ಸಿಎಂ ಬದಲಿಸಿದರೆ ಹೋರಾಟ ಖಚಿತ : ಅಹಿಂದ ಎಚ್ಚರಿಕೆ

ಸಿಎಂ ಬದಲಿಸಿದರೆ ಹೋರಾಟ ಖಚಿತ : ಅಹಿಂದ ಎಚ್ಚರಿಕೆ

ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಬಹಳ ಸದ್ದು ಮಾಡುತ್ತಿದ್ದು, ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಿದರೆ ರಾಜ್ಯಾದ್ಯಂತ ಬೃಹತ್ ಹೋರಾಟಗಳನ್ನು ನಡೆಸುತ್ತೇವೆಂದು ಅಹಿಂದ ರಾಜ್ಯಾಧ್ಯಕ್ಷ ಪ್ರಭುಲಿಂಗ ದೊಡ್ಡಣಿ ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಹುಬ್ಬಳಿಯಲ್ಲಿ ಮಾತನಾಡಿದ ಅವರು, 5 ವರ್ಷ ಕಾಲ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗಿರಬೇಕು. ಸಿದ್ದರಾಮಯ್ಯ ಅವರಿಂದಲೇ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದರೆ ಬೃಹತ್ ಹೋರಾಟ ಮಾಡುವುದಾಗಿ ತಿಳಿಸಿದ್ದಾರೆ.

ಕೆಲವು ಸ್ವಾಮೀಜಿಗಳು ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಮಾತನಾಡುತ್ತಿದ್ದಾರೆ. ಸ್ವಾಮೀಜಿಗಳು ರಾಜಕೀಯ ಹೇಳಿಕೆ ನೀಡುವುದು ಧಾರ್ಮಿಕ ವಿಚಾರಗಳಿಗೆ ಧಕ್ಕೆ ತರುತ್ತವೆ. ಚಂದ್ರಶೇಖರ ಸ್ವಾಮೀಜಿ ಅವರದ್ದು ವೈಯಕ್ತಿಕ ಅಭಿಪ್ರಾಯ. ಅವರ ಅಭಿಪ್ರಾಯಕ್ಕೆ ಕಾಂಗ್ರೆಸ್‌ ಮಣೆಹಾಕಬಾರದು ಎಂದಿದ್ದಾರೆ.

ಮುಖ್ಯಮಂತ್ರಿ ಬದಲಾವಣೆ ಆದ್ರೆ, ಕಾಂಗ್ರೆಸ್ ಅಸ್ತಿತ್ವ ಕಳೆದುಕೊಳ್ಳುತ್ತದೆ. ಅಹಿಂದ ನಾಯಕರನ್ನು ತುಳಿಯುವ ಕೆಲಸ ನಡೆಯುತ್ತಿದೆ. ಪ್ರತಿ ಜಿಲ್ಲೆಯಲ್ಲೂ ಅಹಿಂದ ಸಂಘಟನೆ ಮಾಡಿದ್ದೇವೆ. ರಾಜ್ಯದ ಜನರು ಸಿದ್ದರಾಮಯ್ಯ ಅವರ ಬೆನ್ನಿಗೆ ನಿಂತಿದ್ದಾರೆ. ಅವರ ಕಾರಣಕ್ಕಾಗಿಯೇ ಕಾಂಗ್ರೆಸ್​​ಗೆ ಮತ ಹಾಕಿದ್ದಾರೆ ಎಂದು ಹೇಳಿದ್ದಾರೆ.

Previous Post
ಮೂರನೇ ಅವಧಿಯ ಮೋದಿ ಮೊದಲನೇ ಮನ್ ಕಿ ಬಾತ್ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಂಬಿಕೆ ಇರಿಸಿದ್ದಕ್ಕೆ ಧನ್ಯವಾದ
Next Post
ಡಿಕೆ ಶಿವಕುಮಾರ್​​ಗೆ ಶಾಕ್: ಕೆಪಿಸಿಸಿ ಅಧ್ಯಕ್ಷ ಬದಲಾವಣೆಗೆ ಹೈಕಮಾಂಡ್ ಬಿಗ್‌ ಪ್ಲ್ಯಾನ್!

Recent News