ಸಿದ್ದರಾಮಯ್ಯ ʻಸಿಟಿ ರೌಂಡ್ಸ್‌ʼ : ಸಾರ್ವಜನಿಕ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ

ಸಿದ್ದರಾಮಯ್ಯ ʻಸಿಟಿ ರೌಂಡ್ಸ್‌ʼ : ಸಾರ್ವಜನಿಕ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಇಂದು ಬೆಂಗಳೂರು ಸಿಟಿ ರೌಂಡ್ಸ್‌ ಕೈಗೊಂಡಿದ್ದು, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡುವ ಕೆಲಸ ಮಾಡಿದ್ದಾರೆ.ಬೆಂಗಳೂರು ನಗರದಲ್ಲಿ ಮಳೆ ಬಂದಾಗ ಉದ್ಭವಿಸುವ ಸಮಸ್ಯೆಗಳು, ರಸ್ತೆ ಅಭಿವೃದ್ಧಿ ಹಾಗೂ ಮೆಟ್ರೋ ಕಾಮಗಾರಿ ಕಾರಣದಿಂದ ಸಂಚಾರಕ್ಕೆ ಎದುರಾಗುತ್ತಿರುವ ತೊಡಕು ಸೇರಿದಂತೆ ಸಾರ್ವಜನಿಕರ ವಿವಿಧ ಸಮಸ್ಯೆಗಳಿಗೆ ಸೂಕ್ತ ಹಾಗೂ ಶೀಘ್ರ ಪರಿಹಾರ ಒದಗಿಸಲು ಖುದ್ದಾಗಿ ನಗರ ಪ್ರದಕ್ಷಿಣೆ ಮಾಡಿ, ಸ್ಥಳದಲ್ಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಇನ್ನು ವಿಜಯನಗರ ವಿಧಾನಸಭಾ ಕ್ಷೇತ್ರದ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನ ಸಮೀಪದ ರಾಜಕಾಲುವೆಯಲ್ಲಿ ಮಳೆಗಾಲದಲ್ಲಿ ಪ್ರವಾಹ ಉಂಟಾಗುತ್ತಿತ್ತು. ಇದರಿಂದ ಸಾರ್ವಜನಿಕರಿಗೆ ಮಳೆ ಬಂದರೆ ಸೆಮಸ್ಯೆ ಉಂಟಾಗುತ್ತಿತ್ತು. ಇದಕ್ಕೆ ಸಮಾನಾಂತರವಾಗಿ ಇನ್ನೊಂದು ಕಾಲುವೆ ನಿರ್ಮಿಸುವುದರಿಂದ ಪ್ರವಾಹ ತಗ್ಗಿಸಬಹುದಾಗಿದೆ. ಪ್ರವಾಹ ನಿಯಂತ್ರಣ ಕಾಮಗಾರಿಗೆ 11.5 ಕೋಟಿ ರೂ. ಅಂದಾಜು ವೆಚ್ಚದ ಯೋಜನೆ ರೂಪಿಸಲಾಗಿದ್ದು, ಈ ಕಾಮಗಾರಿಯನ್ನು ಕೂಡಲೇ ಅನುಷ್ಠಾನⓇ ಮಾಡಬೇಕು ಹಾಗೂ ರಾಜಕಾಲುವೆಗೆ ಸಾರ್ವಜನಿಕರು ಕಸ ಎಸೆಯುವುದನ್ನು ತಡೆಗಟ್ಟಲು ಅಗತ್ಯ ಕ್ರಮ ವಹಿಸಬೇಕು. ರಾಜಕಾಲುವೆಯ ಸಮಸ್ಯೆ ಈ ವರ್ಷವೇ ಬಗೆಹರಿಯಬೇಕು ಇಲ್ಲದಿದ್ದರೆ ಮುಖ್ಯ ಇಂಜಿನಿಯರ್ ಅವರನ್ನು ಹೊಣೆ ಮಾಡಿ ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.ಸಿದ್ದರಾಮಯ್ಯ ಅವರು ಬೆಂಗಳೂರು ಸಿಟಿ ರೌಂಡ್ಸ್‌ ಕೈಗೊಂಡಿದ್ದು, ಬೆಂಗಳೂರಿನ ಮಳೆಹಾನಿ ಪ್ರದೇಶಗಳಿಗೆ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ.ಕೆ. ಶಿವಕುಮಾರ್‌, ಸಚಿವ ರಾಮಲಿಂಗ ರೆಡ್ಡಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಸೇರಿ ಹಲವರು ಸಾಥ್‌ ನೀಡಿದ್ದಾರೆ.ಸಿಎಂ ಸಿದ್ದರಾಮಯ್ಯ ಅವರು ಮೊದಲಿಗೆ ಮೈಸೂರು ರಸ್ತೆಯ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಇರುವ ರಾಜಕಾಲುವೆ ಪರಿಶೀಲನೆ ನಡೆಸಿದ್ದು, ಬಳಿಕ ನಾಯಂಡಹಳ್ಳಿ ಜಂಕ್ಷನ್‌ ಬಳಿಕ ರಾಜಕಾಲುವೆ ಹೂಳು ತೆರವು ಪರಿಶೀಲನೆ, ಜೆ.ಪಿ.ನಗರದ ರಾಗಿಗುಡ್ಡ ಜಂಕ್ಷನ್‌ ವೀಕ್ಷಣೆ, ಅನುಗ್ರಹ ಲೇಔಟ್‌ ನ ರಾಜಕಾಲುವೆ ಕಾಮಗಾರಿ, ಸಿಲ್ಕ್‌ ಬೋರ್ಡ್‌ ಜಂಕ್ಷನ್‌ ನ ರಾಜ ಕಾಲುವೆ ಕಾಮಗಾರಿ, ಯೆಮಲೂರು ಬಳಿಕ ರಾಜಕಾಲುವೆ ಕಾಮಗಾರಿ ವೀಕ್ಷಣೆ ಮಾಡಿದ ರೆ.

 

Previous Post
ಆರ್ಟಿಕಲ್ 370 ರದ್ದು, ಸರ್ಕಾರದ ಪರ ಸುಪ್ರೀಂಕೋರ್ಟ್ ಆದೇಶ, ಆದೇಶ ಮರುಶೀಲನೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ
Next Post
ಮೋದಿ ಬದುಕಿರುವವರೆಗೂ ಓಬಿಸಿ ಮೀಸಲಾತಿ ಕಸಿದುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ: ಪ್ರಧಾನಿ

Recent News