ರಾಯ್ ಬರೇಲಿಯಿಂದ ಪ್ರಿಯಾಂಕ, ಅಮೇಥಿಯಿಂದ ರಾಹುಲ್ ಗಾಂಧಿ ಸ್ಪರ್ಧೆ ಬಹುತೇಕ ಖಚಿತ

ರಾಯ್ ಬರೇಲಿಯಿಂದ ಪ್ರಿಯಾಂಕ, ಅಮೇಥಿಯಿಂದ ರಾಹುಲ್ ಗಾಂಧಿ ಸ್ಪರ್ಧೆ ಬಹುತೇಕ ಖಚಿತ

ನವದೆಹಲಿ : ಉತ್ತರ ಪ್ರದೇಶದ ಎರಡು ಹೈವೊಲ್ಟೇಜ್ ಕ್ಷೇತ್ರಗಳಾದ ಅಮೇಥಿ ಮತ್ತು ರಾಯ್ ಬರೇಲಿಯಿಂದ ರಾಹುಲ್‌ಗಾಂಧಿ, ಪ್ರಿಯಾಂಕ ಗಾಂಧಿ ಸ್ಪರ್ಧಿಸುವುದು ಬಹುತೇಕ ಖಚಿತ ಎಂದು ಕಾಂಗ್ರೇಸ್ ಮೂಲಗಳು ಹೇಳಿವೆ. ಈ ವಾರಂತ್ಯದಲ್ಲಿ ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ತಿಳಿಸಿವೆ.

ಸೋನಿಯಗಾಂಧಿ ರಾಜ್ಯಸಭೆಗೆ ಆಯ್ಕೆಯಾದ ಹಿನ್ನಲೆ ರಾಯ್ ಬರೇಲಿ ಮತ್ತು ವಯನಾಡ್ ನಿಂದ ರಾಹುಲ್ ಗಾಂಧಿ ಸ್ಪರ್ಧಿಸಿರುವ ಹಿನ್ನಲೆ ಅಮೇಥಿಯಿಂದ ಕಾಂಗ್ರೇಸ್ ಅಭ್ಯರ್ಥಿ ಯಾರು ಎನ್ನುವ ಚರ್ಚೆ ಹುಟ್ಟು ಹಾಕಿದೆ. ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ ಕಾಂಗ್ರೇಸ್ ಕೂಡಾ ಕುತೂಹಲ ಹೆಚ್ಚಿಸಿತ್ತು.

ಈ ನಡುವೆ ರಾಯ್ ಬರೇಲಿಯಿಂದ ಪ್ರಿಯಾಂಕ ಗಾಂಧಿ ಹಾಗೂ ಅಮೇಥಿಯಿಂದ ರಾಬರ್ಟ್ ವಾದ್ರಾ ಸ್ಪರ್ಧಿಸುವ ಚರ್ಚೆಗಳು ಕೇಳಿ ಬಂದಿತ್ತು. ಅವರ ಬ್ಯಾನರ್ ಪೊಸ್ಟರ್ ಗಳನ್ನು ಕಾರ್ಯಕರ್ತರು ಕ್ಷೇತ್ರದಲ್ಲಿ ಹಾಕಿದ್ದರು‌. ಅಮೇಥಿಯಿಂದ ನನ್ನ ಸ್ಪರ್ಧೆಯನ್ನು ಜನರು ಬಯಸಿದ್ದಾರೆ ಎಂದು ಖುದ್ದು ರಾಬರ್ಟ್ ವಾದ್ರಾ ಹೇಳಿಕೆ ನೀಡಿದ್ದರು.

1960 ರಿಂದ ರಾಯ್ ಬರೇಲಿ ಕ್ಷೇತ್ರ ಕಾಂಗ್ರೇಸ್ ಭದ್ರಕೋಟೆಯಾಗಿದೆ, ಫಿರೋಜ್ ಗಾಂಧಿ, ಇಂದಿರಗಾಂಧಿ ಕೂಡಾ ಇಲ್ಲಿಂದ ಸ್ಪರ್ಧಿಸಿದ್ದರು. 2006 ರಿಂದ ಸೋನಿಯಗಾಂಧಿ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದರು‌. ಸೋನಿಯಗಾಂಧಿ ರಾಜ್ಯಸಭೆ ಆಯ್ಕೆ ಬಳಿಕ ಪ್ರಿಯಾಂಕ ಗಾಂಧಿ ಪ್ರಬಲ ಸ್ಪರ್ಧಿಯಾಗಿದ್ದಾರೆ. ಆದರೆ ಅಮೇಥಿಯಲ್ಲಿ ಕಳೆದ ಬಾರಿ ರಾಹುಲ್ ಗಾಂಧಿ ಸೋಲನ್ನಪ್ಪಿದ್ದು ಈ ಬಾರಿಯೂ ಕೇಂದ್ರ ಸಚಿವೆ ಸ್ಮೃತಿ ಇರಾನಿ ಪ್ರಬಲ ಸ್ಪರ್ಧೆ ನೀಡುತ್ತಿರುವ ಹಿನ್ನಲೆ ರಾಹುಲ್ ಗಾಂಧಿಗೆ ಕಷ್ಟಕರವಾಗಿದೆ.

Previous Post
ಈ ಚುನಾವಣೆ ಈಗಾಗಲೇ ಮೋದಿ ಕೈ ತಪ್ಪಿದೆ: ರಾಹುಲ್ ಗಾಂಧಿ
Next Post
ಕರ್ನಾಟಕ ಕಾಂಗ್ರೇಸ್ ಸರ್ಕಾರ ಓಬಿಸಿ ಮೀಸಲಾತಿ ಕಿತ್ತು ಮುಸ್ಲಿಂಮರಿಗೆ ನೀಡಿದೆ ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

Recent News