ರಾಜ್ಯದ ಎಲ್ಲೆಡೆ ಡೆಂಗ್ಯೂ ಜ್ವರದ ಭೀತಿ ತೀವ್ರವಾಗಿ ಉಲ್ಬಣಗೊಂಡಿದ್ದು, ಜ್ವರಪೀಡಿತರ ಸಂಖ್ಯೆ 10 ಸಾವಿರ ಸನಿಹಕ್ಕೆ ತಲುಪುತ್ತಿದೆ

ರಾಜ್ಯದ ಎಲ್ಲೆಡೆ ಡೆಂಗ್ಯೂ ಜ್ವರದ ಭೀತಿ ತೀವ್ರವಾಗಿ ಉಲ್ಬಣಗೊಂಡಿದ್ದು, ಜ್ವರಪೀಡಿತರ ಸಂಖ್ಯೆ 10 ಸಾವಿರ ಸನಿಹಕ್ಕೆ ತಲುಪುತ್ತಿದೆ

ಬೆಂಗಳೂರು, ಜು, 14; ರಾಜ್ಯದ ಎಲ್ಲೆಡೆ ಡೆಂಗ್ಯೂ ಜ್ವರದ ಭೀತಿ ತೀವ್ರವಾಗಿ ಉಲ್ಬಣಗೊಂಡಿದ್ದು, ಜ್ವರಪೀಡಿತರ ಸಂಖ್ಯೆ 10 ಸಾವಿರ ಸನಿಹಕ್ಕೆ ತಲುಪುತ್ತಿದೆ. ಕಳೆದ 24 ಗಂಟೆಗಳಲ್ಲಿ ಮತ್ತೆ 424 ಮಂದಿಗೆ ಡೆಂಗ್ಯೂ ಜ್ವರ ಕಾಣಿಸಿಕೊಂಡಿದ್ದು, ಇದರಿಂದ ಆತಂಕ ಮತ್ತಷ್ಟು ಹೆಚ್ಚಾಗಿದೆ. ರಾಜಧಾನಿ ಬೆಂಗಳೂರು ಡೆಂಗ್ಯೂ ಜ್ವರದ ಹಾಟ್ ಸ್ಪಾಟ್ ಆಗಿದ್ದು, ಒಂದೇ ದಿನದಲ್ಲಿ 202 ಪ್ರಕರಣಗಳು ದಾಖಲಾಗಿವೆ. ಜತೆಗೆ ರಾಜ್ಯಾದ್ಯಂತ ಒಂದೇ ದಿನ 119 ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಲ್ಲ ಜಿಲ್ಲೆಗಳಲ್ಲಿ 2557 ಜನರಿಗೆ ಪರೀಕ್ಷೆ ಮಾಡಲಾಯಿತು. ಆ ಪೈಕಿ 0-1 ವರ್ಷದ 4, 1-18 ವರ್ಷದ 168 ಮಕ್ಕಳಲ್ಲಿ ಮತ್ತು 18 ವರ್ಷಕ್ಕಿಂತ ಮೇಲ್ಪಟ್ಟ 252 ಮಂದಿಗೆ ಡೆಂಗ್ಯೂ ಜ್ವರ ಕಾಣಿಸಿಕೊಂಡಿದೆ. ಜಿಲ್ಲಾವಾರು ಎಷ್ಟು: ಕಳೆದ 24 ಗಂಟೆಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿನ ಹೆಚ್ಚಿನ ಪ್ರಕರಣಗಳು ದಾಖಲಾಗಿವೆ. ಶನಿವಾರ ಒಟ್ಟು 202 ಪ್ರಕರಣಗಳು ದಾಖಲಾಗಿದ್ದು, 16 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮೂಲಕ ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ 2830ಕ್ಕೆ ಏರಿಕೆ ಆಗಿದೆ. ಉಳಿಂದ ಬೆಂಗಳೂರು ನಗರದಲ್ಲಿ 5, ಬೆಂಗಳೂರು ಗ್ರಾಮಂತರದಲ್ಲಿ 1 ಪ್ರಕರಣಗಳು ದಾಖಲಾಗಿವೆ. ಇನ್ನು ಕಳೆದ 24 ಗಂಟೆಯಲ್ಲಿ ಕಾಣಿಸಿಕೊಂಡ ಪ್ರಕರಣಗಳಲ್ಲಿ ಕೋಲಾರದಲ್ಲಿ 17, ತುಮಕೂರು 12, ದಾವಣಗೆರೆ 8, ಶಿವಮೊಗ್ಗ 16, ಬೆಳಗಾವಿ 6, ವಿಜಯಪುರ 2, ಬಾಗಲಕೋಟೆ 12, ಧಾರವಾಡ 20, ಉತ್ತರ ಕನ್ನಡ 3, ಕಲಬುರಗಿ 12, ಯಾದಗಿರಿ 3, ಚಾಮರಾಜನಗರ 4, ಹಾಸನ 20, ದಕ್ಷಿಣ ಕನ್ನಡ 20, ಚಿಕ್ಕಮಗಳೂರು 9, ಕೊಡಗು ಜಿಲ್ಲೆಯಲ್ಲಿ 9 ಪ್ರಕರಣಗಳು ದಾಖಲಾಗಿವೆ ಎನ್ನುವ ಮಾಹಿತಿ ಲಭ್ಯವಾಗಿದೆ. ರಾಜ್ಯದಲ್ಲಿ ಜನವರಿಯಿಂದ ಇಲ್ಲಿಯವರೆಗೆ 66,298 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, 9082 ಜನರಿಗೆ ಡೆಂಗ್ಯೂ ದೃಢಪಟ್ಟಿದೆ. 353 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಏಳು ಮಂದಿ ಡೆಂಗ್ಯೂ ರೋಗಕ್ಕೆ ಬಲಿಯಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಹೇಳಿದೆ.

