ರಾಜ್ಯದಲ್ಲಿ ಮುಂದಿನ 5 ದಿನ ಭರ್ಜರಿ ಮಳೆ..17 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್

ರಾಜ್ಯದಲ್ಲಿ ಮುಂದಿನ 5 ದಿನ ಭರ್ಜರಿ ಮಳೆ..17 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್

ಬೆಂಗಳೂರು: ನೈರುತ್ಯ ಮುಂಗಾರು ರಾಜ್ಯಕ್ಕೆ ಆಗಮಿಸಿ ಐದಾರು ದಿನ ಕಳೆಯುತ್ತಿದ್ದಂತೆ ವರುಣ ಅಬ್ಬರಿಸುತ್ತಿದ್ದು, ಮುಂದಿನ 5 ದಿನ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ ಸಂದರ್ಭದಲ್ಲಿ 17 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮೋಡ ಮುಸುಕಿದ ವಾತಾವರಣವಿದ್ದು, ಈಗಾಗಲೇ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಮಳೆಯಿಂದಾಗಿ ಜನರು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಸೂಚಿಸಿದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಭಾರಿ ಮಳೆಯ ಮುನ್ಸೂಚನೆ ಕೊಟ್ಟಿದೆ.ಈ ಜಿಲ್ಲೆಗಳಲ್ಲಿ ಗುಡುಗು-ಮಿಂಚು, ಬಿರುಗಾಳಿ ಸಹಿತ ಮಳೆಯಾಗುವ ಸಂಭವವಿದ್ದು, 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಎಚ್ಚರಿಸಿದೆ.

Previous Post
ಮಹಾರಾಷ್ಟ್ರದಲ್ಲಿ ಬಿಜೆಪಿ ಕಳಪೆ ಪ್ರದರ್ಶನ: ರಾಜೀನಾಮೆಗೆ ಪಡ್ನಾವೀಸ್‌ ಚಿಂತನೆ
Next Post
ಉತ್ತರಾಖಂಡದಲ್ಲಿ ಹವಾಮಾನ ವೈಪರೀತ್ಯ ಕರ್ನಾಟಕದ ನಾಲ್ವರು ಸೇರಿ 9 ಮಂದಿ ಚಾರಣಿಗರು ಮೃತ

Recent News