ಲೈಂಗಿಕ ಕಿರುಕುಳದ ಆರೋಪಿ ಬ್ರಿಜ್ ಭೂಷಣ್ ಮಗನಿಗೆ ಬಿಜೆಪಿ ಟಿಕೆಟ್
ನವದೆಹಲಿ, ಮೇ.2: ಬ್ರಿಜ್ ಭೂಷಣ್ ಶರಣ್ಸಿಂಗ್ ಪರವಾಗಿ ಅವರ ಮಗ ಕರಣ್ ಭೂಷಣ್ ಸಿಂಗ್ ಅವರಿಗೆ ಉತ್ತರಪ್ರದೇಶದ ಕೈಸರ್‌ಗಂಜ್ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ ನೀಡಿರುವ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್ ಗೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಇಲ್ಲ ಎಂದು ಹೇಳಲಾಗಿತ್ತು. ಇದೀಗ ಅವರ ಮಗನಿಗೆ ಟಿಕೆಟ್ ನೀಡಲಾಗಿದೆ.
ಬಿಜೆಪಿ ಸಂಸದ ಮತ್ತು ಮಾಜಿ ವ್ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ನೀಡಿ ತೊಂದರೆಗೆ ಸಿಲುಕಿದ್ದರು. ಕೇಸರ್‌ಗಂಜ್ ಕ್ಷೇತ್ರದಿಂದ ಅವರಿಗೆ ಲೋಕಸಭೆ ಚುನಾವಣೆಗೆ ಪಕ್ಷ ಟಿಕೆಟ್ ನೀಡದಿರುವ ಬಗ್ಗೆ ಮೊದಲಿನಿಂದಲೂ ಊಹಾಪೋಹ ಇತ್ತು.
ರಾಷ್ಟ್ರೀಯ ಕುಸ್ತಿ ಫೆಡರೇಷನ್ನ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಸತತ ಮೂರು ಅವಧಿಗೆ ಪ್ರತಿನಿಧಿಸಿರುವ ಉತ್ತರ ಪ್ರದೇಶದ ಕೇಸರ್‌ಗಂಜ್‌ನಿಂದ ಈ ಬಾರಿ ಟಿಕೆಟ್ ಸಿಕ್ಕಿಲ್ಲ. ಕೇಸರ್‌ಗಂಜ್ ಲೋಕಸಭೆ ಚುನಾವಣೆಯ ಐದನೇ ಹಂತದಲ್ಲಿ ಮೇ 20 ರಂದು ಮತದಾನ ನಡೆಯಲಿದೆ. ಇನ್ನು ಉತ್ತರಪ್ರದೇಶದ ರಾಯ್ ಬರೇಲಿಯಿಂದ ಯೋಗಿ ದಿನೇಶ್ ಪ್ರತಾಪ್ ಸಿಂಗ್ ಅವರಿಗೆ ನೀಡಲಾಗಿದೆ