100 ಕೋಟಿ ಕಿಕ್‌ಬ್ಯಾಕ್‌ಗೆ ಬೇಡಿಕೆ ಇಟ್ಟಿದ್ದಕ್ಕೆ ಸಾಕ್ಷಿ ಇದೆ ವಿಚಾರಣೆ ವೇಳೆ ಇಡಿ ಪರ ವಕೀಲರ ಹೇಳಿಕೆ | ಕೇಜ್ರಿವಾಲ್ ನ್ಯಾಯಂಗ ಬಂಧನ ವಿಸ್ತರಣೆ

100 ಕೋಟಿ ಕಿಕ್‌ಬ್ಯಾಕ್‌ಗೆ ಬೇಡಿಕೆ ಇಟ್ಟಿದ್ದಕ್ಕೆ ಸಾಕ್ಷಿ ಇದೆ ವಿಚಾರಣೆ ವೇಳೆ ಇಡಿ ಪರ ವಕೀಲರ ಹೇಳಿಕೆ | ಕೇಜ್ರಿವಾಲ್ ನ್ಯಾಯಂಗ ಬಂಧನ ವಿಸ್ತರಣೆ

ನವದೆಹಲಿ : ಹೊಸ ಅಬಕಾರಿ ನೀತಿಯಲ್ಲಿ ಇಡಿಯಿಂದ ಬಂಧನಕ್ಕೊಳಪಟ್ಟಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಂಗ ಬಂಧನವನ್ನು ಜುಲೈ 3 ವರೆಗೂ ವಿಸ್ತರಿಸಿ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಆದೇಶ ಹೊರಡಿಸಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಮುಖ್ಯಮಂತ್ರಿ ಕೇಜ್ರಿವಾಲ್ ಅವರನ್ಮು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ಇದಕ್ಕೂ ಮುನ್ನ ಇಡಿ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ.ರಾಜು, ಮದ್ಯ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ 100 ಕೋಟಿ ರೂಪಾಯಿ ಕಿಕ್‌ಬ್ಯಾಕ್‌ಗೆ ಬೇಡಿಕೆ ಇಟ್ಟಿದ್ದಕ್ಕೆ ಇಡಿ ಬಳಿ ಸಾಕ್ಷ್ಯವಿದೆ ಎಂದು ಹೇಳಿದರು. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿಯ ಮಾಜಿ ಸಚಿವ ಮನೀಶ್ ಸಿಸೋಡಿಯಾ ಸೇರಿದಂತೆ ಸಹ ಆರೋಪಿಗಳ ಜಾಮೀನು ಅರ್ಜಿಯನ್ನು ತಿರಸ್ಕರಿಸಿರುವುದು ನ್ಯಾಯಾಲಯವು ಅಕ್ರಮ ಹಣ ವರ್ಗಾವಣೆಯ ಆರೋಪವನ್ನು ಸ್ವೀಕರಿಸುತ್ತಿದೆ ಎಂಬುದನ್ನು ತೋರಿಸುತ್ತದೆ ಎಂದು ಅವರು ಹೇಳಿದರು.

ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆಯಾಗಿದೆ ಎಂದು ಸಿಬಿಐ ತನಿಖೆಯಿಂದ ತಿಳಿದು ಬಂದಿದೆ. ಕೇಜ್ರಿವಾಲ್ ಅವರು 100 ಕೋಟಿ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಸಿಬಿಐ ತನಿಖೆಯಿಂದ ತಿಳಿದುಬಂದಿದೆ. ನಾವು ಬಂಧನಕ್ಕೂ ಮುನ್ನವೇ ಸಾಕ್ಷ್ಯವನ್ನು ಸಂಗ್ರಹಿಸಿದ್ದೇವೆ ಎಂದು ಇಡಿ ಪ್ರತಿನಿಧಿಸಿದ ಎಎಸ್‌ಜಿ ರಾಜು ಹೇಳಿದರು.

ಪ್ರತಿವಾದ ಮಂಡಿಸಿದ ಕೇಜ್ರಿವಾಲ್ ಪರ ವಕೀಲ ವಿಕ್ರಮ್ ಚೌಧರಿ, ಪಿಎಂಎಲ್‌ಎ ಅಡಿಯಲ್ಲಿ ಸಲ್ಲಿಸಲಾದ ಯಾವುದೇ ಆರೋಪಪಟ್ಟಿಯಲ್ಲಿ ಅರವಿಂದ್ ಕೇಜ್ರಿವಾಲ್ ಹೆಸರಿಲ್ಲ. ಸಿಬಿಐ ದಾಖಲಿಸಿರುವ ಎಫ್‌ಐಆರ್‌ನಲ್ಲಿಯೂ ಕೇಜ್ರಿವಾಲ್ ಅವರನ್ನು ಆರೋಪಿ ಎಂದು ಹೆಸರಿಸಿಲ್ಲ, ಇಡಿ ಯಾವುದೇ ಆರೋಪಗಳನ್ನು ಮಾಡುತ್ತಿದ್ದರೂ, ಅವರು ಪಿಎಂಎಲ್‌ಎ ಅಡಿಯಲ್ಲಿ ವಿಚಾರಣೆ ನಡೆಸುತ್ತಿಲ್ಲ ಆದರೆ ಸಿಬಿಐ ಪ್ರಕರಣದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ತೋರುತ್ತದೆ ಎಂದು ಅವರು ಹೇಳಿದರು.

Previous Post
ತಾಪಮಾನ ಏರಿಕೆ: ಮಕ್ಕಾದಲ್ಲಿ 550 ಸಾವು
Next Post
ರಾಹುಲ್ ಗಾಂಧಿ ಜನ್ಮದಿನ ಹಿನ್ನಲೆ ಯೂಥ್ ಕಾಂಗ್ರೇಸ್‌ನಿಂದ ನಿರ್ಗತಿಕರಿಗೆ ಕೂಲರ್ ವಿತರಣೆ

Recent News