2014 ರಿಂದ ದಾಖಲಾದ ಒಟ್ಟು ಇ.ಡಿ ಪ್ರಕರಣಗಳಲ್ಲಿ ಶೇ.95 ವಿಪಕ್ಷಗಳ ನಾಯಕರ ಮೇಲಿನವು: ಸಿದ್ದರಾಮಯ್ಯ

2014 ರಿಂದ ದಾಖಲಾದ ಒಟ್ಟು ಇ.ಡಿ ಪ್ರಕರಣಗಳಲ್ಲಿ ಶೇ.95 ವಿಪಕ್ಷಗಳ ನಾಯಕರ ಮೇಲಿನವು: ಸಿದ್ದರಾಮಯ್ಯ

ಬೆಂಗಳೂರು, ಫೆಬ್ರವರಿ 02: ಸಿಬಿಐ, ಐಟಿ, ಇಡಿ ಗಳು ಈಗ ಸ್ವಾಯತ್ತ ಸಂಸ್ಥೆಗಳಾಗಿ ಉಳಿದಿಲ್ಲ, ಬಿಜೆಪಿ ಪಕ್ಷದ ಅಂಗಸಂಸ್ಥೆಗಳಂತೆ ಕಾರ್ಯನಿರ್ವಹಿಸುತ್ತಿವೆ ಎಂಬುದಕ್ಕೆ ಕಳೆದ ಹತ್ತು ವರ್ಷಗಳಲ್ಲಿ ವಿಪಕ್ಷ ನಾಯಕರ ಮೇಲೆ ನಡೆದ ಇಡಿ ( ಜಾರಿ ನಿರ್ದೇಶನಾಲಯ ) ದಾಳಿ ಸಾಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದು, 2014 ರಿಂದ ದಾಖಲಾದ ಒಟ್ಟು ಇ.ಡಿ ಪ್ರಕರಣಗಳಲ್ಲಿ ಶೇ.95 ವಿಪಕ್ಷಗಳ ನಾಯಕರ ಮೇಲಿನವು. ಬಿಜೆಪಿ ಸರ್ಕಾರ ಸ್ವಾರ್ಥ ರಾಜಕೀಯದ ಮೇರೆ ಮೀರಿದೆ. ವಿಪಕ್ಷಗಳು ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸೆಣಬೇಕಿರುವುದು ಮಾತ್ರವಲ್ಲ ಐಟಿ, ಸಿಬಿಐ, ಇಡಿ ಸಂಸ್ಥೆಗಳ ವಿರುದ್ಧವೂ ಹೋರಾಡಬೇಕಾದ ಅನಿವಾರ್ಯತೆ ಬಂದಿದೆ. ಬಿಜೆಪಿ ಆಡಳಿತದಲ್ಲಿ ದೇಶದ ಸಂವಿಧಾನ, ಪ್ರಜಾಪ್ರಭುತ್ವ ಅವಸಾನದ ಹಾದಿಗೆ ಸರಿಯುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

Previous Post
ED ವಿರುದ್ಧ ಸಲ್ಲಿಸಿದ್ದ ಸೊರೇನ್ ಅರ್ಜಿ ವಜಾ
Next Post
ಜಾರ್ಖಂಡ್‌ನಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ

Recent News