ಪರಿಷತ್ ಚುನಾವಣೆಗೆ ಕೈ ಅಭ್ಯರ್ಥಿಗಳ ಪಟ್ಟಿ ಪ್ರಕಟ ಯತೀಂದ್ರ ಸಿದ್ದರಾಮಯ್ಯ ಸೇರಿ ಎಂಟು ಹೆಸರು ಘೋಷಣೆ

ಪರಿಷತ್ ಚುನಾವಣೆಗೆ ಕೈ ಅಭ್ಯರ್ಥಿಗಳ ಪಟ್ಟಿ ಪ್ರಕಟ
ಯತೀಂದ್ರ ಸಿದ್ದರಾಮಯ್ಯ ಸೇರಿ ಎಂಟು ಹೆಸರು ಘೋಷಣೆ

ನವದೆಹಲಿ : ಕರ್ನಾಟಕ ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯಲಿರುವ ಚುನಾವಣೆ ಹಿನ್ನೆಲೆಗೆ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ 8 ಮಂದಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದೆ. ವಿಧಾನ ಪರಿಷತ್ ಚುನಾವಣೆಗೆ ಸೋಮವಾರ ಕೊನೆಯ ದಿನವಾಗಿದ್ದು, ಈ ಹಿನ್ನೆಯಲ್ಲಿ ಇಂದೇ 8 ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ.

ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ, ಎನ್‌.ಎಸ್ ಬೋಸರಾಜು, ವಂಸತ್ ಕುಮಾರ್, ಕೆ. ಗೋವಿಂದ ರಾಜ್, ಐವಾನ್ ಡಿಸೋಜ, ಜಗದೇವ್ ಗುತ್ತೇದಾರ್, ಬಿಲ್ಕಿಸ್ ಬಾನೊ, ಬಸನಗೌಡ ಬಾರ್ದಿಲಿ ಅವರಿಗೆ ಟಿಕೆಟ್ ಘೋಷಣೆ ಮಾಡಿದೆ. ಜಗದೀಶ್ ಶೆಟ್ಟರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಬಸನಗೌಡ ಬಾರ್ದಿಲಿ ಅವರಿಗೆ ಟಿಕೆಟ್ ನೀಡಲಾಗಿದೆ.

ಹೈಕಮಾಂಡ್ ಕೋಟದ ಅಡಿ ಎನ್ ಎಸ್ ಭೋಸರಾಜು, ಕಾರ್ಯಾಧ್ಯಕ್ಷ ವಸಂತ್ ಕುಮಾರ್, ಜಗದೇವ್ ಗುತ್ತೇದಾರ್ ಗೆ ಟಿಕೇಟ್ ಘೋಷಿಸಲಾಗಿದೆ. ರಾಯಚೂರು ನಾಯಕರ ವಿರೋಧದ ನಡುವೆಯೂ ಎನ್ ಎಸ್ ಭೋಸರಾಜು ಮರು ಆಯ್ಕೆ ಆಗಲಿದ್ದಾರೆ. ಇನ್ನು ಸಿಎಂ ಸಿದ್ದರಾಮಯ್ಯಗೆ ಕ್ಷೇತ್ರ ಬಿಟ್ಟುಕೊಟ್ಟಿದ್ದ ಯತೀಂದ್ರ ಕೂಡ ಮೇಲ್ಮನೆ ಪ್ರವೇಶ ಮಾಡಲಿದ್ದಾರೆ.

ಡಾ.ಕೆ ಗೋವಿಂದರಾಜು ಮೂರನೇ ಬಾರಿಗೆ ಆಯ್ಕೆ ಆಗುವ ಮೂಲಕ ಎಲ್ಲರ ಹುಬ್ಬೇರಿಸಿದ್ದಾರೆ. ಅಲ್ಪಸಂಖ್ಯಾತ ಕೋಟದಡಿ ಐವಾನ್ ಡಿಸೋಜ ಹಾಗೂ ಅಚ್ಚರಿ ಆಯ್ಕೆ ಎಂಬಂತೆ ಬಲ್ಕಿಸ್ ಬಾನು ಆಯ್ಕೆಯಾಗಿದೆ. ಜಗದೀಶ್ ಶೆಟ್ಟರ್ ರಾಜೀನಾಮೆಯಿಂದ ತೆರವಾಗಿರುವ ಪರಿಷತ್ ಸ್ಥಾನಕ್ಕ ಉಪ ಚುನಾವಣೆ ನಡೆಯಲಿದ್ದು ಬಸನಗೌಡ ಬಾದರ್ಲಿ ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದೆ. ನಾಳೆ ಎಲ್ಲ ಅಭ್ಯರ್ಥಿ ಗಳೂ ನಾಮಪತ್ರ ಸಲ್ಲಿಕೆ ಮಾಡಲಿದ್ದು, ಜೂನ್ 13ರಂದು ಚುನಾವಣೆ ನಡೆಯಲಿದೆ.

ಈ ಹಿಂದೆ ವಿಧಾನಸಭೆ ಟಿಕೆಟ್​ ಕೈತಪ್ಪಿದ್ದರಿಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್​ ಸೇರಿದ್ದರು. ಹೀಗಾಗಿ ಅವರಿಗೆ ಹೈಕಮಾಂಡ್ ವಿಧಾನಪರಿಷತ್​ ಸದಸ್ಯರನ್ನಾಗಿ ಮಾಡಿತ್ತು. ಬಳಿಕ ಬದಲಾದ ರಾಜಕೀಯ ವಿದ್ಯಾಮಾನಗಳಿಂದ ಜಗದೀಶ್ ಶೆಟ್ಟರ್ ಅವರು ವಿಧಾನಪರಿಷತ್​ಗೆ ರಾಜೀನಾಮೆ ನೀಡಿ ವಾಪಸ್ ಬಿಜೆಪಿ ಸೇರಿದ್ದರು. ಇದೀಗ ಈ ಸ್ಥಾನಕ್ಕೆ ಉಪಚುನಾವಣೆ ನಡೆಯಬೇಕಿದ್ದು, ಅದಕ್ಕೂ ಮೊದಲು ಬಸನಗೌಡ ಬಾದರ್ಲಿ ಹೆಸರು ಪ್ರಕಟಿಸಲಾಗಿದೆ.

 

 

Previous Post
ಇಂಡಿಯಾ’ ಮೈತ್ರಿಕೂಟಕ್ಕೆ 295ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲುವು: ಕೇಜ್ರಿವಾಲ್
Next Post
ಲೋಕಸಭಾ ಫಲಿತಾಂಶದ ಹೊತ್ತಲ್ಲೇ ಆತಂಕ.. ಚುನಾವಣಾ ಆಯೋಗಕ್ಕೆ ಪತ್ರ ಬರೆದ ಮಂಜುನಾಥ್!

Recent News