ಲೋಕಸಭೆ ಚುನಾವಣೆ : ಇಂದು ರಾಜ್ಯ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ?

ಲೋಕಸಭೆ ಚುನಾವಣೆ : ಇಂದು ರಾಜ್ಯ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ?

ನವದೆಹಲಿ : ಲೋಕಸಭೆ ಚುನಾವಣೆ ಹಿನ್ನಲೆ ಅಭ್ಯರ್ಥಿಗಳ ಆಯ್ಕೆ ಕಸರತ್ತು ಆರಂಭಿಸಿರುವ ಬಿಜೆಪಿ ಹೈಕಮಾಂಡ್ ಇಂದು ತನ್ನ ಎರಡನೇ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಎರಡನೇ ಪಟ್ಟಿಯಲ್ಲಿ ಕರ್ನಾಟಕದ ಮೊದಲ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ ಇದೆ. ಮೊದಲ‌ ಹಂತದಲ್ಲಿ ಸುಮಾರು 14 ಅಭ್ಯರ್ಥಿಗಳ ಹೆಸರು ಘೋಷಣೆಯಾಗುವ ಸಾಧ್ಯತೆ ಇದೆ.

ಮೂಲಗಳ ಪ್ರಕಾರ ಮೈಸೂರಿನಿಂದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌, ಬೆಂಗಳೂರು ದಕ್ಷಿಣ; ತೇಜಸ್ವಿ ಸೂರ್ಯ, ಬೆಂಗಳೂರು ಕೇಂದ್ರ; ಪಿ.ಸಿ.ಮೋಹನ್, ಬೆಂಗಳೂರು ಗ್ರಾಮಾಂತರ; ಸಿ.ಎನ್. ಮಂಜುನಾಥ್, ಬಳ್ಳಾರಿ: ಶ್ರೀರಾಮುಲು, ಹಾವೇರಿ; ಬಸವರಾಜ ಬೊಮ್ಮಾಯಿ, ಕಲಬುರಗಿ; ಉಮೇಶ್ ಜಾಧವ್, ಬಾಗಲಕೋಟೆ; ಪಿ.ಸಿ. ಗದ್ದಿಗೌಡರ, ವಿಜಯಪುರ; ರಮೇಶ ಜಿಗಜಿಣಗಿ, ಚಿಕ್ಕೋಡಿ; ಅಣ್ಣಾಸಾಹೇಬ ಜೊಲ್ಲೆ, ಶಿವಮೊಗ್ಗ; ಬಿ.ವೈ.ರಾಘವೇಂದ್ರ, ಬೆಳಗಾವಿ; ಜಗದೀಶ್ ಶೆಟ್ಟರ್, ಧಾರವಾಡ; ಪ್ರಲ್ಹಾದ್ ಜೋಶಿ, ಕೊಪ್ಪಳ; ಸಂಗಣ್ಣ ಕರಡಿ ಹೆಸರು ಬಹುತೇಕ ಅಂತಿಮವಾಗಿದೆ.

ಬೆಂಗಳೂರು ಉತ್ತರ, ಉಡುಪಿ–ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ದಾವಣಗೆರೆ, ಬೀದರ, ರಾಯಚೂರು, ಉತ್ತರ ಕನ್ನಡ, ಕೋಲಾರ, ಚಿತ್ರದುರ್ಗ, ದಕ್ಷಿಣ ಕನ್ನಡ, ಚಾಮರಾಜನಗರ ಕ್ಷೇತ್ರಕ್ಕೆ ಇನ್ನು ಅಭ್ಯರ್ಥಿಗಳು ಅಂತಿಮವಾಗಿಲ್ಲ. ರಾಜ್ಯ ನಾಯಕರಿಂದ ಮಾಹಿತಿ ಪಡೆದುಕೊಂಡಿರುವ ವರಿಷ್ಠರು ಎರಡನೇ ಹಂತದಲ್ಲಿ ಅಭ್ಯರ್ಥಿಗಳನ್ನು ಅಂತಿಮ ಮಾಡಲಿದ್ದಾರೆ.

ಶೋಭಾ ಕರಂದ್ಲಾಜೆ ಕ್ಷೇತ್ರ ಬದಲು?

ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಕ್ಷೇತ್ರ ಬದಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ‌ ಅವರ ವಿರುದ್ಧ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಹಿನ್ನಲೆ ಅವರಿಗೆ ಬೆಂಗಳೂರು ಉತ್ತರದಲ್ಲಿರುವ ಅವಕಾಶಗಳ ಬಗ್ಗೆ ಪರಿಶೀಲಿಸಲಾಗುತ್ತದೆ. ಈ ನಡುಗೆ ಮಾಜಿ ಸಚಿವ ಸಿಟಿ ರವಿ ಅವರಿಗೆ ಹೈಕಮಾಂಡ್ ಬುಲಾವ್ ನೀಡಿದ್ದು ಕುತೂಹಲ ಹೆಚ್ಚಿಸಿದೆ. ಬೆಂಗಳೂರು ಉತ್ತರದಿಂದ ಶೋಭಾ ಕರಂದ್ಲಾಜೆ ಸ್ಪರ್ಧಿಸಿದರೆ ಉಡುಪಿ ಚಿಕ್ಕಮಗಳೂರಿನಿಂದ ಸಿ.ಟಿ ರವಿಗೆ ಅವಕಾಶ ಸಿಗಬಹುದು ಎನ್ನಲಾಗಿದೆ.

ಜೆಡಿಎಸ್‌ಗೆ ಎರಡೇ ಸ್ಥಾನ?

ಬಿಜೆಪಿ ಜೊತೆಗೆ ಮೈತ್ರಿಯಾಗಿರುವ ಜೆಡಿಎಸ್‌ಗೆ ಮಂಡ್ಯ ಮತ್ತು ಹಾಸನ ಎರಡು ಕ್ಷೇತ್ರಗಳನ್ನು ಬಿಟ್ಟು ಕೊಡುವ ಸಾಧ್ಯತೆಗಳು ದಟ್ಟವಾಗಿದೆ. ಬೆಂಗಳೂರು ಗ್ರಾಮಾಂತರದಿಂದ ಜೆಡಿಎಸ್ ಅಭ್ಯರ್ಥಿ ಡಾ.ಸಿಎನ್ ಮಂಜುನಾಥ್ ಅವರಿಗೆ ಬಿಜೆಪಿ ಬಿಹ್ನೆಯಡಿ ಟಿಕೆಟ್ ನೀಡುತ್ತಿದ್ದು ಈ ಹಿನ್ನಲೆ ಕೋಲಾರವನ್ನು ತನ್ನಲೆ ಉಳಿಸಿಕೊಳ್ಳಲಿ ಬಿಜೆಪಿ ಚಿಂತಿಸಿದೆ. ಜೆಡಿಎಸ್ ವರಿಷ್ಠರ ಜೊತೆಗೆ ಚರ್ಚೆ ಬಳಿಕ ಇದು ಅಂತಿಮವಾಗುವ ಸಾಧ್ಯತೆಗಳಿದೆ ಎಂದು ಉನ್ನತ ಮೂಲಗಳು ಹೇಳಿವೆ.

Previous Post
ಹರಿಯಾಣ ಮುಖ್ಯಮಂತ್ರಿ ಎಂ.ಎಲ್.ಖಟ್ಟರ್ ರಾಜೀನಾಮೆ
Next Post
ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟ

Recent News