23-  50 ವರ್ಷ ಮೇಲ್ಪಟ್ಟ ಶಿಕ್ಷಕರ ವರ್ಗಾವಣೆ ಮಾಡುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಖಡಕ್‌ ಆದೇಶ ಹೊರಡಿಸಿದೆ

23-  50 ವರ್ಷ ಮೇಲ್ಪಟ್ಟ ಶಿಕ್ಷಕರ ವರ್ಗಾವಣೆ ಮಾಡುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಖಡಕ್‌ ಆದೇಶ ಹೊರಡಿಸಿದೆ

ಬೆಂಗಳೂರು,ಜು. 23-  50 ವರ್ಷ ಮೇಲ್ಪಟ್ಟ ಶಿಕ್ಷಕರ ವರ್ಗಾವಣೆ ಮಾಡುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಖಡಕ್‌ ಆದೇಶ ಹೊರಡಿಸಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ (ಕೆಎಸ್‌ಎಟಿ) ಆದೇಶವನ್ನು ಎತ್ತಿ ಹಿಡಿದಿದ್ದು, ಇನ್ನು ಮುಂದೆ 50 ವರ್ಷ ಮೇಲ್ಪಟ್ಟ ಶಿಕ್ಷಕರನ್ನು ವರ್ಗಾವಣೆ ಮಾಡುವಂತಿಲ್ಲ ಎಂದು ಸೂಚಿಸಿದೆ.ಕೆಎಟಿ ಆದೇಶ ಪ್ರಶ್ನಿಸಿ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಜಾಗೊಳಿಸಿರುವ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಎಸ್‌.ಜಿ.ಪಂಡಿತ್‌ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಅಲ್ಲದೇ, ನಿಯಮಗಳಲ್ಲಿ ವರ್ಗಾವಣೆ ಮಾಡುವುದಕ್ಕೆ ವಿನಾಯ್ತಿ ಇದ್ದಾಗ ಅವರು ಅರ್ಜಿ ಸಲ್ಲಿಸಲಿ ಅಥವಾ ಬಿಡಲಿ, ಆ ನಿಯಮವನ್ನು ಅಧಿಕಾರಿಗಳು ಜಾರಿಗೊಳಿಸಬೇಕು ಎಂದು ಪೀಠ ತಿಳಿಸಿದೆ.ಪೀಠವು ಮಹಿಳಾ ಶಿಕ್ಷಕರಾಗಿರುವ ಅರ್ಜಿದಾರರು (ನ್ಯಾಯಮಂಡಳಿಯ ಮುಂದೆ ಶಿಕ್ಷಕರು) 50 ವರ್ಷಗಳನ್ನು ದಾಟಿದ್ದಾರೆ ಮತ್ತು ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ (ನಿಯಂತ್ರಣ) ಸೆಕ್ಷನ್ 10 (1) (vi) ಪ್ರಯೋಜನಕ್ಕೆ ಅರ್ಹರಾಗಿದ್ದಾರೆ. ಶಿಕ್ಷಕರ ವರ್ಗಾವಣೆ ಕಾಯಿದೆ), 2020. ಅವರನ್ನು ಹೆಚ್ಚುವರಿ ಎಂದು ಘೋಷಿಸಲು ಸಾಧ್ಯವಿಲ್ಲ ಮತ್ತು ವರ್ಗಾವಣೆ ಆದೇಶವನ್ನು ನೀಡುವಂತಿಲ್ಲ. ಕಾಯ್ದೆಯ ಸೆಕ್ಷನ್ 10 (1) (vi)ಯ ಶಾಸನಬದ್ಧ ನಿಬಂಧನೆಯು ಉದ್ಯೋಗಿ ಶಿಕ್ಷಕರಿಗೆ ಆಡಳಿತ ಮತ್ತು ಪ್ರಯೋಜನವನ್ನು ಪಡೆಯುವ ಹಕ್ಕಾಗಿರುತ್ತದೆ ಎಂದಿದ್ದಾರೆ. ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ (ಶಿಕ್ಷಕರ ವರ್ಗಾವಣೆ ನಿಯಂತ್ರಣ) ಕಾಯ್ದೆ 2020 ಮತ್ತು ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ (ಶಿಕ್ಷಕರ ವರ್ಗಾವಣೆ ನಿಯಂತ್ರಣ) ನಿಯಮಗಳು 2020 ರ ನಿಬಂಧನೆಗಳ ಅಡಿಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೆಚ್ಚುವರಿ ಶಿಕ್ಷಕರನ್ನು ಹೆಚ್ಚುವರಿ ಎಂದು ಗುರುತಿಸಿ ವರ್ಗಾವಣೆ ಮಾಡುವ ಮೂಲಕ ಸರ್ಕಾರಿ ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೆಚ್ಚುವರಿ ಶಿಕ್ಷಕರನ್ನು ತರ್ಕಬದ್ಧಗೊಳಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ದಿನಾಂಕ 26.12.2022 ರಂದು ಅಧಿಸೂಚನೆ ಹೊರಡಿಸಿದ್ದರು.ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಬೂದಿಹಾಳದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಉಮಾದೇವಿ ಹುಂಡೇಕರ್‌(55) ಮತ್ತು ಬೀಳಗಿ ತಾಲೂಕಿನ ತೆಗ್ಗಿ ಗ್ರಾಮದ ಪ್ರಭಾವತಿ ರೋಣದ್‌(58) ಅವರನ್ನು ಹೆಚ್ಚುವರಿ ಶಿಕ್ಷಕರು ಎಂದು ಪರಿಗಣಿಸಿ, ಸಾರ್ವಜನಿಕ ಶಿಕ್ಷಣ ಇಲಾಖೆ 2022ರ ಡಿಸೆಂಬರ್ 26ರಂದು ಆದೇಶ ಹೊರಡಿಸಿತ್ತು.ಅದರೆ, ಅರ್ಜಿದಾರರ ಶಿಕ್ಷಕರು, ನಿಯಮದ ಪ್ರಕಾರ ತಮಗೆ 50 ವರ್ಷ ಮೇಲ್ಪಟ್ಟ ವಯಸ್ಸಾಗಿದೆ, ವರ್ಗಾವಣೆಗೆ ವಿನಾಯ್ತಿ ಇದೆ ಎಂದು ಆಕ್ಷೇಪ ಸಲ್ಲಿಸಿದ್ದರು. ಆದರೆ, ಅದನ್ನು ಪರಿಗಣಿಸದೇ, ಇಬ್ಬರನ್ನೂ ಸಹ ವರ್ಗಾವಣೆ ಮಾಡಲಾಗಿತ್ತು. ಹಾಗಾಗಿ, ಅವರು ಕೆಎಟಿ ಮೊರೆ ಹೋಗಿದ್ದರು. ವರ್ಗಾವಣೆ ಆದೇಶವನ್ನು ಕೆಎಟಿ ರದ್ದುಪಡಿಸಿದ್ದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು.

Previous Post
ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಬಜೆಟ್ನಲ್ಲಿ ಪ್ರಥಮ ಆದ್ಯತೆಯನ್ನಾಗಿ ಕೃಷಿ ಉತ್ಪಾದನೆ ಹಾಗೂ ಸ್ಥಿತಿಸ್ಥಾಪಕತ್ವವನ್ನು ಪರಿಗಣಿಸಿದ್ದಾರೆ
Next Post
‘ಆಭರಣ ಪ್ರಿಯ’ರಿಗೆ ಸಂತಸದ ಸುದ್ದಿ: ಚಿನ್ನ, ಬೆಳ್ಳಿ ಬೆಲೆಯಲ್ಲಿ 4,000 ರೂ.ವರೆಗೆ ಇಳಿಕೆ

Recent News