17ನೇ ಲೋಕಸಭೆ ವಿಸರ್ಜನೆಗೆ ಶಿಫಾರಸು; ಪ್ರಧಾನ ಮಂತ್ರಿ’ ಸ್ಥಾನಕ್ಕೆ ‘ನರೇಂದ್ರ ಮೋದಿ’ ರಾಜೀನಾಮೆ: ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಗೀಕಾರ

17ನೇ ಲೋಕಸಭೆ ವಿಸರ್ಜನೆಗೆ ಶಿಫಾರಸು; ಪ್ರಧಾನ ಮಂತ್ರಿ’ ಸ್ಥಾನಕ್ಕೆ ‘ನರೇಂದ್ರ ಮೋದಿ’ ರಾಜೀನಾಮೆ: ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಗೀಕಾರ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಭವನದಲ್ಲಿ ಭೇಟಿಯಾದರು. ಪ್ರಧಾನ ಮಂತ್ರಿಯವರು ಕೇಂದ್ರ ಮಂತ್ರಿಮಂಡಲದ ಜೊತೆಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದರು.ರಾಷ್ಟ್ರಪತಿಗಳು ರಾಜೀನಾಮೆಯನ್ನು ಅಂಗೀಕರಿಸಿದರು ಮತ್ತು ಹೊಸ ಸರ್ಕಾರ ರಚನೆಯಾಗುವವರೆಗೆ ಅಧಿಕಾರದಲ್ಲಿ ಮುಂದುವರಿಯಲು ಪ್ರಧಾನಿ ಮತ್ತು ಕೇಂದ್ರ ಸಚಿವ ಸಂಪುಟವನ್ನು ವಿನಂತಿಸಿದರು ಎಂದು ರಾಷ್ಟ್ರಪತಿ ಭವನ ತಿಳಿಸಿದೆ.  ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ಒಂದು ದಿನದ ನಂತರ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ 17ನೇ ಲೋಕಸಭೆಯನ್ನು ವಿಸರ್ಜಿಸಲು ಶಿಫಾರಸು ಮಾಡಿದೆ. ಆ ಬಳಿಕ ಪ್ರಧಾನಿ ನರೇಂದ್ರ ಮೋದಿಯವರು ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾಗಿ, 17ನೇ ಲೋಕಸಭೆ ವಿಸರ್ಜನೆಗೆ ಶಿಫಾರಸ್ಸು ಮಾಡಿದರು. ಮೂಲಗಳ ಪ್ರಕಾರ, ಸಂಭಾವ್ಯ “ಕಿಂಗ್ ಮೇಕರ್ಸ್” ತೆಲುಗು ದೇಶಂ ಪಕ್ಷ (ಟಿಡಿಪಿ) ಮತ್ತು ಜನತಾದಳ-ಯುನೈಟೆಡ್ (ಜೆಡಿಯು) ಹಸಿರು ನಿಶಾನೆ ತೋರಿದ್ದರಿಂದ, ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) ಸರ್ಕಾರ ರಚನೆ ಮತ್ತು ಪ್ರಧಾನಿ ಮೋದಿಯವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಜೂನ್ 8 ರಂದು ನಡೆಯುವ ಸಾಧ್ಯತೆಯಿದೆ. ಮೈತ್ರಿಯ ಸಭೆಯಲ್ಲಿ ಎರಡೂ ಪಕ್ಷಗಳು ಬಿಜೆಪಿಗೆ ಔಪಚಾರಿಕ ಬೆಂಬಲ ಪತ್ರಗಳನ್ನು ಸಲ್ಲಿಸುವ ನಿರೀಕ್ಷೆಯಿದೆ.

ಲೋಕಸಭಾ ಚುನಾವಣೆಯ ಫಲಿತಾಂಶದ ಪ್ರಕಾರ, ಭಾರತದ ಚುನಾವಣಾ ಆಯೋಗವು 543 ಲೋಕಸಭಾ ಕ್ಷೇತ್ರಗಳ ಪೈಕಿ 542 ಕ್ಷೇತ್ರಗಳಿಗೆ ಫಲಿತಾಂಶಗಳನ್ನು ಪ್ರಕಟಿಸಿದ್ದು, ಬಿಜೆಪಿ 240 ಸ್ಥಾನಗಳನ್ನು ಮತ್ತು ಕಾಂಗ್ರೆಸ್ 99 ಸ್ಥಾನಗಳನ್ನು ಗೆದ್ದಿದೆ. ಈ ಪ್ರಧಾನಿ ನರೇಂದ್ರ ಮೋದಿ ಮೂರನೇ ಅವಧಿಗೆ ಅಧಿಕಾರ ವಹಿಸಿಕೊಳ್ಳೋದಕ್ಕೆ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಮತ್ತು ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಬೆಂಬಲ ಘೋಷಿಸಿದ್ದಾರೆ.2024 ರ ಲೋಕಸಭಾ ಚುನಾವಣೆಯಲ್ಲಿ ಚಲಾವಣೆಯಾದ ಮತಗಳನ್ನು ಎಣಿಕೆ ಮಾಡಿದ ನಂತರ ಬಿಜೆಪಿ 272 ಬಹುಮತಕ್ಕೆ 32 ಸ್ಥಾನಗಳ ಕೊರತೆಯನ್ನು ಅನುಭವಿಸಿದೆ. 2014 ರಲ್ಲಿ ಭಾರತೀಯ ಜನತಾ ಪಕ್ಷ ಅಧಿಕಾರಕ್ಕೆ ಬಂದ ನಂತರ ಮೊದಲ ಬಾರಿಗೆ, ಅದು ತನ್ನದೇ ಆದ ಬಹುಮತವನ್ನು ಪಡೆಯಲಿಲ್ಲ.

Previous Post
ಉತ್ತರ ಪ್ರದೇಶದಲ್ಲಿ ಇತಿಹಾಸ ಬರೆದ ಭೀಮ್ ಆರ್ಮಿ ಸಂಸ್ಥಾಪಕ ಚಂದ್ರಶೇಖರ್ ಆಜಾದ್
Next Post
ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ಮಹತ್ವ ಸಭೆ ನಡೆಸಿತು.

Recent News