ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 100 ಸ್ಥಾನಗಳನ್ನೂ ಗೆಲ್ಲಲ್ಲ: ಮಲ್ಲಿಕಾರ್ಜುನ ಖರ್ಗೆ

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 100 ಸ್ಥಾನಗಳನ್ನೂ ಗೆಲ್ಲಲ್ಲ: ಮಲ್ಲಿಕಾರ್ಜುನ ಖರ್ಗೆ

ಲಕ್ನೋ, ಫೆ. 20: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 400 ಅಲ್ಲ, 100 ಸ್ಥಾನಗಳನ್ನೂ ಗೆಲ್ಲಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭವಿಷ್ಯ ನುಡಿದಿದ್ದಾರೆ. ಅಮೇಥಿಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ 400 ಸೀಟುಗಳ ಕನಸು ಸಾಕಾರಗೊಳ್ಳುವುದಿಲ್ಲ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 100 ಸ್ಥಾನಗಳನ್ನು ಗೆಲ್ಲುವುದಿಲ್ಲ ಎಂದು ಹೇಳಿದರು.

‘ಅಬ್ಕಿ ಬಾರ್ ಸತ್ತಾ ಸೆ ಬಾಹರ್’ ಅಂದರೆ ಈ ಬಾರಿ ಅವರನ್ನು ಅಧಿಕಾರದಿಂದ ಕೆಳಗಿಳಿಸಲಾಗುವುದು ಎಂದರು. ಅಮೇಥಿ ಮತ್ತು ರಾಯ್‌ಬರೇಲಿಯಲ್ಲಿ ಕಾಂಗ್ರೆಸ್‌ ಹಲವು ಬಾರಿ ಚುನಾವಣೆಯಲ್ಲಿ ಗೆದಿದ್ದದ್ದರೂ ಜನರಲ್ಲಿ ದ್ವೇಷ ಬಿತ್ತಲು ಬಿಜೆಪಿ ಷಡ್ಯಂತ್ರ ನಡೆಸುತ್ತಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ದೊಡ್ಡ ಕಂಪನಿಗಳಿಗೆ ಕೋಟ್ಯಂತರ ರೂಪಾಯಿ ಸಬ್ಸಿಡಿ ನೀಡುತ್ತಿದ್ದು, ಬಡವರು, ರೈತರು ಮತ್ತು ಮಹಿಳೆಯರಿಗೆ ನೀಡುತ್ತಿದ್ದ ಸಬ್ಸಿಡಿಯನ್ನು ತೆಗೆದುಹಾಕಲಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷರು ಆರೋಪಿಸಿದರು. ಇದೇ ಮೊದಲ ಬಾರಿಗೆ ರೈತರ ಮೇಲೆ ವಿವಿಧ ರೀತಿಯ ತೆರಿಗೆಗಳನ್ನು ವಿಧಿಸಲಾಗಿದೆ. ಟ್ರ್ಯಾಕ್ಟರ್‌ಗಳು, ರಸಗೊಬ್ಬರಗಳು ಮತ್ತು ಯಂತ್ರೋಪಕರಣಗಳ ಮೇಲೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವಿಧಿಸಲಾಗಿದೆ. ಕಾಂಗ್ರೆಸ್ ಆಡಳಿತವಿರುವ ಹಲವು ರಾಜ್ಯಗಳಲ್ಲಿ ಕೃಷಿ ಸಾಲ ಮನ್ನಾ ಮಾಡಲಾಗಿದೆ ಎಂದು ಖರ್ಗೆ ಹೇಳಿದರು.

ರಾಹುಲ್ ಗಾಂಧೀ ಅಮೇಥಿಯೊಂದಿಗೆ ಆಳವಾದ ಸಂಪರ್ಕವನ್ನು ಹೊಂದಿದ್ದಾರೆ, ಅವರು ಇಂದಿಗೂ ನಿಮ್ಮೊಂದಿಗಿದ್ದಾರೆ ಮತ್ತು ಯಾವಾಗಲೂ ನಿಮ್ಮೊಂದಿಗೆ ಇರುತ್ತಾರೆ. ಕಾಂಗ್ರೆಸ್ ಅಧಿಕಾರಾವಧಿಯಲ್ಲಿ, ಅಮೇಥಿಯಲ್ಲಿ ಕೋಟ್ಯಂತರ ಮೌಲ್ಯದ ಯೋಜನೆಗಳಿಗೆ ಅನುಮೋದನೆ ನೀಡಲಾಯಿತು ಆದರೆ ಅವುಗಳಲ್ಲಿ ಹೆಚ್ಚಿನವು ಬಾಕಿ ಉಳಿದಿವೆ. ಯೋಜನೆಗಳು ಇನ್ನೂ ಏಕೆ ಅಪೂರ್ಣವಾಗಿವೆ? ಎಂದು ಖರ್ಗೆ ಪ್ರಶ್ನಿಸಿದರು. 2019ರ ಲೋಕಸಭಾ ಚುನಾವಣೆಯವರೆಗೂ ಅಮೇಥಿ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿತ್ತು, ಬಿಜೆಪಿಯ ಸ್ಮಿರಿತ್ ಇರಾನಿ ಅವರು ರಾಹುಲ್ ಗಾಂಧಿಯನ್ನು ಸೋಲಿಸಿದರು. ಸೋನಿಯಾ ಗಾಂಧಿ ಅವರು ರಾಯ್ ಬರೇಲಿಯಿಂದ ಗೆದ್ದಿದ್ದರು.

Previous Post
ಸಿದ್ದಗಂಗಾ ಮಠಕ್ಕೆ ಕೆಎಲ್ ರಾಹುಲ್ ಭೇಟಿ: ಕ್ರಿಕೆಟಿಗನ ನೋಡಿ ಸಂಭ್ರಮಿಸಿದ ಅಭಿಮಾನಿಗಳು
Next Post
ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಕನ್ನಡತಿ ಸಿನಿ ಶೆಟ್ಟಿ ಭಾಗಿ

Recent News