ಮೋಹನ್ ಚರಣ್ ಮಾಝಿ ಒಡಿಶಾದ ನೂತನ ಮುಖ್ಯಮಂತ್ರಿ 

ಮೋಹನ್ ಚರಣ್ ಮಾಝಿ ಒಡಿಶಾದ ನೂತನ ಮುಖ್ಯಮಂತ್ರಿ

ನವದೆಹಲಿ : ಒಡಿಶಾದಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮೋಹನ್ ಚರಣ್ ಮಾಝಿ ಹೆಸರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಅಂತಿಮಗೊಳಿಸಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ. ಮಾಝಿ ಜೊತೆಗೆ ಕನಕ್ ವರ್ಧನ್ ಸಿಂಗ್ ಡಿಯೋ ಮತ್ತು ಪ್ರವತಿ ಪರಿದಾ ಸಿಂಗ್ ಉಪ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.

ಈ ಬಗ್ಗೆ ಎಕ್ಸ್ ನಲ್ಲಿ ಪೊಸ್ಟ್ ಮಾಡಿದ ರಾಜನಾಥ್ ಸಿಂಗ್, ಮೋಹನ್ ಚರಣ್ ಮಾಂಝಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಲು ಸಂತೋಷವಾಗಿದೆ. ಅವರು ಯುವ ಮತ್ತು ಕ್ರಿಯಾತ್ಮಕ ಪಕ್ಷದ ಕಾರ್ಯಕರ್ತರಾಗಿದ್ದು, ಅವರು ರಾಜ್ಯವನ್ನು ಮುನ್ನಡೆಸುತ್ತಾರೆ ಅವರಿಗೆ ಅಭಿನಂದನೆಗಳು ಎಂದು ಹೇಳಿದ್ದಾರೆ.

ಬುಡಕಟ್ಟು ನಾಯಕರಾದ ಮೋಹನ್ ಚರಣ್ ಮಾಂಝಿ ಅವರು ಕಿಯೋಂಜಾರ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಬಿಜು ಜನತಾ ದಳದ ಮಿನಾ ಮಾಝಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಪ್ರತಿವ ಮಂಜರಿ ನಾಯಕ್ ವಿರುದ್ಧ ಚುನಾವಣೆಯಲ್ಲಿ 87,000 ಮತಗಳ ಅಂತರದಿಂದ ಗೆಲುವು ಸಾಧಸಿದ್ದರು.

ಮಾಝಿ ಮತ್ತು ಇತರ ನಾಯಕರ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಇಂದು ಸಂಜೆ 5 ಗಂಟೆಗೆ ನಿಗಧಿಪಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಮಧ್ಯಾಹ್ನ 2.30ಕ್ಕೆ ಭುವನೇಶ್ವರಕ್ಕೆ ಆಗಮಿಸಿ ವಿಮಾನ ನಿಲ್ದಾಣದಿಂದ ರಾಜಭವನಕ್ಕೆ ತೆರಳುವ ನಿರೀಕ್ಷೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಕೇಂದ್ರ ಸಚಿವರು, ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ ಹಲವು ಗಣ್ಯರು ಒಡಿಶಾದ ನೂತನ ಸಿಎಂ ಮತ್ತು ಇತರ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

Previous Post
ಜೂ. 24ರಿಂದ ಸಂಸತ್ ಅಧಿವೇಶನ
Next Post
ತಮಾಷೆಗಾಗಿ ಏರ್ ಕೆನಡಾ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಿದ್ದ ಬಾಲಕ

Recent News