ಸಿಎಂ ಸ್ಥಾನದಿಂದ ಕೇಜ್ರಿವಾಲ್ ಕೆಳಗಿಳಿಸುವಂತೆ ಕೋರಿ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ದೆಹಲಿ ಹೈಕೋರ್ಟ್ ನಕಾರ

ಸಿಎಂ ಸ್ಥಾನದಿಂದ ಕೇಜ್ರಿವಾಲ್ ಕೆಳಗಿಳಿಸುವಂತೆ ಕೋರಿ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ದೆಹಲಿ ಹೈಕೋರ್ಟ್ ನಕಾರ

ನವದೆಹಲಿ : ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ಮುಖ್ಯಮಂತ್ರಿ ಹುದ್ದೆಯಿಂದ ವಜಾಗೊಳಿಸಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪರಿಗಣಿಸಲು ದೆಹಲಿ ಹೈಕೋರ್ಟ್ ಗುರುವಾರ ನಿರಾಕರಿಸಿದೆ.

ದೆಹಲಿಯ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಕೇಜ್ರಿವಾಲ್ ಅವರನ್ನು ಬಂಧಿಸುವಂತೆ ಉಲ್ಲೇಖಿಸಿ ಹಿಂದೂ ಸೇನಾ ಎಂಬ ಸಂಘಟನೆಯ ಅಧ್ಯಕ್ಷರಾಗಿರುವ ವಿಷ್ಣು ಗುಪ್ತಾ ಅವರು ಸಲ್ಲಿಸಿದ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾ. ಮನಮೋಹನ್ ನೇತೃತ್ವದ ವಿಭಾಗೀಯ ಪೀಠವು ಸಿಎಂ ಆಗಿ ಮುಂದುವರಿಯಬೇಕೇ ಅಥವಾ ಬೇಡವೇ ಎಂಬುದು ಕೇಜ್ರಿವಾಲ್ ಅವರ ವೈಯಕ್ತಿಕ ಕರೆ ಎಂದು ಹೇಳಿದೆ.

ಕೆಲವೊಮ್ಮೆ ವೈಯಕ್ತಿಕ ಹಿತಾಸಕ್ತಿಯು ರಾಷ್ಟ್ರೀಯ ಹಿತಾಸಕ್ತಿಗೆ ಅಧೀನವಾಗಿರಬೇಕು ಎಂದು ಪರೋಕ್ಷವಾಗಿ ಅಮಸಧಾನ ವ್ಯಕ್ತಪಡಿಸಿದ ಕೋರ್ಟ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದು ಅಥಾವ ಮುಂದುವರಿಯುವುದು ಅದು ಅವರ ವೈಯಕ್ತಿಕ ನಿರ್ಧಾರ ಈ ವಿಷಯವನ್ನು ನಿರ್ಧರಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಅಥವಾ ಭಾರತದ ರಾಷ್ಟ್ರಪತಿಗಳು ಈ ವಿಷಯದ ಬಗ್ಗೆ ಕರೆಯನ್ನು ತೆಗೆದುಕೊಳ್ಳುಬಹುದು, ಸರ್ಕಾರ ಕಾರ್ಯನಿರ್ವಹಿಸುತ್ತಿಲ್ಲ ಎಂದು ನಾವು ಹೇಗೆ ಘೋಷಿಸಲು ಸಾಧ್ಯ? ಅದನ್ನು ನಿರ್ಧರಿಸಲು ಎಲ್‌ಜಿ ಸಂಪೂರ್ಣ ಸಮರ್ಥರಾಗಿದ್ದಾರೆ. ಅವರಿಗೆ ನಮ್ಮ ಮಾರ್ಗದರ್ಶನ ಅಗತ್ಯವಿಲ್ಲ. ಅವರಿಗೆ ಸಲಹೆ ನೀಡಲು ನಾವು ಯಾರೂ ಅಲ್ಲ. ಅವರು ಕಾನೂನಿನ ಪ್ರಕಾರ ಏನು ಮಾಡಬೇಕೋ ಅದನ್ನು ಮಾಡುತ್ತಾರೆ ಎಂದು ನ್ಯಾಯಾಲಯ ವಿಚಾರಣೆ ಸಮಯದಲ್ಲಿ ಹೇಳಿದೆ.

ಸಮಸ್ಯೆಯನ್ನು ನಿರ್ಧರಿಸಲು ರಾಷ್ಟ್ರಪತಿ ಅಥವಾ ಎಲ್‌ಜಿ ಸಮರ್ಥರಿದ್ದಾರೆ, ಅವರನ್ನು ಸಂಪರ್ಕಿಸಲು ಅರ್ಜಿದಾರರಿಗೆ ಸ್ವಾತಂತ್ರ್ಯವಿದೆ ಎಂದು ಕೋರ್ಟ್ ಹೇಳಿತು. ಕೋರ್ಟ್ ಸಲಹೆ ಮೇರೆಗೆ ಅರ್ಜಿದಾರರು ಅರ್ಜಿಯನ್ನು ಹಿಂಪಡೆದರು. ಕೇಜ್ರಿವಾಲ್ ಅವರನ್ನು ದೆಹಲಿ ಮುಖ್ಯಮಂತ್ರಿ ಸ್ಥಾನದಿಂದ ತೆಗೆದುಹಾಕಲು ಇದು ಎರಡನೇ ಪಿಐಎಲ್ ಆಗಿದ್ದು, ಇದನ್ನು ಹೈಕೋರ್ಟ್ ವಜಾಗೊಳಿಸಿದೆ.

Previous Post
ರಾಜ್ಯಸಭೆ ಸದಸ್ಯೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸೋನಿಯಗಾಂಧಿ; ರಾಜ್ಯದಿಂದ ಆಯ್ಕೆಯಾದ ಅಜಯ್ ಮಾಕೇನ್, ಸೈಯದ್ ನಾಸೀರ್ ಹುಸೇನ್ ಕೂಡಾ ಪ್ರಮಾಣ ಸ್ವೀಕಾರ
Next Post
ವಯನಾಡ್ ನಿಂದ ಕಣಕ್ಕಿಳಿದ ರಾಹುಲ್ ಗಾಂಧಿ ಆಸ್ತಿ ಎಷ್ಟು?

Recent News