40% ಕಮಿಷನ್​ ಆರೋಪ; ಸಿಎಂ-ಡಿಸಿಎಂಗೆ ಜಾಮೀನು ಮಂಜೂರು

40% ಕಮಿಷನ್​ ಆರೋಪ; ಸಿಎಂ-ಡಿಸಿಎಂಗೆ ಜಾಮೀನು ಮಂಜೂರು

ಬೆಂಗಳೂರು: 2022ರಲ್ಲಿ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್​ ಆರೋಪ ಮಾಡಿ ಜಾಹೀರಾತು ಪ್ರಕಟಿಸಿದ್ದಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.ಈ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿ ಕಾಂಗ್ರೆಸ್ ಜಾಹೀರಾತು ಪ್ರಕಟಿಸಿತ್ತು.ಹೀಗಾಗಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಮಾನನಷ್ಟ ಮೊಕದ್ದಮೆ ಹೂಡಿತ್ತು. ಬಿಜೆಪಿ ಕೇಸಿನ ಹಿನ್ನೆಲೆ ಇಂದು ಸಿಎಂ ಮತ್ತು ಡಿಸಿಎಂ ವಿಚಾರಣೆಗೆ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರಾಗಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.2023ರಲ್ಲಿ ನಡೆದ ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್​ ಭ್ರಷ್ಟಾಚಾರ ಆರೋಪವನ್ನು ಮಾಡಿತ್ತು. ಕಾಂಗ್ರೆಸ್ ವಿರುದ್ಧ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಕೇಶವ್ ಪ್ರಸಾದ್ ದೂರು ದಾಖಲಿಸಿದ್ದರು. ಪ್ರಕರಣ ಸಂಬಂಧ ಸಿಎಂ, ಡಿಸಿಎಂಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್​ ಜಾರಿ ಮಾಡಿತ್ತು.ಸಿಎಂ-ಡಿಸಿಎಂ ಪರ ಹೆಚ್ಚುವರಿ ಅಡ್ವೊಕೇಟ್ ಜನರಲ್ ಅಹಮ್ಮದ್ ವಾದ ಮಂಡಿಸಿದರು. ಬಿಜೆಪಿ ಪರ ವಕೀಲ ವಿನೋದ್​ ಕುಮಾರ್​ ವಾದ ಮಂಡಿಸಿದರು. ವಾದ-ಪ್ರತಿವಾದವನ್ನು ಆಲಿಸಿದ ಬಳಿಕ ನ್ಯಾಯಾಧೀಶರು ಸಿಎಂ-ಡಿಸಿಎಂಗೆ ಜಾಮೀನು ಮಂಜೂರು ಮಾಡಿದ್ದಾರೆ.

Previous Post
ನಾವು ಒಗ್ಗಟ್ಟಾಗಿದ್ದೇವೆ; ಒಗ್ಗಟ್ಟಾಗಿಯೇ ಇರುತ್ತೇವೆ: ‘ಇಂಡಿಯಾ’ ಸಭೆ ಬಳಿಕ ಖರ್ಗೆ
Next Post
ಇಂಡಿಯಾ’ ಮೈತ್ರಿಕೂಟಕ್ಕೆ 295ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲುವು: ಕೇಜ್ರಿವಾಲ್

Recent News