ಸ್ಥಾಪಿತ ಸರ್ಕಾರವನ್ನು ಉರುಳಿಸುವ ಹಿಂದೆ ವಿದೇಶಿ ಕೈವಾಡ ಇದಿಯೇ? ಸರ್ವಪಕ್ಷ ಸಭೆಯಲ್ಲಿ ರಾಹುಲ್ ಗಾಂಧಿ ಪ್ರಶ್ನೆ

ಸ್ಥಾಪಿತ ಸರ್ಕಾರವನ್ನು ಉರುಳಿಸುವ ಹಿಂದೆ ವಿದೇಶಿ ಕೈವಾಡ ಇದಿಯೇ? ಸರ್ವಪಕ್ಷ ಸಭೆಯಲ್ಲಿ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಬಾಂಗ್ಲಾದೇಶದಲ್ಲಿ ನಡೆದ ಕ್ಷಿಪ್ರ ಕ್ರಾಂತಿ ಸಂಬಂಧ ಇಂದು ವಿದೇಶಾಂಗ ಸಚಿವ ಎಸ್‌ ಜೈಶಂಕರ್‌ ಅವರು ಸರ್ವಪಕ್ಷ ಸಭೆ ನಡೆಸಿದರು. ಈ ಸಭೆಯಲ್ಲಿ ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು ಮೂರು ಪ್ರಶ್ನೆಗಳನ್ನು ಕೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸ್ಥಾಪಿತ ಸರ್ಕಾರವನ್ನು ಉರುಳಿಸುವ ಹಿಂದೆ ವಿದೇಶಿ ಕೈವಾಡ ಇದ್ಯಾ? ಪಾಕ್‌ ಪಾತ್ರದ ಬಗ್ಗೆ ಪ್ರಶ್ನೆ ಕೇಳಿದ್ದಾರೆ. ಇದಕ್ಕೆ ಜೈಶಂಕರ್‌, ವಿದೇಶಿ ಪಿತೂರಿಯ ಬಗ್ಗೆ ಈಗ ಏನು ಹೇಳಲು ಸಾಧ್ಯವಿಲ್ಲ. ಹಾಗೆಂದ ಮಾತ್ರಕ್ಕೆ ಆರೋಪವನ್ನು ತಳ್ಳಿ ಹಾಕಲು ಆಗುವುದಿಲ್ಲ. ಪಾಕಿಸ್ತಾನದ ರಾಜತಾಂತ್ರಿಕ ಅಧಿಕಾರಿ ಸಾಮಾಜಿಕ ಜಾಲತಾಣದಲ್ಲಿ ಬಾಂಗ್ಲಾದೇಶದ ಆಂದೋಲನವನ್ನು ಬೆಂಬಲಿಸುವ ಪ್ರೊಫೈಲ್‌ ಚಿತ್ರ ಹಾಕಿದ್ದಾರೆ ಎಂದು ತಿಳಿಸಿರುವುದಾಗಿ ಮೂಲಗಳು ತಿಳಿಸಿವೆ. ಢಾಕಾದಲ್ಲಿನ ಅಧಿಕಾರ ಬದಲಾವಣೆಯ ರಾಜತಾಂತ್ರಿಕ ಪರಿಣಾಮಗಳನ್ನು ಎದುರಿಸಲು ಸರ್ಕಾರದ ಅಲ್ಪಾವಧಿಯ ಮತ್ತು ದೀರ್ಘಾವಧಿಯ ಕಾರ್ಯತಂತ್ರ ಏನು ಎಂಬ ಪ್ರಶ್ನೆಗೆ ಸದ್ಯ ಈಗ ಅಲ್ಲಿ ಹಲವು ವಿದ್ಯಮಾನಗಳು ನಡೆಯುತ್ತಿದೆ. ಕೇಂದ್ರವು ತನ್ನ ಮುಂದಿನ ನಡೆಯನ್ನು ಉತ್ತಮಗೊಳಿಸಲು ನಡೆಯುತ್ತಿರುವ ವಿದ್ಯಮಾನಗಳನ್ನು ಸೂಕ್ಷ್ಮವಾಗಿ ವಿಶ್ಲೇಷಿಸುತ್ತಿದೆ ಎಂದು ಸಚಿವರು ಉತ್ತರಿಸಿದರು. ಬಾಂಗ್ಲಾದೇಶದಲ್ಲಿ ಈ ಸಮಸ್ಯೆ ಹೇಗೆ ವ್ಯಾಪಿಸಿದೆ ಮತ್ತು ದೇಶದ ಪರಿಸ್ಥಿತಿಯ ಬಗ್ಗೆ ಜೈಶಂಕರ್ ನಾಯಕರಿಗೆ ವಿವರಿಸಿದರು. ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಕ್ ಹಸೀನಾ ಭಾರತಕ್ಕೆ ಹೇಗೆ ಆಗಮಿಸಿದರು? ಈಗ ಶೇಕ್ ಹಸೀನಾ ಅವರನ್ನು ಭಾರತ ಹೇಗೆ ನೋಡಿಕೊಳ್ಳುತ್ತಿದೆ ಎಂಬುದರ ಕುರಿತು ಅವರು ಮಾಹಿತಿ ನೀಡಿದರು.
ಸರ್ವಪಕ್ಷಗಳ ಸಭೆಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ್ ಖರ್ಗೆ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿ ಪ್ರಮುಖ ಪಕ್ಷದ ನಾಯಕರು ಉಪಸ್ಥಿತರಿದ್ದರು.

Previous Post
ಶ್ರಮದಿಂದ ಬದುಕು ಕಟ್ಟಿಕೊಂಡ ಗಾಣಿಗ ಸಮುದಾಯ: ಡಿಸಿಎಂ ಡಿ.ಕೆ.ಶಿವಕುಮಾರ್
Next Post
30 ಸಾವಿರ ಬಿದಿರು ಸಸಿ ನೆಡುವ ಅಭಿಯಾನಕ್ಕೆ ಈಶ್ವರ ಖಂಡ್ರೆ ಚಾಲನೆ

Recent News