೊಳ್ಳುತ್ತಿದ್ದಾರೆ ಅನಾರೋಗ್ಯದ ನೆಪವೊಡ್ಡಿ ಜಾಮೀನು ಕೇಳಿದ ಕೇಜ್ರಿವಾಲ್ ವಿರುದ್ಧ ಇಡಿ ಆರೋಪ

ಮಾವಿನಹಣ್ಣು, ಸಿಹಿತಿಂಡಿ ಸೇವಿಸಿ ಸಕ್ಕರೆ ಪ್ರಮಾಣ ಹೆಚ್ಚಿಸಿಕೊಳ್ಳುತ್ತಿದ್ದಾರೆ ಅನಾರೋಗ್ಯದ ನೆಪವೊಡ್ಡಿ ಜಾಮೀನು ಕೇಳಿದ ಕೇಜ್ರಿವಾಲ್ ವಿರುದ್ಧ ಇಡಿ ಆರೋಪ

ನವದೆಹಲಿ : ಮಾವಿನಹಣ್ಣು, ಸಿಹಿತಿಂಡಿ ಮತ್ತು ಚಹಾ ಸೇವಿಸುವ ಮೂಲಕ ಜೈಲಿನಲ್ಲಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಮ್ಮ ದೇಹದಲ್ಲಿ ಸಕ್ಕರೆ ಪ್ರಮಾಣ ಹೆಚ್ಚಿಸಿಕೊಳ್ಳುತ್ತಿದ್ದಾರೆ ಎಂದು ಇಡಿ ಆರೋಪಿಸಿದೆ. ಸಕ್ಕರೆ ಪ್ರಮಾಣ ಹೆಚ್ಚುತ್ತಿದ್ದು ಆರೋಗ್ಯ ಕಾರಣಗಳಿಗೆ ಜಾಮೀನು ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಇಡಿ ಕೇಜ್ರಿವಾಲ್ ವಿರುದ್ಧ ಆರೋಪಿಸಿದೆ.

ಕೇಜ್ರಿವಾಲ್ ಜಾಮೀನು ಪಡೆಯಲೆಂದೆ ದೇಹದಲ್ಲಿ ಸಕ್ಕರೆ ಪ್ರಮಾಣ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಮಧುಮೇಹವಿದೆ ಎಂದು ಹೇಳಿಕೊಂಡ ಕಾರಣ ಅವರಿಗೆ ಮನೆಯಲ್ಲಿ ತಯಾರಿಸಿದ ಆಹಾರವನ್ನು ಅನುಮತಿಸಲಾಗಿದೆ. ಆದರೆ ಅವರು ಮಾವಿನಹಣ್ಣು, ಸಿಹಿತಿಂಡಿಗಳು ಮತ್ತು ಸಕ್ಕರೆಯನ್ನು ಸೇವಿಸುತ್ತಿದ್ದಾರೆ ಎಂದು ನ್ಯಾಯಾಧೀಶ ಕಾವೇರಿ ಬವೇಜಾ ಅವರ ಮುಂದೆ ಇಡಿ ವಕೀಲ ಜೊಹೆಬ್ ಹೊಸೈನ್ ಆರೋಪಿಸಿದರು.

ಕೇಜ್ರಿವಾಲ್ ಪರ ವಾದ ಮಂಡಿಸಿದ ವಕೀಲ ವಿವೇಕ್ ಜೈನ್, ಇಡಿ ಆರೋಪಗಳಿಗೆ ಆಕ್ಷೇಪ ವ್ಯಕ್ತಪಡಿಸಿದರು‌. ತನಿಖಾ ಸಂಸ್ಥೆ ಈ ಆರೋಪಗಳನ್ನು ಕೇವಲ ಮಾಧ್ಯಮಗಳಿಗಾಗಿ ಮಾಡುತ್ತಿದೆ ಎಂದರು. ಪ್ರಸ್ತುತ ಅರ್ಜಿಯನ್ನು ಹಿಂಪಡೆಯುತ್ತಿದ್ದು, ಉತ್ತಮವಾದ ಅರ್ಜಿಯನ್ನು ಸಲ್ಲಿಸುವುದಾಗಿ ಜೈನ್ ಹೇಳಿದರು. ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕಣದ ತನಿಖೆ ಭಾಗವಾಗಿ ಕೇಜ್ರಿವಾಲ್ ಪ್ರಸ್ತುತ ತಿಹಾರ್ ಜೈಲಿನಲ್ಲಿದ್ದಾರೆ.

ಈ ಮೊದಲು ಜಾಮೀನು ಕೋರಿ ದೆಹಲಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ವಜಾ ಆಗಿತ್ತು. ಬಂಧನ ಕಾನೂನು ಬದ್ಧವಾಗಿದೆ ಇದನ್ನು ರಾಜಕೀಯ ಆಯಾಮದಲ್ಲಿ ನೋಡಲು ಸಾಧ್ಯವಿಲ್ಲ ಎಂದು ಹೇಳಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದು ಮಧ್ಯಂತರ ಜಾಮೀನು ನೀಡಲು ನೀರಾಕರಿಸಿದ್ದು ವಿಚಾರಣೆ ಬಾಕಿ ಇದೆ.

Previous Post
ಮನೀಶ್ ಸಿಸೋಡಿಯಾ ನ್ಯಾಯಂಗ ಬಂಧನ ವಿಸ್ತರಣೆ
Next Post
6600 ಕೋಟಿ ಮೌಲ್ಯದ ಬಿಟ್‌ಕಾಯಿನ್ ಹಗರಣ ನಟಿ ಶಿಲ್ಪಾ ಶೆಟ್ಟಿ, ಪತಿ ರಾಜ್ ಕುಂದ್ರಾ 98 ಕೋಟಿ ಆಸ್ತಿ ಜಫ್ತಿ

Recent News