ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ ಮಹಾನಿರ್ದೇಶಕ ಸುಬೋಧ್ ಕುಮಾರ್ ಸಿಂಗ್ ವಜಾ

ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ ಮಹಾನಿರ್ದೇಶಕ ಸುಬೋಧ್ ಕುಮಾರ್ ಸಿಂಗ್ ವಜಾ

ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ಯುಜಿಸಿ-ನೆಟ್‌ ಪರೀಕ್ಷೆ ಮುಂದೂಡಿಕೆ ಹಾಗೂ ನೀಟ್‌-ಯುಜಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣ ವಿವಾದದ ಮಧ್ಯೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ ಮಹಾನಿರ್ದೇಶಕರನ್ನು ವಜಾಗೊಳಿಸಲಾಗಿದೆ. ನೀಟ್‌-ಯುಜಿ ಪರೀಕ್ಷಾ ಅಕ್ರಮ ಮತ್ತು ಯುಜಿಸಿ-ನೆಟ್‌ ಪರೀಕ್ಷೆ ಮುಂದೂಡಿಕೆ ವಿರುದ್ಧ ದೇಶದ ಹಲವು ಭಾಗಗಳಲ್ಲಿ ವ್ಯಾಪಕ ಪ್ರತಿಭಟನೆಗಳು ನಡೆಯುತ್ತಿವೆ. ಪರೀಕ್ಷಾ ಅಕ್ರಮ ಸಂಬಂಧ ಕೇಂದ್ರ ಸರ್ಕಾರದ ವಿರುದ್ಧ ವಿಪಕ್ಷಗಳೂ ಕಿಡಿಕಾರಿವೆ. ಎನ್‌ಟಿಎಯ ಮಹಾನಿರ್ದೇಶಕರಾಗಿದ್ದ ಸುಬೋಧ್ ಕುಮಾರ್ ಸಿಂಗ್ ಅವರನ್ನು ವಜಾಗೊಳಿಸಿದ್ದು, ಅವರ ಸ್ಥಾನಕ್ಕೆ ನಿವೃತ್ತ ಭಾರತೀಯ ಆಡಳಿತ ಸೇವೆ (ಐಎಎಸ್) ಅಧಿಕಾರಿ ಪ್ರದೀಪ್ ಸಿಂಗ್ ಖರೋಲಾ ಅವರನ್ನು ನೇಮಿಸಲಾಗಿದೆ ಎಂದು ಕೇಂದ್ರ ಸರ್ಕಾರ ಪ್ರಕಟಿಸಿದೆ. ಖರೋಲಾ ಅವರು ಇಂಡಿಯಾ ಟ್ರೇಡ್ ಪ್ರಮೋಷನ್ ಆರ್ಗನೈಸೇಶನ್‌ನ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ಸಂಪಾದಕರಾಗಿದ್ದಾರೆ. ನಿಯಮಿತ ಪದಾಧಿಕಾರಿಯ ನೇಮಕದವರೆಗೆ ಅಥವಾ ಮುಂದಿನ ಆದೇಶದವರೆಗೆ NTA ಯ ಮಹಾನಿರ್ದೇಶಕರಾಗಿ ಹೆಚ್ಚುವರಿ ಜವಾಬ್ದಾರಿಯನ್ನು ಖರೋಲಾ ಅವರಿಗೆ ನೀಡಲಾಗಿದೆ. ಏಜೆನ್ಸಿಯ ಕಾರ್ಯನಿರ್ವಹಣೆಯನ್ನು ಸುಧಾರಿಸಲು ಶಿಫಾರಸು ನೀಡುವ ಸಮಿತಿಯನ್ನು ಸರ್ಕಾರವು ರಚಿಸಿದ ಕೆಲವೇ ಗಂಟೆಗಳ ನಂತರ ಈ ಕ್ರಮವು ಬಂದಿದೆ.

Previous Post
ಕನ್ನಡದ ವಿಚಾರದಲ್ಲಿ ನಮ್ಮ ಸರ್ಕಾರ ರಾಜಿಯಾಗುವುದಿಲ್ಲ: ಡಿಸಿಎಂ ಡಿ ಕೆ ಶಿವಕುಮಾರ್ಬೆಂ
Next Post
ಇಂದಿನಿಂದ 18ನೇ ಲೋಕಸಭೆಯ ಮೊದಲ ಅಧಿವೇಶನ ನೂತನ ಸಂಸದರ ಪ್ರಮಾಣವಚನ ಸ್ವೀಕಾರ | ಸ್ಪೀಕರ್ ಚುನಾವಣೆ ಕುತೂಹಲ

Recent News