2024-25ನೇ ಸಾಲಿನ ರಾಜ್ಯ ಬಜೆಟ್ ಅನ್ನು ಮಂಡಿಸೋದಕ್ಕೆ ಮುಹೂರ್ತ ಫಿಕ್ಸ್ ಆಗಿದೆ.

2024-25ನೇ ಸಾಲಿನ ರಾಜ್ಯ ಬಜೆಟ್ ಅನ್ನು ಮಂಡಿಸೋದಕ್ಕೆ ಮುಹೂರ್ತ ಫಿಕ್ಸ್ ಆಗಿದೆ.

ಬೆಂಗಳೂರು: 2024-25ನೇ ಸಾಲಿನ ರಾಜ್ಯ ಬಜೆಟ್ ಅನ್ನು ಮಂಡಿಸೋದಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಫೆಬ್ರವರಿ ತಿಂಗಳಲ್ಲೇ ರಾಜ್ಯ ಬಜೆಟ್ ಮಂಡನೆ ಮಾಡೋದಾಗಿ ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ.ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮಾರ್ಚ್ ಮೊದಲ ವಾರದೊಳಗೆ ಚುನಾವಣಾ ನೀತಿ ಸಂಹಿತೆ ಘೋಷಣೆಯಾಗುವುದರಿಂದ ಫೆಬ್ರವರಿ ತಿಂಗಳಲ್ಲಿಯೇ ಬಜೆಟ್ ಮಂಡಿಸಲಾಗುವುದು ಎಂದರು.ಕೇಂದ್ರ ಸರ್ಕಾರದಿಂದ ಪರಿಹಾರ ಬಂದ ನಂತರ ರೈತರಿಗೆ ಪುನಃ ಪರಿಹಾರರೈತರರಿಗೆ ಪರಿಹಾರ ನೀಡಿಲ್ಲವೆಂದು ಪ್ರತಿಭಟನೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ರೈತರಿಗೆ 2000 ರೂ.ಗಳ ತಾತ್ಕಾಲಿಕ ಪರಿಹಾರವನ್ನು ನೀಡುತ್ತಿದ್ದು ಕೇಂದ್ರ ಸರ್ಕಾರದಿಂದ ಪರಿಹಾರ ಬಂದ ನಂತರ ಪುನಃ ಎನ್.ಡಿ.ಆರ್.ಎಫ್ ನಿಯಮಾವಳಿ ಗಳ ಪ್ರಕಾರ ಪರಿಹಾರ ನೀಡಲಾಗುವುದು ಎಂದರು.ಅನಂತಕುಮಾರ್ ಹೆಗಡೆಯವರು ಏಕವಚನದಲ್ಲಿ ಮಾತನಾಡುವುದನ್ನು ಕಲಿಸಿದ್ದೇ ಸಿದ್ದರಾಮಯ್ಯ ಅವರು ಎಂದು ಸಮರ್ಥಿಸಿಕೊಂಡಿದ್ದಾರೆ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿ ಅವರು ರಾಜಕೀಯವಾಗಿ ಆರೋಪ ಮಾಡುತ್ತಾರೆ. ಅನಂತ ಕುಮಾರ್ ಹೆಗಡೆ ಅವರು ಇವತ್ತಿನವರೆಗೆ ನಾಪತ್ತೆಯಾಗಿದ್ದರು. ಚುನಾವಣೆ ಹತ್ತಿರ ಬಂದಂತೆ ಕಾಣಿಸಿಕೊಂಡು ಹೇಳಿಕೆ ನೀಡಿದ್ದಾರೆ. ಸಂಸದರಾಗಿ ಮಾಜಿ ಮಂತ್ರಿಯಾಗಿ ಕ್ಷೇತ್ರ ಕ್ಕೆ ಏನಾದರೂ ಮಾಡಿದ್ದಾರೆಯೇ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ಇಂದಿನವರೆಗೆ ಬಡವರ ಸಮಸ್ಯೆ ಕೇಳಿದ್ದಾರೆಯೇ? ಸಂಸ್ಕೃತಿ ಎಂದರೆ ಮನುಷ್ಯತ್ವ. ಮೊದಲು ಮನುಷ್ಯ ತ್ವ ಇರಬೇಕು ಎಂದರು.

Previous Post
ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ
Next Post
ನಗರದಲ್ಲಿ ಜನವರಿ 19ರಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಿಗದಿ ಪಡಿಸಲಾಗಿದೆ.

Recent News