ವಾರ್ ರೂಂ…! ರಾಜ್ಯದಲ್ಲಿ ಡೆಂಗ್ಯೂ ಜ್ವರ ಪರಿಸ್ಥಿತಿಯ ಸೂಕ್ಷ್ಮ ಮೇಲ್ವಿಚಾರಣೆಗೆ ವಾರ್ ರೂಮ್ ಪ್ರಾರಂಭಿಸಿ, ಡೆಂಘಿ ಪೀಡಿತರ ಮೇಲೆ 14 ದಿನಗಳು ನಿಗಾ ವಹಿಸಬೇಕು ಎಂದು ಆರೋಗ್ಯ ಇಲಾಖೆಯು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದೆ. ಆರೋಗ್ಯ ಸೌಧದಲ್ಲಿರುವ ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮ ವಿಭಾಗವು ರಾಜ್ಯಮಟ್ಟದ ವಾರ್ ರೂಮ್ ಉಸ್ತುವಾರಿ ಹೊಂದಿರಲಿದೆ. ಬಿಬಿಎಂಪಿ ಹಾಗೂ ಜಿಲ್ಲಾಡಳಿತಗಳು ಅಧಿಕ ಪ್ರಕರಣಗಳು ವರದಿಯಾದ ಪ್ರದೇಶ ಗುರುತಿಸಿ, ವಿವರವನ್ನು ರಾಜ್ಯ ಮಟ್ಟದ ವಾರ್ ರೂಮ್‌ಗೆ ಸಲ್ಲಿಕೆ ಮಾಡಬೇಕು. ಹೆಚ್ಚು ಪ್ರಕರಣಗಳು ವರದಿಯಾದ ಪ್ರದೇಶಗಳಲ್ಲಿ ಲಾರ್ವಾ ನಾಶ ಚಟುವಟಿಕೆಗಳನ್ನು ತೀವ್ರಗೊಳಿಸಬೇಕು. ಜ್ವರ ಕ್ಲಿನಿಕ್‌ಗಳನ್ನು ತುರ್ತಾಗಿ ಪ್ರಾರಂಭ ಮಾಡಬೇಕು. ಬಿಪಿಎಲ್ ಕುಟುಂಬಗಳಿಗೆ ಸೊಳ್ಳೆ ಪರದೆ ವಿತರಣೆ ಮಾಡಬೇಕು ಎಂದು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ ಸುತ್ತೋಲೆ ಹೊರಡಿಸಿದ್ದಾರೆ.

Previous Post
ನಾಳೆಯಿಂದ ವಿಧಾನಮಂಡಲ ಅಧಿವೇಶನ
Next Post
46 ವರ್ಷಗಳ ಬಳಿಕ ತೆರೆದ ಜಗನ್ನಾಥ ದೇವಾಲಯದ ರತ್ನ ಭಂಡಾರ

Recent News