ಮುಸ್ಲಿಮರನ್ನು ಹುಡುಕಿ ಕೊಲ್ತೇವೆ ಎಂದ ಬಿಜೆಪಿ ಶಾಸಕ: ದೂರು ದಾಖಲು
ಮುಂಬೈ, ಆ. 2: ಮುಸ್ಲಿಮರನ್ನು ಹುಡುಕಿ ಕೊಲ್ಲುತ್ತೇವೆ ಎಂದು ಹೇಳಿಕೆ ನೀಡಿರುವ ಬಿಜೆಪಿ ಶಾಸಕ ನಿತೀಶ್ ರಾಣೆ ವಿರುದ್ಧ ಪ್ರಕರಣ ದಾಖಲಾಗಿದೆ. ರಾಣೆ ಅವರು ಉದ್ರೇಕಕಾರಿ ಭಾಷಣಗಳನ್ನು ನೀಡಿದ್ದಾರೆ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಲಾಗಿದೆ.
ಮಹಾರಾಷ್ಟ್ರದ ಅಹ್ಮದ್ನಗರದಲ್ಲಿ ಈ ಘಟನೆ ನಡೆದಿದೆ. ಬಿಜೆಪಿ ಶಾಸಕರ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 302, 153 ಮತ್ತು ಇತರ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ನಿತೀಶ್ ರಾಣೆ ಅವರು ಕಾರ್ಯಕ್ರಮವೊಂದರಲ್ಲಿ ಮುಸ್ಲಿಮರಿಗೆ ಬಹಿರಂಗವಾಗಿ ಬೆದರಿಕೆ ಹಾಕಿದ್ದಾರೆ ಎಂದು ರಾಷ್ತ್ರೀಯ ವಾಹಿನಿಯೊಂದು ವರದಿ ಮಾಡಿದೆ.
ನಿತೀಶ್ ರಾಣೆ ಅವರ ವಿರುದ್ಧ ಎರಡು ಎಫ್ಐಆರ್ಗಳನ್ನು ದಾಖಲಿಸಲಾಗಿದೆ. ಒಂದು ಪ್ರಕರಣ ಶ್ರೀರಾಮಪುರದಲ್ಲಿ ಮತ್ತು ಇನ್ನೊಂದು ತೋಪಖಾನಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಎಐಎಂಐಎಂ ನಾಯಕ ವಾರೀಶ್ ಪಠಾಣ್ ನಿತೀಶ್ ರಾಣೆ ಅವರ ವೀಡಿಯೊವನ್ನು ಹಂಚಿಕೊಂಡಿದ್ದಾರೆ ಮತ್ತು ಬಿಜೆಪಿಯು ಚುನಾವಣೆಗೆ ಮುನ್ನ ಕೋಮುಗಲಭೆ ಸೃಷ್ಟಿಸಲು ಬಯಸುತ್ತದೆ ಎಂದು ಆರೋಪಿಸಿದ್ದಾರೆ. ಇನ್ನೊಂದರಲ್ಲಿ ನಿತೀಶ್ ರಾಣೆ ಭಾಷಣದಲ್ಲಿ ಉದ್ರೇಕಕಾರಿಯಾಗಿದ್ದು, ನಿತೀಶ್ ವಿರುದ್ಧ ಎಫ್ ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.