ಸಂವಿಧಾನ ಬದಲಾಯಿಸಲು ಪ್ರಯತ್ನಿಸಿದರೆ ರಾಜೀನಾಮೆ ನೀಡುವೆ: ಅಠವಳೆ

ಸಂವಿಧಾನ ಬದಲಾಯಿಸಲು ಪ್ರಯತ್ನಿಸಿದರೆ ರಾಜೀನಾಮೆ ನೀಡುವೆ: ಅಠವಳೆ

ಮುಂಬೈ, ಏ. 10: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಅನಂತ್‌ಕುಮಾರ್ ಹೆಗಡೆ ಸೇರಿದಂತೆ ಹಲವು ಬಿಜೆಪಿ ನಾಯಕರು, ಚುನಾವಣೆಗೆ ಮುಂಚಿತವಾಗಿ ಸಂವಿಧಾನ ಬದಲಾವಣೆಯ ಮಾತುಗಳನ್ನು ಬಹಿರಂಗವಾಗಿಯೇ ಆಡುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹಿರಿಯ ದಲಿತ ಹೋರಾಟಗಾರ, ನರೇಂದ್ರ ಮೋದಿ ಸಂಪುಟದ ಸಚಿವ ರಾಮದಾಸ್ ಅಠವಳೆ, ‘ಸಂವಿಧಾನ ಬದಲಾಯಿಸುವ ಯೋಜನೆ ಇದ್ದರೆ ರಾಜೀನಾಮೆ ನೀಡುತ್ತೇನೆ’ ಎಂದು ಹೇಳಿದ್ದಾರೆ.

ಮಹಾರಾಷ್ಟ್ರದ ಪ್ರಮುಖ ದಲಿತ ನಾಯಕ ಮತ್ತು ಭಾರತೀಯ ಜನತಾ ಪಕ್ಷದ ಮಿತ್ರಪಕ್ಷವಾದ ಆರ್‌ಪಿಐ ಮುಖಂಡ ಅಠವಳೆ, ‘ಸಂವಿಧಾನವನ್ನು ಬದಲಾಯಿಸುವ ಯಾವುದೇ ಪ್ರಯತ್ನವಿದ್ದಲ್ಲಿ ರಾಜೀನಾಮೆ ನೀಡುತ್ತೇನೆ’ ಎಂದು ಹೇಳಿದ್ದಾರೆ. ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠವಾಲೆ) ಮುಖ್ಯಸ್ಥರಾಗಿರುವ ಸಚಿವರು, ಭಂಡಾರಾ-ಗೊಂಡಿಯಾ ಲೋಕಸಭಾ ಕ್ಷೇತ್ರದಿಂದ ಆಡಳಿತಾರೂಢ ಮೈತ್ರಿಕೂಟದ ಅಭ್ಯರ್ಥಿ ಸುನಿಲ್ ಮೆಂಧೆ ಪರ ಪ್ರಚಾರ ಮಾಡುವಾಗ ಈ ಹೇಳಿಕೆ ನೀಡಿದ್ದಾರೆ.

ಈಗಿನ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ವಿರುದ್ಧ ಯಾವುದೇ ಸಮಸ್ಯೆಗಳಿಲ್ಲದೆ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದರೆ ಅದು ಸಂವಿಧಾನವನ್ನು ಬದಲಾಯಿಸುತ್ತದೆ ಎಂದು ಕಾಂಗ್ರೆಸ್ ಇತರ ವಿರೋಧ ಪಕ್ಷಗಳೊಂದಿಗೆ ಆರೋಪಿಸಿ; ಅದು ಜನರನ್ನು ದಾರಿತಪ್ಪಿಸಲು ಪ್ರಯತ್ನಿಸುತ್ತಿದೆ. ಅವರ ಆರೋಪ ಸಂಪೂರ್ಣವಾಗಿ ಆಧಾರರಹಿತವಾಗಿದೆ. ಒಂದು ವೇಳೆ ಸರ್ಕಾರ ಅಂತಹ ಪ್ರಯತ್ನ ನಡೆಸಿದರೆ ನಾನು ಸಂಪುಟಕ್ಕೆ ರಾಜೀನಾಮೆ ನೀಡುತ್ತೇನೆ ಮತ್ತು ಬಿಜೆಪಿಗೆ ನೀಡುತ್ತಿರುವ ಬೆಂಬಲವನ್ನು ಹಿಂಪಡೆಯುತ್ತೇನೆ ಎಂದು ಅವರು ಹೇಳಿದರು.

ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಇತ್ತೀಚೆಗೆ ಸಂವಿಧಾನವನ್ನು ತಿದ್ದುಪಡಿ ಮಾಡಲು ಸಂಸತ್ತಿನ ಉಭಯ ಸದನಗಳಲ್ಲಿ ಮೂರನೇ ಎರಡರಷ್ಟು ಬಹುಮತದ ಅಗತ್ಯವಿದೆ ಎಂದು ಹೇಳಿದ್ದಾರೆ. ಈ ಹಿಂದೆಯೂ ಅವರು ಇದೇ ಮಾತುಗಲನ್ನು ಹೇಳಿದ್ದರು. ವಿವಾದದ ನಂತರ ಬಿಜೆಪಿಯು ಹೆಗ್ಡೆ ಹೇಳಿಕೆಗಳಿಂದ ಉಂಟಾದ ಗದ್ದಲವನ್ನು ಶಮನಗೊಳಿಸಲು ಮುಂದಾಯಿತು. ಏಕೆಂದರೆ ಅದು ಅವರ “ವೈಯಕ್ತಿಕ ಅಭಿಪ್ರಾಯ” ಎಂದು ಹೇಳಿ, ಅವರಿಂದ ಸ್ಪಷ್ಟೀಕರಣವನ್ನು ಕೇಳಿತು. ಇದೀಗ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಹೆಗಡೆ ಬದಲಿಗೆ, ಆರ್‌ಎಸ್‌ಎಸ್‌ ಮೂಲದ ಮತ್ತೋರ್ವ ನಾಯಕ, ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಟಿಕೆಟ್ ನೀಡಿದೆ.

Previous Post
ಬ್ರಿಟಿಷರೊಂದಿಗೆ ಮೈತ್ರಿ ಮಾಡಿಕೊಂಡಿದ್ದವರು ಯಾರು?: ಮೋದಿಯ ‘ಮುಸ್ಲಿಂ ಲೀಗ್’ ಟೀಕೆಗೆ ರಾಹುಲ್ ಗಾಂಧಿ ತಿರುಗೇಟು
Next Post
ಮಾಜಿ ಕೇಂದ್ರ ಸಚಿವ ಬಿರೇಂದರ್ ಸಿಂಗ್ ಕಾಂಗ್ರೆಸ್ ಸೇರ್ಪಡೆ

Recent News