ಸಿಎಂ ಅರವಿಂದ್ ಕೇಜ್ರಿವಾಲ್ ಕಸ್ಟಡಿ ವಿಸ್ತರಣೆ

ಸಿಎಂ ಅರವಿಂದ್ ಕೇಜ್ರಿವಾಲ್ ಕಸ್ಟಡಿ ವಿಸ್ತರಣೆ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಕಸ್ಟಡಿಯನ್ನು ಆ.20 ರ ವರೆಗೆ ವಿಸ್ತರಿಸಿ ಗುರುವಾರ ರೂಸ್ ಅವೆನ್ಯೂ ನ್ಯಾಯಾಲಯ ಆದೇಶ ಹೊರಡಿಸಿದೆ. ಕಸ್ಟಡಿ ಅಂತ್ಯ ಹಿನ್ನಲೆ ತಿಹಾರ್ ಜೈಲಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಕೇಜ್ರಿವಾಲ್ ಅವರನ್ನು ದೆಹಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ದೆಹಲಿ ಸಿಎಂ ಕೇಜ್ರಿವಾಲ್ ಸಲ್ಲಿಸಿದ್ದ ಮನವಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ವಜಾಗೊಳಿಸಿತ್ತು.

ಕೇಜ್ರಿವಾಲ್ ಅವರನ್ನು ಸಮರ್ಥನೀಯ ಕಾರಣವಿಲ್ಲದೆ ಬಂಧಿಸಲಾಗಿದೆ ಎಂದು ಹೇಳಲು ಸಾಧ್ಯವಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿತ್ತು. ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಸಿಎಂ ಕೇಜ್ರಿವಾಲ್‌ಗೆ ನೀಡಲಾದ ಜಾಮೀನು ರದ್ದುಗೊಳಿಸುವಂತೆ ಮಾಡಿದ ಮನವಿಯನ್ನು ಪರಿಹರಿಸಲು ಅಲ್ಪಾವಧಿಯ ಮುಂದೂಡಿಕೆಯನ್ನು ಕೋರಲಾಗಿದೆ.

Previous Post
ಲಂಚ ಸ್ವೀಕರಿಸಿದ ಇಡಿ ಸಹಾಯಕ ನಿರ್ದೇಶಕನ ಬಂಧನ
Next Post
X ನಲ್ಲಿ ಹೆಚ್ಚು ಜನರಲಿಲ್ಲ ಅಲ್ಲಿ ಕ್ಷಮೆ ಕೇಳಿದರೆ ಸಾಲದು – ಶೋಭಾ ಕರಂದ್ಲಾಜೆಗೆ ಮದ್ರಾಸ್ ಹೈಕೋರ್ಟ್ ತಾಕೀತು

Recent News