6 MLC ಸ್ಥಾನಗಳಿಗೆ ಚುನಾವಣೆ ಘೋಷಣೆ

6 MLC ಸ್ಥಾನಗಳಿಗೆ ಚುನಾವಣೆ ಘೋಷಣೆ

ನವದೆಹಲಿ, ಮೇ 2: ಕರ್ನಾಟಕ ವಿಧಾನ ಪರಿಷತ್ತಿನ ಆರು ಸ್ಥಾನಗಳಿಗೆ ಚುನಾವಣೆ ನಡೆಸಲು ಚುನಾವಣಾ ಆಯೋಗ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಜೂನ್ 3ರಂದು ಮತದಾನ ನಡೆಯಲಿದೆ. ಕರ್ನಾಟಕ ವಿಧಾನ ಪರಿಷತ್ತಿನ 3 ಶಿಕ್ಷಕರ ಕ್ಷೇತ್ರ ಮತ್ತು 3 ಪದವೀಧರ ಕ್ಷೇತ್ರಗಳಿಗೆ ಚುನಾವಣೆ ಘೋಷಿಸಲಾಗಿದೆ. ಜೂನ್ 3ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಜೂನ್ 6ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆಗೆ ಮೇ.16 ಕೊ‌ನೆಯ ದಿನವಾಗಿದ್ದು, ನಾಮಪತ್ರ ಪರಿಶೀಲನೆ ಪ್ರಕ್ರಿಯೆ ಮೇ.17ಕ್ಕೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಮೇ.20 ಕೊನೆಯ ದಿನವಾಗಿದೆ.

ಈಶಾನ್ಯ ಪದವೀಧರ, ನೈಋತ್ಯ ಪದವೀಧರ, ಬೆಂಗಳೂರು ಪದವೀಧರ, ಆಗ್ನೇಯ ಶಿಕ್ಷಕರ, ನೈರುತ್ಯ ಶಿಕ್ಷಕರ, ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ. ರಾಜ್ಯದ ಈಶಾನ್ಯ ಪದವೀಧರರ ಕ್ಷೇತ್ರದ ಡಾ.ಚಂದ್ರಶೇಖರ್‌ ಬಿ. ಪಾಟೀಲ್‌, ನೈರುತ್ಯ ಪದವೀಧರರ ಕ್ಷೇತ್ರದ ಆಯನೂರು ಮಂಜುನಾಥ್‌, ಬೆಂಗಳೂರು ಪದವೀಧರರ ಕ್ಷೇತ್ರದ ಎ.ದೇವೇಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರದ ವೈ.ಎ.ನಾರಾಯಣಸ್ವಾಮಿ, ನೈರುತ್ಯ ಶಿಕ್ಷಕರ ಕ್ಷೇತ್ರದ ಎಸ್‌.ಎಲ್‌.ಭೋಜೇಗೌಡ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರದ ಮರಿತಿಬ್ಬೇಗೌಡ ಅವರ ಅವಧಿ ಇದೇ ವರ್ಷ ಜೂನ್‌ 21ರಂದು ಕೊನೆಗೊಳ್ಳಲಿದೆ. ಈ ಹಿನ್ನೆಲೆ ವಿಧಾನಪರಿಷತ್‌ಗೆ ಚುನಾವಣೆಯನ್ನು ಘೋಷಿಸಲಾಗಿದೆ.

ಲೋಕಸಭೆ ಚುನಾವಣೆ ಹಿನ್ನೆಲೆ ಈಗಾಗಲೇ ಎರಡು ಹಂತಗಳ ಮತದಾನ ಪ್ರಕ್ರಿಯೆ ನಡೆದಿದೆ. ಕರ್ನಾಟಕದ 14 ಕ್ಷೇತ್ರಗಳಿಗೆ ಎರಡನೇ ಹಂತದ ಚುನಾವಣೆಯ ವೇಳೆ ಮತದಾನ ನಡೆದಿತ್ತು. ಮೇ 7ರಂದು ಮೂರನೇ ಹಂತದ ಚುನಾವಣೆ ನಡೆಯಲಿದೆ. ಈ ವೇಳೆ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

Previous Post
ಲೈಂಗಿಕ ಕಿರುಕುಳದ ಆರೋಪಿ ಬ್ರಿಜ್ ಭೂಷಣ್ ಮಗನಿಗೆ ಬಿಜೆಪಿ ಟಿಕೆಟ್
Next Post
ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ತಪ್ಪಿದ ಟಿಕೆಟ್

Recent News