ಬೆಂಗಳೂರು, ಸೆ, 1; ಕಾಂಗ್ರೆಸ್ ಸರ್ಕಾರದ ಐದು ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಜಾರಿಯಾಗಿ ವರ್ಷ ಪೂರೈಸಿದೆ. ಈ ಹಿನ್ನೆಲೆ ಸಂತಸ ಹಂಚಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಯೋಜನೆಯ ಫಲಾನುಭವಿಗಳ ಕಥೆಗಳನ್ನು ಹಂಚಿಕೊಂಡಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ‘ನಾಡಿನ ನನ್ನ ಅಕ್ಕತಂಗಿಯರ, ತಾಯಂದಿರ ಕುಟುಂಬ ನಿರ್ವಹಣೆಯ ಹೊರೆಯನ್ನು ತಗ್ಗಿಸಿ, ಅವರಿಗೆ ನೆಮ್ಮದಿಯ ಬದುಕು ಕಟ್ಟಿಕೊಡಲು ರೂಪಿಸಿದ ಗೃಹಲಕ್ಷ್ಮಿ ಯೋಜನೆ ವರ್ಷ ಪೂರೈಸಿದೆ. ಈ ಸಂದರ್ಭದಲ್ಲಿ ಯೋಜನೆಯ ಪೂರ್ಣ ಸದುಪಯೋಗ ಪಡೆದು ನವ ಉತ್ಸಾಹದಿಂದ ಹೊಸ ಬದುಕಿನತ್ತ ಹೆಜ್ಜೆಹಾಕುತ್ತಿರುವ ಫಲಾನುಭವಿ ಮಹಿಳೆಯರ ಯಶೋಗಾಥೆಯಿವು. ಬೆರಳೆಣಿಕೆಯಷ್ಟು ಮಾತ್ರ ಬೆಳೆಕಿಗೆ ಬಂದಿವೆ, ಸುದ್ದಿಯಾಗದ ಲಕ್ಷಾಂತರ ಕತೆಗಳಿವೆ. ಈ ಎಲ್ಲವೂ ಯೋಜನೆಯ ಯಶಸ್ಸಿಗೆ ಹಿಡಿದ ಕನ್ನಡಿಯಾಗಿದೆ’ ಎಂದು ಬರೆದುಕೊಂಡಿದ್ದಾರೆ. ವಿದ್ಯಾಭ್ಯಾಸಕ್ಕೆ ನೆರವಾದ ಗೃಹಲಕ್ಷ್ಮಿ ಹಣ, ಹಾವೇರಿಯ ಮಹಿಳೆಯೊಬ್ಬರು ಸೊಸೆಗೆ ಫ್ಯಾನ್ಸಿ ಸ್ಟೋರ್ ತೆರೆದ ಕಥೆ, ವೃದ್ದೆಯೊಬ್ಬರು ಗೃಹಲಕ್ಷ್ಮಿ ಹಣದಿಂದ ಹೋಳಿಗೆ ಊಟ ಹಾಕಿಸಿದ ಸಂದರ್ಭ … ಹೀಗೆ ಹಣ ಸದುಪಯೋಗವಾದ ಕುರಿತ ಉದಾಹರಣೆಗಳನ್ನು ಹಂಚಿಕೊಂಡಿದ್ದಾರೆ. 2023ರ ಆ.30 ರಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಿತ್ತು. ಪ್ರತಿ ತಿಂಗಳು ₹2 ಸಾವಿರ ಹಣವನ್ನು ಕುಟುಂಬದ ಯಜಮಾನಿಗೆ ನೀಡುವ ಯೋಜನೆ ಇದಾಗಿದೆ. ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಈ ಯೋಜನೆ ಜಾರಿಗೆ ತಂದಿರುವುದಾಗಿ ಸರ್ಕಾರ ಹೇಳಿದೆ.
Recent News
- ಸತೀಶ್ ಜಾರಕಿಹೋಳಿ ಸಿಎಂ ಆದರೆ ನನ್ನ ಸಂಪೂರ್ಣ ಬೆಂಬಲವಿದೆ: ಲಕ್ಷ್ಮಣ್ ಸವದಿ
- ರಾಜ್ಯದ ಚುಕ್ಕಾಣಿ ಬದಲಾವಣೆ ಆದರೂ ಆಶ್ಚರ್ಯ ಇಲ್ಲ: ಬಸವರಾಜ ಬೊಮ್ಮಾಯಿ
- ಓದುವ ಬೆಳಕು ಕಾರ್ಯಕ್ರಮದಡಿ ಸೆಪ್ಟೆಂಬರ್ ತಿಂಗಳಲ್ಲಿ : ಅರಿವು ಕೇಂದ್ರಗಳಲ್ಲಿ ವಿಶೇಷ ಕಾರ್ಯಕ್ರಮ: ಪ್ರಿಯಾಂಕ್ ಖರ್ಗೆ
- ನಗರದಲ್ಲಿ ರಸ್ತೆಗುಂಡಿ ಮುಚ್ಚಲು ಉಪಮುಖ್ಯಮಂತ್ರಿ 15 ದಿನ ಗಡುವು
- ಕ್ಷಮೆಯಾಚಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
- ಇನ್ನೆರಡು ತಿಂಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದಿಲ್ಲ: ಬಸವರಾಜ ಬೊಮ್ಮಾಯಿ
- ಕಾಂಗ್ರೆಸ್ ಸೇರಿದ ವಿನೇಶಾ ಫೋಗಟ್, ಬಜರಂಗ್ ಪುನಿಯಾ
- ಇಡಿ ನಡೆಗೆ ಸುಪ್ರೀಂ ಕೋರ್ಟ್ ಕಿಡಿ
- ಏತ ನೀರಾವರಿ ಯೋಜನೆಗಳ ಸಮರ್ಪಕ ನಿರ್ವಹಣೆಗೆ ಆದ್ಯತೆ ನೀಡಿ: ಸಚಿವ ಎನ್ ಎಸ್ ಭೋಸರಾಜು
- ಪ್ರತಿಯೊಬ್ಬ ನಟಿಯರದ್ದೂ ಒಂದೊಂದು ಕಥೆಯಿದೆ, ಅದು ಎಲ್ಲಾ ನಟರಿಗೂ ಗೊತ್ತಿದೆ: ರಾಧಿಕಾ